Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೋವಿಡ್ ಸೋಂಕಿತರನ್ನು ಕೋವಿಡ್...

ಉಡುಪಿ: ಕೋವಿಡ್ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ವರ್ಗಾಯಿಸಿ; ಸಿಇಓ ಡಾ.ನವೀನ್ ಭಟ್

ವಾರ್ತಾಭಾರತಿವಾರ್ತಾಭಾರತಿ3 Aug 2021 8:42 PM IST
share
ಉಡುಪಿ: ಕೋವಿಡ್ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ವರ್ಗಾಯಿಸಿ; ಸಿಇಓ ಡಾ.ನವೀನ್ ಭಟ್

ಉಡುಪಿ, ಆ.3: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್‌ಕೇರ್ ಸೆಂಟರ್‌ಗಳಿಗೆ ವರ್ಗಾಯಿಸಿ ಅಗತ್ಯ ಚಿಕಿತ್ಸೆ ನೀಡಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ನವೀನ್ ಭಟ್ ವೈ. ಸೂಚನೆ ನೀಡಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕೈಗೊಳ್ಳುವ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಸೋಂಕಿತ ವ್ಯಕ್ತಿಗಳನ್ನು ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಕೋವಿಡ್‌ಕೇರ್ ಸೆಂಟರ್‌ಗಳಿಗೆ ವರ್ಗಾಯಿಸಿ ಅವರಿಗೆ ಉತ್ತಮ ಚಿಕಿತ್ಸೆ ನೀಡುವುದರಿಂದ ಕೊರೋನ ಸೋಂಕು ಹರಡುವಿಕೆಯ ಸರಪಳಿಯನ್ನು ಕಡಿತಗೊಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿಯೂ ಕೋವಿಡ್‌ಕೇರ್ ಸೆಂಟರ್‌ಗಳನ್ನು ತೆರೆದು, ಅಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ಕೊರೋನ ಪೀಡಿತರಿಗೆ ಆರೈಕೆ ಮಾಡಲು ಮುಂದಾಗಬೇಕು ಎಂದ ಅವರು, ಕೋವಿಡ್‌ಕೇರ್ ಸೆಂಟರ್‌ಗಳಿಗೆ ಅಗತ್ಯ ಇರುವ ವೈದ್ಯರು, ಶುಶ್ರೂಷಕರು ಮತ್ತಿತರ ಸಿಬ್ಬಂದಿಗಳನ್ನು ಅಗತ್ಯಕ್ಕನುಣವಾಗಿ ನಿಯೋಜಿಸಬೇಕು ಎಂದು ಸೂಚಿಸಿದರು.

ಪ್ರತಿದಿನ 5000 ಪರೀಕ್ಷೆ ಬೇಕು: ಜಿಲ್ಲೆಯಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಪರೀಕ್ಷೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಗ್ರಾಮ ಪಂಚಾಯತ್‌ಗಳಿಗೆ ಕೋವಿಡ್ ಪರೀಕ್ಷೆ ಮಾಡಲು ಅಗತ್ಯ ಸಹಕಾರ ನೀಡುವಂತೆ ಸೂಚಿಸಲಾಗುವುದು ಎಂದರು.

ಕೋವಿಡ್ ಸೋಂಕಿತರ ಮನೆಗಳನ್ನು ಕಡ್ಡಾಯವಾಗಿ ಸೀಲ್‌ಡೌನ್ ಮಾಡಬೇಕು ಎಂದ ಡಾ.ಭಟ್, 5ಕ್ಕಿಂತ ಹೆಚ್ಚಿನ ಪ್ರಕರಣಗಳು ಒಂದೇ ಪರಿಸರದಲ್ಲಿ ಕಂಡು ಬಂದಲ್ಲಿ ಕಂಟೈನ್ಮೆಂಟ್ ಝೋನ್‌ಗಳಾಗಿ ಘೋಷಿಸಿ ಅವುಗಳ ಮೇಲೆ ನಿಗಾ ವಹಿಸುವ ಕೆಲಸವಾಗಬೇಕು ಎಂದರು.

ಸಂಭಾವ್ಯ ಕೋವಿಡ್ ಮೂರನೇ ಅಲೆ ಹರಡುವುದನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಬೇಕು. ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ 1000 ಬೆಡ್‌ಗಳನ್ನು ಕಾಯ್ದಿರಿಸುವ ಅಗತ್ಯವಿದೆ ಎಂದರು.

ಗ್ರಾಮೀಣ ಭಾಗಗಳಲ್ಲಿ ಟಾಸ್ಕ್‌ಪೋರ್ಸ್ ಸಮಿತಿಗಳು ಕಾರ್ಯ ಪ್ರವೃತ್ತ ವಾಗುವುದರೊಂದಿಗೆ ಕೋರೋನ ನಿಯಂತ್ರಣಕ್ಕೆ ಮುಂದಾಗಬೇಕು ಎಂದ ಡಾ.ನವೀನ್ ಭಟ್, ಸೋಂಕಿತರನ್ನು ಕೋವಿಡ್‌ಕೇರ್ ಸೆಂಟರ್‌ಗೆ ವರ್ಗಾಯಿ ಸಲು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ, ಗ್ರಾಮ ಲೆಕ್ಕಿಗರು, ಪಿಡಿಒಗಳು ಹಾಗೂ ಪೋಲಿಸ್ ಸಿಬ್ಬಂದಿಗಳು ಸಹಕಾರ ನೀಡಬೇಕು ಎಂದು ಸೂಚನೆ ನೀಡಿದರು.

ಪ್ರತಿದಿನ ಸಂಜೆ ತಾಲೂಕು ಮಟ್ಟದಲ್ಲಿ ತಹಶೀಲ್ದಾರುಗಳು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರ ಸ್ಥಿತಿಗತಿ ಬಗ್ಗೆ ಸಭೆ ನಡೆಸಿ, ಚರ್ಚಿಸಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಲಸಿಕಾ ಕೇಂದ್ರಗಳಲ್ಲಿ ಸೇರುವ ಜನಸಂದಣಿಯನ್ನು ತಡೆಯಲು ಅಗತ್ಯ ನಿಯಂತ್ರಣ ಕ್ರಮಗಳನ್ನು ಕೈಗೊಂಡು ಲಸಿಕೆ ನೀಡುವ ಕಾರ್ಯ ಮಾಡಬೇಕು ಎಂದು ಜಿಪಂ ಸಿಇಓ ಹೇಳಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ, ಸಾರ್ವಜನಿಕರು ಮಾಸ್ಕ್ ಧರಿಸದಿರುವುದು, ಸುರಕ್ಷತಾ ಅಂತರ ಕಾಪಾಡದೇ ಇರುವುದು ಕಂಡು ಬರುತ್ತಿದ್ದು, ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂ ಅಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ನಿಗಾ ವಹಿಸುವುದರೊಂದಿಗೆ ನಿಯಮ ಉಲ್ಲಂಸಿದ್ದಲ್ಲಿ ದಂಡ ವಿಧಿಸಲು ಮುಂದಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ, ಹೆಚ್ಚುವರಿ ಪೋಲಿಸ್ ಅಧೀಕ್ಷಕ ಕುಮಾರ್‌ಚಂದ್ರ, ತಹಶೀಲ್ದಾರ ಪ್ರದೀಪ್ ಎಸ್ ಕುರ್ಡೆಕರ್, ಕುಂದಾಪುರ ಉಪವಿಭಾಗಧಿಕಾರಿ ರಾಜು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನೆಗೆಟಿವ್ ವರದಿ ಕಡ್ಡಾಯ
ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯಗಳಿಂದ ರೈಲುಗಳ ಮೂಲಕ ಆಗಮಿಸುವವರು ಕಡ್ಡಾಯವಾಗಿ 72 ಗಂಟೆ ಅವಧಿಯ ಒಳಗೆ ಪಡೆದ ಆರ್‌ಟಿಪಿಸಿಆರ್ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರುವ ಬಗ್ಗೆ ತಪಾಸಣೆ ಮಾಡಬೇಕು. ನೆಗೆಟಿವ್ ವರದಿ ಇಲ್ಲದೆ ಬಂದವರಿಗೆ ಸ್ಳಳದಲ್ಲಿಯೇ ಆರ್‌ಎಟಿ ಪರೀಕ್ಷೆ ಮಾಡಬೇಕು.
-ಡಾ.ನವೀನ್ ಭಟ್, ಸಿಇಓ ಉಡುಪಿ ಜಿಪಂ

ರೈಲ್ವೆ ನಿಲ್ದಾಣಗಳಲ್ಲಿ 24*7 ತಪಾಸಣಾ ಕೇಂದ್ರ

ಉಡುಪಿ, ಕುಂದಾಪುರ ಮತ್ತು ಬೈಂದೂರು ರೈಲ್ವೆ ನಿಲ್ದಾಣದಲ್ಲಿ 24*7 ಕಾರ್ಯ ನಿರ್ವಹಿಸುವ ತಪಾಸಣಾ ಕೆಂದ್ರಗಳನ್ನು ತೆರೆದು, ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರನ್ನು ತಪಾಸಣೆ ನಡೆಸಬೇಕು. ಈ ತಂಡದಲ್ಲಿ ವೈದ್ಯರು, ಪೊಲೀಸ್ ಮತ್ತು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ. ಗುರುವಾರದಿಂದಲೇ ಮೂರೂ ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳು ಕಾರ್ಯಾರಂಭ ಮಾಡುವಂತೆ ಎಲ್ಲಾ ಅಗತ್ಯ ಸಿದ್ದತೆ ಮಾಡಿಕೊಳ್ಳಿ.
-ಸದಾಶಿವ ಪ್ರಭು, ಅಪರ ಜಿಲ್ಲಾಧಿಕಾರಿ ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X