Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಕಾಲ ಸೇವೆಗಳಡಿ ಅರ್ಜಿ ವಿಲೇವಾರಿಯಲ್ಲಿ...

ಸಕಾಲ ಸೇವೆಗಳಡಿ ಅರ್ಜಿ ವಿಲೇವಾರಿಯಲ್ಲಿ ಉಡುಪಿಗೆ ಪ್ರಥಮ ಸ್ಥಾನ : ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು

ವಾರ್ತಾಭಾರತಿವಾರ್ತಾಭಾರತಿ2 Aug 2021 7:56 PM IST
share
ಸಕಾಲ ಸೇವೆಗಳಡಿ ಅರ್ಜಿ ವಿಲೇವಾರಿಯಲ್ಲಿ ಉಡುಪಿಗೆ ಪ್ರಥಮ ಸ್ಥಾನ : ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು

ಉಡುಪಿ, ಆ.2: ಸಕಾಲ ಯೋಜನೆಯಡಿ ‘ವಿಳಂಬರಹಿತ ಅರ್ಜಿ ವಿಲೇವಾರಿ’ ಯಲ್ಲಿ ಉಡುಪಿ ಜಿಲ್ಲೆಯು ಜುಲೈ ತಿಂಗಳಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿ ಉತ್ತಮವಾಗಿ ಕಾರ್ಯ ನಿರ್ವಹಿಸುವುದರೊಂದಿಗೆ ಪ್ರಥಮ ಸ್ಥಾನ ಉಳಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಕಾಲ ಯೋಜನೆಯ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸಕಾಲ ಯೋಜನೆಯು ನಾಗರಿಕರಿಗೆ ಸರಕಾರದ ಸೇವೆಯನ್ನು ನಿಗದಿತ ಕಾಲಾವಧಿಯಲ್ಲಿ ಒದಗಿಸುವ ಪ್ರಮುಖ ಯೋಜನೆಗಳಲ್ಲಿ ಒಂದಾಗಿದ್ದು, ಸಾರ್ವಜನಿಕರು ಸರಕಾರದ 101 ವಿವಿಧ ಇಲಾಖೆಗಳಲ್ಲಿ 1,112 ಸೇವೆಗಳಿಗೆ ನಿಗದಿತ ಪ್ರಮಾಣದಲ್ಲಿ ಅರ್ಜಿ ಸಲ್ಲಿಸಿ, ಸೇವೆಯ ಪ್ರಯೋಜನ ವನ್ನು ಪಡೆದುಕೊಳ್ಳಬಹುದಾಗಿದೆ ಎಂದವರು ತಿಳಿಸಿದರು.

ಸಾರ್ವಜನಿಕರು ಸಕಾಲದಡಿಯಲ್ಲಿ ನಿಗದಿತ ಅರ್ಜಿಯನ್ನು ಸಲ್ಲಿಸುವಾಗ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಿದರೆ ಶೀಘ್ರದಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದ ಅವರು, ಅಧಿಕಾರಿಗಳು ನಿಗದಿತ ಕಾಲಾವಧಿಯಲ್ಲಿ ಅವುಗಳನ್ನು ತಡವಿಲ್ಲೇ ವಿಲೇವಾರಿ ಮಾಡಬೇಕು ಎಂದರು.

ವಿವಿಧ ಸೇವೆಗಳನ್ನು ಪಡೆಯಲು ನಾಗರಿಕರು ಸಲ್ಲಿಸುವ ಅರ್ಜಿಗಳ ತಿರಸ್ಕಾರದ ಪ್ರಮಾಣವನ್ನು ಆದಷ್ಟು ಕಡಿಮೆ ಮಾಡಬೇಕು. ಸಕಾರಣವಿಲ್ಲದೆ ಯಾವುದೇ ಅರ್ಜಿಯನ್ನು ತಿರಸ್ಕಾರ ಮಾಡಬಾರದು. ಒಂದೊಮ್ಮೆ ತಿರಸ್ಕಾರ ಮಾಡುವಾಗ ಸರಿಯಾದ ಕಾರಣವನ್ನು ನೀಡಬೇಕು ಎಂದರು.

ಪ್ರಸ್ತುತ ತಿಂಗಳಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ 59,237 ಅರ್ಜಿಗಳು ಬಂದಿದ್ದು ಅವುಗಳಲ್ಲಿ 52,511 ಅರ್ಜಿಗಳು ಪುರಸ್ಕೃತಗೊಂಡಿದ್ದು, 1,094 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದರು.

ಸಕಾಲ ಯೋಜನೆಯು 2011ರಿಂದ ರಾಜ್ಯದಲ್ಲಿ ಜಾರಿಗೆ ಬಂದಿದ್ದು, ಈವರೆಗೆ 6.53 ಕೋಟಿ ಅರ್ಜಿಗಳು ಬಂದಿವೆ. ಅವುಗಳಲ್ಲಿ 5.98 ಕೋಟಿಯಷ್ಟು ಅರ್ಜಿಗಳು ಪುರಸ್ಕೃತಗೊಂಡಿದ್ದು, 45.02 ಲಕ್ಷ ತಿರಸ್ಕೃತಗೊಂಡು 6.43 ಕೋಟಿ ವಿಲೇವಾರಿಯಾಗಿದೆ ಎಂದರು. ಜಿಲ್ಲೆಯಲ್ಲಿ ಈವರೆಗೆ 14.15 ಲಕ್ಷ ಅರ್ಜಿಗಳು ಬಂದಿದ್ದು, ಅವುಗಳಲ್ಲಿ 13.58ರಷ್ಟು ಅರ್ಜಿಗಳು ಪುರಸ್ಕೃತಗೊಂಡು 42,194 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದರು.

ಅಧಿಕಾರಿಗಳು ಮುತುವರ್ಜಿ ವಹಿಸಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ವಿಲೇವಾರಿ ವಿಳಂಬ ಮಾಡಿದವರಿಗೆ ದಂಡ ವಿಧಿಸುವ ಅವಕಾಶವಿದೆ. ಅಲ್ಲದೇ ವಿಳಂಬವಾದಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶವೂ ಇದೆ ಎಂದು ಸದಾಶಿವ ಪ್ರಭು ವಿವರಿಸಿದರು.
ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಕಾಲ ಯೋಜನೆಯ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X