Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವ್ಯಸನದಿಂದ ದೂರವಿದ್ದಾಗ ಮಾತ್ರ ಉತ್ತಮ...

ವ್ಯಸನದಿಂದ ದೂರವಿದ್ದಾಗ ಮಾತ್ರ ಉತ್ತಮ ಆರೋಗ್ಯ: ಶಾಸಕ ರಘುಪತಿ ಭಟ್

ನಶಾ ಮುಕ್ತ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 Aug 2021 9:16 PM IST
share
ವ್ಯಸನದಿಂದ ದೂರವಿದ್ದಾಗ ಮಾತ್ರ ಉತ್ತಮ ಆರೋಗ್ಯ: ಶಾಸಕ ರಘುಪತಿ ಭಟ್

ಉಡುಪಿ, ಆ.3: ಜನಸಾಮಾನ್ಯರು ವ್ಯಸನದಿಂದ ದೂರವಿದ್ದಾಗ ಮಾತ್ರ ಉತ್ತಮ ಆರೋಗ್ಯವನ್ನು ಹೊಂದುವುದರ ಜೊತೆಗೆ ಆರೋಗ್ಯಪೂರ್ಣ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಉಡುಪಿ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಐಆರ್‌ಡಿಪಿಎ ಮತ್ತು ಸ್ವಯಂಸೇವಾ ಸಂಸ್ಥೆ ಉಡುಪಿ ಇವರ ಸಂಯುಕ್ತಾಶ್ರಯ ದಲ್ಲಿ ಆಯೋಜಿಸಿದ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇತ್ತೀಚಿನ ದಿನಗಳಲ್ಲಿ ಯುವ ಜನರು ಹೆಚ್ಚಾಗಿ ದುಶ್ಟಟಕ್ಕೆ ಒಳಗಾಗುತ್ತಿದ್ದಾರೆ. ಅವರಿಗೆ ದುಶ್ಟಟದಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಅವುಗಳಿಂದ ದೂರ ಉಳಿಯುವ ಹಾಗೆ ನೋಡಿಕೊಳ್ಳುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದರು.

ಜಿಲ್ಲೆಯಲ್ಲಿ 27 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಹೊರ ರಾಜ್ಯ ಸೇರಿದಂತೆ ದೇಶ-ವಿದೇಶಗಳಿಂದ ಬರುತ್ತಿದ್ದಾರೆ. ಇವರುಗಳಲ್ಲಿ ಕೆಲವರು ದುಶ್ಟಟವನ್ನು ಹೊಂದಿರುತ್ತಾರೆ. ಅವರು ಇತರರೂ ದುಶ್ಟಟಕ್ಕೆ ಮಾರು ಹೋಗು ವಂತೆ ಮಾಡುವ ಸಾಧ್ಯತೆ ಇರುತ್ತದೆ. ಇದಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳ ಎಸ್ ಮಾತನಾಡಿ, ಸಮಾಜದಲ್ಲಿ ವಿದ್ಯಾರ್ಥಿ ಗಳೇ ಹೆಚ್ಚಾಗಿ ವ್ಯಸನಿಗಳಾಗುತ್ತಿದ್ದಾರೆ. ಅವರು ತಮ್ಮ ಕಾರ್ಯಗಳಲ್ಲಿ ಸೋಲು ಮತ್ತು ವೈಫಲ್ಯದ ಸಂದರ್ಭಗಳಲ್ಲಿ ಇಂತಹ ದುಶ್ಚಟಕ್ಕೆ ಮಾರು ಹೋಗುವ ಸಾದ್ಯತೆ ಇರುತ್ತದೆ. ಅಂತಹ ಸಂದರ್ಭದಲ್ಲಿ ಪೋಷಕರು, ಶಿಕ್ಷಕರು, ಸ್ನೇಹಿತರು, ಅವರುಗಳಿಗೆ ಸ್ಪಂದಿಸಿ ಮಾರ್ಗದಶನರ್ ನೀಡುವುದು ಸೂಕ್ತ ಎಂದರು.

ಜಿಲ್ಲಾಡಳಿತ ಇವುಗಳ ನಿಯಂತ್ರಣಕ್ಕೆ ಹೆಚ್ಚಿನ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅತೀ ಅವಶ್ಯಕ. ಡ್ರಗ್ಸ್ ಬಳಕೆ, ಮಾರಾಟ, ಸಾಗಾಟಗಳ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರು ನೀಡಿದ್ದಲ್ಲಿ ಗೌಪ್ಯತೆಯನ್ನು ಕಾಪಾಡಲಾಗುವುದು ಎಂದ ಅವರು ಪೋಷಕರು ಸಹ ತಮ್ಮ ಮಕ್ಕಳ ದೈನಂದಿನ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು ಎಂದರು.

ಹೆಚ್ಚುವರಿ ಪೋಲಿಸ್ ಅಧೀಕ್ಷಕ ಕುಮಾರ್‌ಚಂದ್ರ ಮಾತನಾಡಿ, ಇತ್ತೀಚೆಗೆ ಜಿಲ್ಲೆಯಲ್ಲಿ 3 ಕೋಟಿ ಮೌಲ್ಯದ ಜಪ್ತಿಯಾದ ಮಾದಕ ದ್ರವ್ಯಗಳನ್ನು ನಾಶ ಪಡಿಸಲಾಗಿದೆ. ಇದರಲ್ಲಿ ಹೆಚ್ಚಿನದನ್ನು ವಿದ್ಯಾರ್ಥಿಗಳಿಂದ ಜಪ್ತಿ ಪಡಿಸಿಕೊಂಡಿ ರುವುದಾಗಿದೆ ಎಂದರು.

ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ರತ್ನ ಮಾತನಾಡಿದರು. ಬಾಳಿಗ ಆಸ್ಪತ್ರೆಯ ಮನೋಶಾಸ್ತ್ರಜ್ಞ ಡಾ. ಪಿ.ವಿ.ಭಂಡಾರಿ ಯುವ ಜನತೆ ಮತ್ತು ಮದ್ಯ ಮಾದಕ ಸೇವೆ’ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಡಿಎನ್‌ಎ ಸಂಸ್ಥೆಯ ವ್ಯವಸ್ಥಾಪಕಿ ರೂಪಲಕ್ಷ್ಮಿ ನಿರೂಪಿಸಿ, ಹಿರಿಯ ನಾಗರಿಕ ಸಹಾಯವಾಣಿ ಸಂಯೋಜಕ ಗಣೇಶ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X