Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಲಪ್ರಯೋಗಿಸಿ ಅಧಿಕಾರ ಪಡೆದರೆ ತಾಲಿಬಾನ್...

ಬಲಪ್ರಯೋಗಿಸಿ ಅಧಿಕಾರ ಪಡೆದರೆ ತಾಲಿಬಾನ್ ಗೆ ಮಾನ್ಯತೆ ಇಲ್ಲ: ಯುರೋಪಿಯನ್ ಯೂನಿಯನ್

ವಾರ್ತಾಭಾರತಿವಾರ್ತಾಭಾರತಿ2 Aug 2021 9:41 PM IST
share

ಕಾಬೂಲ್, ಆ.2: ಅಪಘಾನಿಸ್ತಾನದಲ್ಲಿ ಹಿಂಸಾಚಾರ ಮುಂದುವರಿದಿರುವಂತೆಯೇ, ತಾಲಿಬಾನ್ ಬಲಪ್ರಯೋಗಿಸಿ ಅಧಿಕಾರ ಪಡೆದರೆ ಅವರ ಆಡಳಿತಕ್ಕೆ ಯುರೋಪಿಯನ್ ಯೂನಿಯನ್ ಹಾಗೂ ಇತರ ದೇಶಗಳು ಮಾನ್ಯತೆ ನೀಡುವುದಿಲ್ಲ ಎಂದು ಯುರೋಪಿಯನ್ ಯೂನಿಯನ್ ಪುನರುಚ್ಚರಿಸಿದೆ.

 ಅಪಘಾನಿಸ್ತಾನದ ಭದ್ರತಾ ಪರಿಸ್ಥಿತಿ ಆತಂಕಕಾರಿಯಾಗಿದೆ. ಅಪಘಾನಿಸ್ತಾನದ ವಿಷಯದಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ಭಾಗಿಯಾಗಿರಲು ಪ್ರಯತ್ನಿಸುತ್ತೇವೆ ಮತ್ತು ಅಭಿವೃದ್ಧಿ ಕಾರ್ಯಕ್ಕೆ ನಮ್ಮ ನೆರವು ಮುಂದುವರಿಯಲಿದೆ. ರಾಜಕೀಯವಾಗಿಯೂ ನಾವು ಭಾಗಿಯಾಗುತ್ತೇವೆ ಎಂದು ಅಪಘಾನಿಸ್ತಾನದಲ್ಲಿ ಯುರೋಪಿಯನ್ ಯೂನಿಯನ್ ನಿಯೋಗದ ಮುಖ್ಯಸ್ಥ ಥಾಮಸ್ ನಿಕಲ್ಸನ್ ಹೇಳಿರುವುದಾಗಿ ‘ ದಿ ಅಪಘಾನಿಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಮಾತುಕತೆ ಸಂದರ್ಭ ತಾಲಿಬಾನ್ನಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ. ಆದರೆ ಅವರು 1990ರಂತೆ, ಇಸ್ಲಾಮಿಕ್ ಎಮಿರೇಟ್ಸ್ನ ಸ್ಥಾಪನೆಯ ಪ್ರಸ್ತಾವನೆ ಅಥವಾ ಇಸ್ಲಾಮಿಕ್ ಎಮಿರೇಟ್ಸ್ ಕುರಿತಾದ ಯಾವುದೇ ಪ್ರಸ್ತಾವನೆ ಸ್ವೀಕಾರಾರ್ಹವಲ್ಲಎಂದು ನಿಕಲ್ಸನ್ ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ, ರವಿವಾರ ನಡೆದ ವರ್ಚುವಲ್ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಅಪಘಾನ್ ಅಧ್ಯಕ್ಷ ಅಶ್ರಫ್ ಘನಿ ‘ ಎರಡು ದಶಕಗಳಿಂದ ತಾಲಿಬಾನ್ ಮತ್ತಷ್ಟು ಕ್ರೂರ ಮತ್ತು ಕಠೋರವಾಗಿದೆ. ಅವರು ಬದಲಾಗಿದ್ದಾರೆ ಆದರೆ ಋಣಾತ್ಮಕವಾಗಿ. ಅವರಿಗೆ ಶಾಂತಿ, ಸಮೃದ್ಧಿ ಅಥವಾ ಪ್ರಗತಿಯ ಆಶಯವಿಲ್ಲ. ನಾವು ಶಾಂತಿ ಬಯಸುತ್ತೇವೆ, ಆದರೆ ಅವರು ಸರಕಾರ ಹಾಗೂ ಜನತೆ ಅವರ ನಿಯಂತ್ರಣದಲ್ಲಿರಬೇಕೆಂದು ಬಯಸುತ್ತಾರೆ’ ಎಂದಿದ್ದಾರೆ. ಈ ವರ್ಷದ ಆರಂಭದ 6 ತಿಂಗಳಲ್ಲಿ ಅಪಘಾನಿಸ್ತಾನದಲ್ಲಿ 1,677 ಜನತೆ ಸಾವನ್ನಪ್ಪಿದ್ದು 3,644 ಮಂದಿ ಗಾಯಗೊಂಡಿದ್ದು 2020ರ ಇದೇ ಅವಧಿಗೆ ಹೋಲಿಸಿದರೆ ಇದು 80%ರಷ್ಟು ಹೆಚ್ಚಳವಾಗಿದೆ ಎಂದು ಅಪಘಾನಿಸ್ತಾನ್ ಇಂಡಿಪೆಂಡೆಂಟ್ ಹ್ಯೂಮನ್ ರೈಟ್ಸ್ ಕಮಿಷನ್(ಎಐಎಚ್ಆರ್ಸಿ) ರವಿವಾರ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X