ಕಾಸರಗೋಡು-ದ.ಕ. ಗಡಿಯಲ್ಲಿ ಬಂದೋಬಸ್ತ್ ಪರಿಶೀಲಿಸಲು ಎಡಿಜಿಪಿ ಮಂಗಳೂರಿಗೆ
ಮಂಗಳೂರು, ಆ.2: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳ ಗಡಿಭಾಗದ ಬಂದೋಬಸ್ತ್ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರತಾಪ್ ರೆಡ್ಡಿ ಸೋಮವಾರ ಸಂಜೆ ಮಂಗಳೂರಿಗೆ ಆಗಮಿಸಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 5:30ರ ವೇಳೆಗೆ ಆಗಮಿಸಿದ ಎಡಿಜಿಪಿ ಪ್ರತಾಪ್ ರೆಡ್ಡಿ, ಬಳಿಕ ನೇರವಾಗಿ ಪಶ್ಚಿಮ ವಲಯ ಐಜಿಪಿ ಕಚೇರಿಗೆ ತೆರಳಿ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಸೋಮವಾರ ರಾತ್ರಿ ಮಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದು, ಮಂಗಳವಾರ ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಆ ಬಳಿಕ ಕೇರಳ ಗಡಿ ಪ್ರದೇಶವಾದ ತಲಪಾಡಿಗೆ ತೆರಳಿ ಪರಿಶೀಲನೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
Next Story





