Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಪ್ರಮುಖ ಕಾಮಗಾರಿಗಳನ್ನು...

ಶಿವಮೊಗ್ಗ: ಪ್ರಮುಖ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ2 Aug 2021 9:20 PM IST
share
ಶಿವಮೊಗ್ಗ: ಪ್ರಮುಖ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ,ಆ.02: ವಿಮಾನ ನಿಲ್ದಾಣ ಕಾಮಗಾರಿ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಪ್ರಮುಖ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ವಿಮಾನ ನಿಲ್ದಾಣದ ಎಟಿಸಿ ಟವರ್ ನೋಂದಣಿ ಸೇರಿದಂತೆ ಅಗತ್ಯ ಪ್ರಕ್ರಿಯೆಗಳನ್ನು ಆದಷ್ಟು ಬೇಗನೆ ಮುಗಿಸಬೇಕು. ಬಾಕಿ ಉಳಿದಿರುವ ಕಂಪೌಂಡ್ ಕೆಲಸ ಹಾಗೂ ಕುಡಿಯುವ ನೀರು ಪೂರೈಕೆ ಕಾಮಗಾರಿಗಳನ್ನು ಆದಷ್ಟು ಬೇಗನೆ ಪ್ರಾರಂಭಿಸಬೇಕು ಎಂದರು.

ವಿಮಾನ ನಿಲ್ದಾಣ ಕಾಮಗಾರಿಗೆ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ 38 ಎಕ್ರೆ ಜಮೀನಿನಲ್ಲಿ ವಸತಿಗಾಗಿ ಲೇಔಟ್ ನಿರ್ಮಿಸಿ, ನಿವೇಶನಗಳನ್ನು ಹಂಚಿಕೆ ಮಾಡುವ ಕುರಿತಾದ ಪ್ರಸ್ತಾವನೆಯನ್ನು ಕಂದಾಯ ಇಲಾಖೆ ಹಾಗೂ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮಕ್ಕೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಿಗಂದೂರು ಸೇತುವೆ ನಿರ್ಮಾಣ ನಿಗದಿಯಂತೆ ನಡೆಯುತ್ತಿದೆ. ಕಾಮಗಾರಿಗೆ ಸ್ಥಳೀಯವಾಗಿ ಮೈನಿಂಗ್ ಅನುಮತಿ ನೀಡಲಾಗಿದ್ದು, ಅನಿಯಂತ್ರಿತ ಬ್ಲಾಸ್ಟಿಂಗ್ ಕುರಿತು ಸ್ಥಳೀಯರಿಂದ ದೂರುಗಳು ದಾಖಲಾಗಿವೆ. ಈ ಕುರಿತು ಉಪ ವಿಭಾಗಾಧಿಕಾರಿಗಳು ಸ್ಥಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಚಿತ್ರದುರ್ಗ-ಶಿವಮೊಗ್ಗ ಚತುಷ್ಪಥ ರಸ್ತೆ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಕಾಮಗಾರಿ ತಕ್ಷಣ ಪ್ರಾರಂಭಿಸಬೇಕು. ವಿವಿಧ ಯೋಜನೆಗಳ ಅನುಷ್ಟಾನಕ್ಕೆ ಪ್ರಗತಿಯಲ್ಲಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಸರ್ಕಾರದ ಹಂತದಲ್ಲಿರುವ ವಿವಿಧ ಯೋಜನೆಗಳ ಪ್ರಸ್ತಾವನೆಗಳಿಗೆ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳಬೇಕು. ಶಿವಮೊಗ್ಗ ನಗರದಲ್ಲಿ ಹೊಸದಾಗಿ ಪೊಲೀಸ್ ಅಧೀಕ್ಷಕರ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ಜಮೀನು ಗುರುತಿಸಿ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಟ್ಟಡದ ನಿರ್ಮಾಣಕ್ಕಾಗಿ 13.70 ಕೋಟಿ ರೂ. ಅಂದಾಜು ಪಟ್ಟಿಯನ್ನು ತಯಾರಿಸಿ ಸಲ್ಲಿಸಲಾಗಿದೆ.

ಇದೇ ರೀತಿ ತೆವರಚಟ್ನಳ್ಳಿ ಗ್ರಾಮದಲ್ಲಿ 9 ಎಕ್ರೆ ಪ್ರದೇಶದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಕುರಿತು ಪರಿಷ್ಕøತ ಪ್ರಸ್ತಾವನೆ ಸಲ್ಲಿಸಲಾಗಿದೆ. ಸೋಮಿನಕೊಪ್ಪದಲ್ಲಿ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಹೆಸರಿನಲ್ಲಿರುವ 20 ಎಕ್ರೆ ಪ್ರದೇಶದಲ್ಲಿ ಖೇಲೋ ಇಂಡಿಯಾ ಯೋಜನೆಯಡಿ ಜಿಲ್ಲಾ ಕ್ರೀಡಾ ಸಂಕೀರ್ಣ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನವುಲೆ ಗ್ರಾಮದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆ ಕುರಿತು ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಪುನಃ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಉಪ ವಿಭಾಗಾಧಿಕಾರಿ ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X