ನಾನು ಸಚಿವ ಸ್ಥಾನಕ್ಕಾಗಿ ಯಾವುದೇ ಲಾಬಿ ಮಾಡಿಲ್ಲ: ಶಾಸಕ ಹಾಲಪ್ಪ

ಬೆಂಗಳೂರು, ಆ.3: ಸಚಿವ ಸ್ಥಾನಕ್ಕಾಗಿ ನಾನು ಯಾವುದೇ ಲಾಬಿ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ತಿಳಿಸಿದರು.
ಮಂಗಳವಾರ ನಗರದ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಿಂದ ನನಗೆ ಮಂತ್ರಿ ಸ್ಥಾನ ಕೊಡಬೇಕೆಂದು ಕೇಳಿದ್ದೇನೆ. ಅಲ್ಲದೆ, ಜಿಲ್ಲೆಯಲ್ಲಿ ನನಗಿಂತ ಅರಗ ಜ್ಞಾನೇಂದ್ರ, ಕೆ.ಎಸ್.ಈಶ್ವರಪ್ಪ ಹಿರಿಯರಿದ್ದಾರೆ. ಜಿಲ್ಲೆಗೆ ಒಂದೇ ಸ್ಥಾನ ಕೊಟ್ಟರೆ ಈಶ್ವರಪ್ಪ ಅವರಿಗೆ ಕೊಡುತ್ತಾರೆ ಎಂದು ಹೇಳಿದರು.
ಒಂದು ವೇಳೆ, ಎರಡು ಸ್ಥಾನ ಕೊಟ್ಟರೆ ನನಗೂ ಮಂತ್ರಿ ಸ್ಥಾನ ಕೊಡುತ್ತಾರೆ ಎಂದ ಅವರು, ಶಿವಮೊಗ್ಗ ರಾಜ್ಯ ರಾಜಕಾರಣದಲ್ಲಿ ಪ್ರಮುಖ. ಹೋರಾಟ, ಪ್ರಬುದ್ಧತೆಯಲ್ಲಿ ಜಿಲ್ಲೆ ಪ್ರಮುಖವಾಗಿದೆ. ಶಿವಮೊಗ್ಗ ಜಿಲ್ಲೆಗೆ ಎರಡು ಸ್ಥಾನ ನೀಡಿದರೆ ಅದರಲ್ಲಿ ನಾನು ಇರುತ್ತೇನೆ ಎಂದು ಹೇಳಿದರು.
Next Story





