Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂವಿಧಾನ ವಿರೋಧಿಸುವವರೇ ದೇಶದ್ರೋಹಿಗಳು:...

ಸಂವಿಧಾನ ವಿರೋಧಿಸುವವರೇ ದೇಶದ್ರೋಹಿಗಳು: ಬಿ.ಕೆ. ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ1 Aug 2021 3:26 PM IST
share
ಸಂವಿಧಾನ ವಿರೋಧಿಸುವವರೇ ದೇಶದ್ರೋಹಿಗಳು: ಬಿ.ಕೆ. ಹರಿಪ್ರಸಾದ್

ಮಂಗಳೂರು, ಆ.1: ದೇಶದ ಸಂವಿಧಾನ ರಚನೆಯಾದ ಬಳಿಕ ಮೇಲ್ವರ್ಗ, ಹಿಂದುಳಿದ ವರ್ಗ, ಕೆಳವರ್ಗದವರಿಗೆ ಸಮಾನ ಹಕ್ಕು ಬಂದಿದೆ. ಅಂತಹ ಸಂವಿಧಾನವನ್ನು ವಿರೋಧಿಸುವವರೇ ನಿಜವಾದ ದೇಶದ್ರೋಹಿಗಳು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.

ನಗರದ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಹಿಂದುಳಿದ ವರ್ಗಗಳ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ವಿಶ್ವಾಸ್ ಕುಮಾರ್‌ ದಾಸ್‌ರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ಬಳಿಕ ರಾಷ್ಟ್ರವು ಕವಲುದಾರಿಯಲ್ಲಿದೆ. ಸಂವಿಧಾನ ಬದಲಾವಣೆ ಮಾಡುವ ಹುನ್ನಾರ ನಡೆಯುತ್ತುದೆ. ಕೆಳವರ್ಗ, ಹಿಂದುಳಿದ ವರ್ಗವನ್ನು ತುಳಿಯಲಾಗುತ್ತಿದೆ. ನಮಗೆ ಯಾವತ್ತೂ ನಾಥೂರಾಂ ಗೋಡ್ಸೆಯ ಚಿಂತನೆ ಬೇಕಾಗಿಲ್ಲ. ಮಹಾತ್ಮಾಗಾಂಧಿಯ ಚಿಂತನೆ ಬೇಕಿದೆ. ಪ್ರತಿಯೊಬ್ಬ ಭಾರತೀಯನಿಗೆ ಸಂವಿಧಾನವೇ ಮುಖ್ಯವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ, ಅಧಿಕಾರ, ನ್ಯಾಯ ನೀಡುವ ಶಕ್ತಿ ಸಂವಿಧಾನಕ್ಕಿದೆ. ಇಂತಹ ಪವಿತ್ರ ಸಂವಿಧಾನವನ್ನು ರಾಷ್ಟ್ರಪ್ರೇಮ-ರಾಷ್ಟ್ರ ಭಕ್ತಿಯ ಹೆಸರಿನಲ್ಲಿ ಬದಲಾವಣೆ ಮಾಡಲು ಹೊರಟಿರುವುದು ಖಂಡನೀಯ ಎಂದ ಹರಿಪ್ರಸಾದ್, ಜಾತಿ-ಧರ್ಮದ ಹೆಸರಿನಲ್ಲಿ ಹಿಂದುಳಿದ ವರ್ಗದವರನ್ನು ಎತ್ತಿಕಟ್ಟಲಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸಂವಿಧಾನ ರಕ್ಷಣೆ ಮಾಡಿದರೆ ಮಾತ್ರ ಈ ರಾಷ್ಟ್ರಕ್ಕೆ ಉಜ್ವಲ ಭವಿಷ್ಯವಿದೆ. ಬಹುಸಂಖ್ಯಾತರಾಗಿರುವ ಹಿಂದುಳಿದ ವರ್ಗದವರು ತಮ್ಮ ನ್ಯಾಯ, ರಕ್ಷಣೆಗಾಗಿ ಸಂಘಟಿತರಾಗಬೇಕು ಎಂದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ ಬಿಜೆಪಿ ಹಿಂದುತ್ವ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ, ಕೇಂದ್ರದಲ್ಲಿ ಅಧಿಕಾರ ಪಡೆದಿದೆ. ಆದರೆ ಈಗ ಎಲ್ಲರೂ ಪಶ್ಚಾತ್ತಾಪ ಪಡುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರ ತರುವಲ್ಲಿ ಹಿಂದುಳಿದ ವರ್ಗದ ಸಂಘಟನಾತ್ಮಕ ಪಾತ್ರ ಹಿರಿದಾಗಿದೆ ಎಂದರು.

ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ಕುಮಾರ್‌ದಾಸ್, ಶಾಸಕ ಯು.ಟಿ. ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಮೊಯ್ದಿನ್ ಬಾವ, ಶಕುಂತಳಾ ಶೆಟ್ಟಿ, ಐವನ್ ಡಿಸೋಜ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಪಕ್ಷದ ಮುಖಂಡರಾದ ಸುರೇಶ್ ಬಲ್ಲಾಳ್, ಎ.ಸಿ. ಭಂಡಾರಿ, ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ಶಶಿಧರ್ ಹೆಗ್ಡೆ, ಜೋಕಿಂ ಡಿಸೋಜ, ಲಾರೆನ್ಸ್ ಡಿಸೋಜ, ರಾಜಶೇಖರ ಕೋಟ್ಯಾನ್, ಪ್ರಭಾಕರ ಶ್ರೀಯಾನ್, ಗಣೇಶ್ ಪೂಜಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X