Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಹಾರ ಕಿಟ್ಟ್ ವಿತರಣೆಯಲ್ಲಿ ಭ್ರಷ್ಟಾಚಾರ...

ಆಹಾರ ಕಿಟ್ಟ್ ವಿತರಣೆಯಲ್ಲಿ ಭ್ರಷ್ಟಾಚಾರ : ಶುಭದ ರಾವ್ ಆರೋಪ

ವಾರ್ತಾಭಾರತಿವಾರ್ತಾಭಾರತಿ3 Aug 2021 3:13 PM IST
share
ಆಹಾರ ಕಿಟ್ಟ್ ವಿತರಣೆಯಲ್ಲಿ ಭ್ರಷ್ಟಾಚಾರ : ಶುಭದ ರಾವ್ ಆರೋಪ

ಕಾರ್ಕಳ: ಕಳೆದ ವರ್ಷ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ನೆರವಾಗಲೆಂದು ಕರ್ನಾಟಕ ಕಟ್ಟಡ ಕಾರ್ಮಿಕ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಕಳ ತಾಲೂಕಿಗೆ ಬಿಡುಗಡೆಯಾಗಿದ್ದ ‌45 ಲಕ್ಷ ರೂಪಾಯಿಯ 5000 ಕಿಟ್ಟಗಳಲ್ಲಿ ಒಂದನ್ನೂ ವಿತರಿಸದೆ ಶಾಸಕ ಸುನೀಲ್ ಕುಮಾರ್  ಮತ್ತು ಇಲಾಖೆಯ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿ ಹೋರಾಟ ಮಾಡಿದ್ದರ ಫಲವಾಗಿ ಈ ಬಾರಿ ಬಿಡುಗಡೆಯಾಗಿದ್ದ ಆಹಾರ ಕಿಟ್ಟನ್ನು ಸರಕಾರದ ಆದೇಶದಂತೆ ಪ್ರತೀ ಗ್ರಾಮ ಪಂಚಾಯತ್ ಮತ್ತು ಪುರಸಭೆಯ ಮೂಲಕ ಫಲಾನುಭವಿಗಳ ಪಟ್ಟಿ ‌ತಯಾರಿಸಿ‌ ಅವರ ನೇತೃತ್ವದಲ್ಲಿಯೇ  ವಿತರಿಸಲಾಗಿದೆ.

ಇದರಿಂದಾಗಿ ಯಾರಿಗೆ  ಕಿಟ್ಟ್ ಸಲ್ಲಬೇಕಿತ್ತೊ‌ ಅವರಿಗೆ ಸಲ್ಲಿಸಿದೇವೆ ಎಂಬ ತೃಪ್ತಿ ನಮಗಿದೆ. ಆದರೆ  ಕಳೆದ‌ ವರ್ಷ ಇದೇ ರೀತಿಯಲ್ಲಿ ಕಿಟ್ಟ್  ವಿತರಿಸಬೇಕು ಎಂಬ ತಮ್ಮದೇ ಸರಕಾರದ ಆದೇಶವಿದ್ದರೂ ಯಾಕೆ ವಿತರಿಸಲಿಲ್ಲ ? ಮತ್ತು ಯಾವುದೇ ಕಿಟ್ಟ್ ವಿತರಿಸದಯೇ ಸರಕಾರಕ್ಕೆ ಬೋಗಸ್ ಫಲಾನುಭವಿಗಳ ಪಟ್ಟಿಯನ್ನು ಸಲ್ಲಿಸಿರುವುದು ತಾವು ಭ್ರಷ್ಟಾಚಾರ ನಡೆಸಿದ್ದೀರಿ ಎನ್ನುವ ಆರೋಪ ಸಾಬೀತಾಗಿದೆ ಎನ್ನುವುದಕ್ಕೆ ಇದು  ಪುರಾವೆಯಲ್ಲವೇ‌ ಎನ್ನುವ ಪ್ರಶ್ನೆಗೆ ಉತ್ತರಿಸಬೇಕು ಎಂದು  ಕಾರ್ಕಳ ಪುರಸಭಾ ಸದಸ್ಯ ಶುಭದ ರಾವ್‌ ಒತ್ತಾಯಿಸಿದರು.

ಇವರು ಕಾರ್ಕಳ ಪ್ರಕಾಶ್ ಹೋಟೆಲ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ ಕಳೆದ ವರ್ಷ ಶಾಸಕರು‌ ವಿತರಿಸಿದ್ದಾರೆ ಎನ್ನಲಾದ 5000 ಫಲಾನುಭವಿಗಳ ‌ಪಟ್ಟಿಯಲ್ಲಿ ಹೆಸರಿರುವ ಒಬ್ಬನೇ ಒಬ್ಬ ವ್ಯಕ್ತಿ  ಈ ರೀತಿಯ ಸರ್ಕಾರ ನಿರ್ದೇಶನದ ರೀತಿಯ ಕಾರ್ಮಿಕ ಇಲಾಖೆಯ ಸ್ಟಿಕರ್ ಅಂಟಿಸಿದ ರಟ್ಟಿನ ಬಾಕ್ಸಿನಲ್ಲಿರುವ 13 ಆಹಾರ ಪದಾರ್ಥಗಳ ಕಿಟ್ಟ್ ನಾನು ಪಡೆದಿದ್ದೇನೆ‌ ಎಂದು ಸತ್ಯ ನುಡಿದರೆ ಅವರಿಗೆ 25 ಸಾವಿರ ರೂಪಾಯಿಗಳ ಬಹುಮಾನವನ್ನು ನೀಡಲಾಗುವುದು,  ಅಥವಾ ಅಂದಿನ ಪಂಚಾಯತ್ ಅದ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಧಿಕಾರಿಗಳು ಯಾರೇ ಅದರೂ ಕಳೆದ ವರ್ಷ ಇದೇ ರೀತಿಯ ಕಿಟ್ಟನ್ನು ವಿತರಿಸಿದ್ದೇವೆ ಎಂದು ಸತ್ಯ ನುಡಿದರೆ ಅವರಿಗೂ 25 ಸಾವಿರ ರೂಪಾಯಿ ಬಹುಮಾನವನ್ನು ನೀಡಲಾಗುವುದು ಇಲ್ಲವಾದರೆ ಶಾಸಕರು ಮತ್ತು ಇಲಾಖೆಯ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿದ್ದು ಸತ್ಯ ಎಂದು ಸಾಬೀತಾದಂತೆ.  ಕೋವಿಡ್  ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲೆಂದು ಕೆಲ ದಾನಿಗಳು ನೀಡಿದ ಹಣದಲ್ಲಿ ಚಿನ್ನದ ಕೆಲಸಗಾರರು, ಕ್ಷೌರಿಕರು, ಲಾಂಡ್ರಿ ಕಾರ್ಮಿಕರು,ಆಟೋರಿಕ್ಷಾ ಚಾಲಕರು, ಬಸ್ಸ್ ಸಿಬಂದಿಗಳು, ಕಾರು ಚಾಲಕರು ಮೊದಲಾದ ಕಾರ್ಮಿಕರಿಗೆ ಕೇವಲ  300/ ರೂ ಕಿಟ್ಟನ್ನು ವಿತರಿಸಿ ಅದನ್ನೇ ಕಾರ್ಮಿಕ ಇಲಾಖೆಯ 899/ ರೂ ಕಿಟ್ಟ್ ಎಂದು ನಂಬಿಸಿ ಸರಕಾರಕ್ಕೆ ಬೋಗಸ್ ಫಲಾನುಭವಿಗಳ ಪಟ್ಟಿಯನ್ನು ಸಲ್ಲಿಸಿ ಸರಕಾರಕ್ಕೆ ಮತ್ತು ಕ್ಷೇತ್ರದ ಜನತೆಗೆ ದ್ರೋಹ ಬಗೆಯಲಾಗಿದೆ. ಹಸಿದ ಹೊಟ್ಟೆಗೆ ತಿನ್ನಲು ನೀಡಿದ ಆಹಾರ ಹಣವನ್ನು ‌ಲೂಟಿ ಮಾಡಿ‌ ಬಡವರನ್ನು ವಂಚಿಸಲಾಗಿದೆ. ಇಂತವರನ್ನು ದೇವರೂ ಕ್ಷಮಿಸಲಾರ, ಲೋಕಾಯುಕ್ತ ತನಿಖೆಯ ಮೇಲೆ ಭರವಸೆ ಇದೆ, ಲೋಕಕ್ಕೆ ಸತ್ಯ ‌ತಿಳಿಯುವುದು ಎಂಬ ನಂಬಿಕೆ ಇದೆ ಎಂದರು.

ಈ ಸಂಧರ್ಭದಲ್ಲಿ ಮಾಳ ಪಂಚಾಯತ್ ಮಾಜಿ ಅಧ್ಯಕ್ಷ ಅಜಿತ್ ಹೆಗ್ಡೆ, ಯುವ ಕಾಂಗ್ರೆಸ್ ಕಾರ್ಕಳ ಅಧ್ಯಕ್ಷ ಯೋಗಿಶ್ ನಯನ್ ಇನ್ನಾ ,ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X