Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.1ರಂದು ಕಟ್ಟಡ ಕಾರ್ಮಿಕ ಕಲ್ಯಾಣ...

ಸೆ.1ರಂದು ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಗೆ ಮುತ್ತಿಗೆ: ಮಹಾಂತೇಶ

'ಎಲ್ಲ ಖರೀದಿಗಳ ತನಿಖೆಗೆ ಆಗ್ರಹ, 10,000ಕ್ಕೂ ಅಧಿಕ ಕಾರ್ಮಿಕರು ಭಾಗಿ'

ವಾರ್ತಾಭಾರತಿವಾರ್ತಾಭಾರತಿ2 Aug 2021 7:52 PM IST
share
ಸೆ.1ರಂದು ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಗೆ ಮುತ್ತಿಗೆ: ಮಹಾಂತೇಶ

ಉಡುಪಿ, ಆ.1: ಶಾಸಕರುಗಳ ಕೈಗೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಆಹಾರ ಕಿಟ್ ನೀಡಿರುವುದನ್ನು ವಿರೋಧಿಸಿ ಹಾಗೂ ಆಹಾರ, ಟೂಲ್, ಸೇಫ್ಟಿ, ತಂತ್ರಾಂಶ ಖರೀದಿಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಸೆ.1ರಂದು ಬೆಂಗಳೂರಿನಲ್ಲಿ ಮಂಡಳಿಗೆ ಮುತ್ತಿಗೆ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಹಾಗೂ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್(ಸಿಐಟಿಯು) ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ, ರಾಜ್ಯ ವ್ಯಾಪಿಯಾಗಿ ಈಗಾಗಲೇ ಪ್ರತಿಭಟನೆಗಳು ಯಶಸ್ವಿಯಾಗಿದ್ದು, ಇದರ ಮುಂದುವರೆದ ಭಾಗವಾಗಿ ಈ ಹೋರಾಟ ನಡೆಸಲಾಗುತ್ತಿದೆ. ಇದರಲ್ಲಿ 10 ಸಾವಿರಕ್ಕೂ ಅಧಿಕ ಕಾರ್ಮಿಕರು ಪಾಲ್ಗೊಳ್ಳುವ ನಿರೀಕ್ಷೆ ಹೊಂದಲಾಗಿದೆ ಎಂದು ಹೇಳಿದರು.

50-60ಕೋ.ರೂ. ಭ್ರಷ್ಟಾಚಾರ

ಮಂಡಳಿಯು 250ರೂ. ಮೊತ್ತದ ಸೇಪ್ಟಿ ಕಿಟ್‌ಗೆ 600ರೂ. ಮತ್ತು 667ರೂ. ಮೌಲ್ಯದ ಆಹಾರ ಕಿಟ್‌ಗೆ 978 ರೂ. ಬಿಲ್ ಮಾಡಿದೆ. 5ಲಕ್ಷ ರೂ. ಆಹಾರ ಕಿಟ್ ವಿತರಿಸುವುದಾಗಿ ಹೇಳಿದ್ದ ಸರಕಾರ, ಇತ್ತೀಚಿಗಿನ ಜಾಹೀರಾತಿನಲ್ಲಿ 21ಲಕ್ಷ ಕಿಟ್ ಖರೀದಿಸಲಾಗಿದೆ ಎಂದು ತಿಳಿಸಿದೆ. ಈ ಎಲ್ಲ ಖರೀದಿಯಲ್ಲಿ ಒಟ್ಟು 50-60 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಅವರು ಆರೋಪಿಸಿದರು.

2006 ರಿಂದ 2021ರವರೆಗೆ ಮಂಡಳಿಯಲ್ಲಿ ಒಟ್ಟು 8400ಕೋಟಿ ರೂ. ಸೆಸ್ ಸಂಗ್ರಹವಾಗಿದ್ದು, ಇದರ ಬಡ್ಡಿ 2000 ಕೋಟಿ ರೂ. ಸೇರಿದಂತೆ ಒಟ್ಟು 10200 ಕೋಟಿ ರೂ. ಹಣ ಮಂಡಳಿಯಲ್ಲಿ ಇದೆ. ಇದು ನಿರ್ಮಾಣ ಮಾಲಕರು ಮಂಡಳಿಗೆ ನೀಡಿದ ಹಣವೇ ಹೊರತು ಸರಕಾರದಲ್ಲ. ಇಡೀ ದೇಶದಲ್ಲಿ ಒಟ್ಟು 30 ಮಂಡಳಿಗಳಿದ್ದು, ಇದರಲ್ಲಿ ಸುಮಾರು 90ಸಾವಿರ ಕೋಟಿ ರೂ. ಹಣ ಸಂಗ್ರಹವಾಗಿದೆ. ಈ ಹಣದ ಮೇಲೆ ಸರಕಾರ ಕಣ್ಣು ಹಾಕಿದೆ ಎಂದು ಅವರು ಟೀಕಿಸಿದರು.

ರಾಜ್ಯಮಟ್ಟದ ಸಭೆ ನಿರ್ಧಾರ

ಮಂಡಳಿ ಇತ್ತೀಚೆಗೆ 2668.90ಕೋಟಿ ಹಣವನ್ನು 21-22ನೆ ಸಾಲಿನಲ್ಲಿ ಖರ್ಚು ಮಾಡುವ ತೀರ್ಮಾನ ಕೈಗೊಂಡಿದ್ದು, ಇದರಲ್ಲಿ ನೇರ ಹಣ ವರ್ಗಾ ವಣೆಗಿಂತ ಹೆಚ್ಚಾಗಿ ವಿವಿಧ ಸ್ವರೂಪದ ಸಾಮಾಗ್ರಿಗಳ ಖರೀದಿ ಹಾಗೂ ಕಟ್ಟಡ ಕಾಮಗಾರಿಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಇದರಿಂದ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆಯುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಮಧ್ಯಪ್ರವೇಶಿಸುವಂತೆ ಕಾನೂನು ಸೇವಾ ಪ್ರಾಧಿಕಾರದ ಮುಖ್ಯಸ್ಥರು ಹಾಗೂ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿಯನ್ನು ಭೇಟಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಸಿಎಂ, ಕಾರ್ಮಿಕ ಸಚಿವರಿಗೆ, ಕಾನೂನು ಸೇವಾ ಪ್ರಾಧಿಕಾರದ ಮುಖ್ಯಸ್ಥರಿಗೆ, ಮಂಡಳಿ ಕಾರ್ಯದರ್ಶಿಗೆ ಒಂದು ಲಕ್ಷ ಅಂಚೆ ಕಾರ್ಡ್‌ಗಳ ಚಳವಳಿ ಜು.27ರಿಂದ ಆರಂಭಗೊಂಡಿದ್ದು, ಕೇಂದ್ರ ಸರಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಅದರ ನಿರ್ದೇಶನ ಉಲ್ಲಂಘನೆ ಕುರಿತು ದೂರು ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಮಹಾಂತೇಶ ತಿಳಿಸಿದರು.

ಪ್ರತಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಶೇಖರ ಬಂಗೇರ, ಕೋಶಾಧಿಕಾರಿ ಶಶಿಧರ ಗೊಲ್ಲ, ಉಪಾಧ್ಯಕ್ಷ ಸುಭಾಶ್ ನಾಯ್ಕ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X