ಸಂಧ್ಯಾ ಸುರಕ್ಷಾ ಪಿಂಚಣಿ ಹೆಚ್ಚಿಸಿ ಕಂದಾಯ ಇಲಾಖೆ ಆದೇಶ

ಬೆಂಗಳೂರು, ಆ. 1: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದ ನಿರ್ಧಾರದಂತೆ ಸಂಧ್ಯಾ ಸುರಕ್ಷಾ ಪಿಂಚಣಿ, ವಿಕಲಚೇತನರು ಮತ್ತು ವಿಧವೆಯರ ಮಾಸಾಶನ ಮೊತ್ತವನ್ನು ಹೆಚ್ಚಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಜು.28ರಂದು ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಂಪುಟ ಸಭೆ ನಡೆಸಿ, ಸಂಧ್ಯಾ ಸುರಕ್ಷಾ ಪಿಂಚಣಿಯನ್ನು 1 ಸಾವಿರ ರೂ.ನಿಂದ 1,200 ರೂ.ಗಳಿಗೆ, ಅಂಗವಿಕಲರು ಮತ್ತು ವಿಧವೆಯರ ಮಾಸಾಶನವನ್ನು 600 ರೂ.ನಿಂದ 800 ರೂ.ಗಳಿಗೆ ಹೆಚ್ಚಿಸುವ ನಿರ್ಧಾರ ಕೈಗೊಂಡಿದ್ದರು. ಮಾಸಾಶನ ಪರಿಷ್ಕರಿಸಿದ್ದು, ಆಗಸ್ಟ್ ತಿಂಗಳಿನಿಂದಲೇ ಪರಿಷ್ಕøತ ಮಾಸಾಶನ ಫಲಾನುಭವಿಗಳಿಗೆ ದೊರೆಯಲಿದೆ ಎಂದು ತಿಳಿಸಲಾಗಿದೆ.
Next Story





