Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಂಗರೆ: ದೋಣಿ ತೆರವಿಗೆ ಅಧಿಕಾರಿಗಳ...

ಬೆಂಗರೆ: ದೋಣಿ ತೆರವಿಗೆ ಅಧಿಕಾರಿಗಳ ಬೆದರಿಕೆಗೆ ಮೀನುಗಾರರ ಸಂಘ ಖಂಡನೆ

ವಾರ್ತಾಭಾರತಿವಾರ್ತಾಭಾರತಿ4 Aug 2021 3:13 PM IST
share

ಮಂಗಳೂರು, ಆ.4: ಸಾಂಪ್ರದಾಯಿಕ ಮೀನುಗಾರರು ನೂರಾರು ವರ್ಷಗಳಿಂದ ಬೆಂಗರೆ ಪ್ರದೇಶದ ಫಲ್ಗುಣಿ ನದಿದಂಡೆಯಲ್ಲಿ ದೋಣಿ ಕಟ್ಟಿ ಮೀನುಗಾರಿಕೆ ನಡೆಸುತ್ತಿದ್ದಾರೆ. ಇದೀಗ ಸಾಗರ ಮಾಲಾ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಕೋಸ್ಟಲ್ ಬರ್ತ್ ಕಾಮಗಾರಿಗಾಗಿ ಪರ್ಯಾಯ ಸ್ಥಳ, ಅಧಿಕೃತ ಮಾತುಕತೆಗಳಿಲ್ಲದೆ ನಾಡದೋಣಿಗಳನ್ನು ತೆರವುಗೊಳಿಸಲು ಜಿಲ್ಲಾಡಳಿತ ಸಾಂಪ್ರದಾಯಿಕ ಮೀನುಗಾರರನ್ನು ಬಲವಂತಪಡಿಸುತ್ತಿದೆ. ಜಿಲ್ಲಾಡಳಿತದ ಈ ಸರ್ವಾಧಿಕಾರಿ ಧೋರಣೆಯನ್ನು ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘವು ತೀವ್ರವಾಗಿ ಖಂಡಿಸಿದೆ. ಅಲ್ಲದೆ ಜಿಲ್ಲಾಡಳಿತದ ಸಭೆ ನಡೆಯದೆ ದೋಣಿ ತೆರವಿಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದೆ.

ನಗರದ ಕಸ್ಬಾ ಬೆಂಗರೆಯ ನದಿ ದಂಡೆಯಲ್ಲಿ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಸಾಗರ ಮಾಲಾ ಯೋಜನೆಯಡಿ ಸರಕಾರ ಕೋಸ್ಟಲ್ ಬರ್ತ್ ನಿರ್ಮಿಸುತ್ತಿದೆ. ಮೀನುಗಾರರೆ ಬಹುಸಂಖ್ಯಾತರಾಗಿರುವ ಜನದಟ್ಟಣೆಯ ಕಸ್ಬಾ ಬೆಂಗರೆ ಗ್ರಾಮಸ್ಥರು ಈ ಯೋಜನೆಯ ನಿರ್ಮಾಣವನ್ನು ಒಕ್ಕೊರಲಿನಿಂದ ವಿರೋಧಿಸಿದ್ದರು. ಆದರೆ ಪೊಲೀಸ್ ಬಲದೊಂದಿಗೆ ಜಿಲ್ಲಾಡಳಿತ ಗ್ರಾಮಸ್ಥರ ವಿರೋಧವನ್ನು ಕಡೆಗಣಿಸಿ ಕೋಸ್ಟಲ್ ಬರ್ತ್ ಕಾಮಗಾರಿಯನ್ನು ಬಿರುಸಿನಿಂದ ನಡೆಸುತ್ತಿದೆ. ಕಾಮಗಾರಿ ಇದೀಗ ಸಾಂಪ್ರದಾಯಿಕ ಮೀನುಗಾರರು ದೋಣಿ ಕಟ್ಟಿ ಹಾಕುವ ಪ್ರದೇಶಕ್ಕೆ ವಿಸ್ತರಣೆಗೊಂಡಿದೆ. ಈ ಸ್ಥಳದಲ್ಲಿ ನೂರಕ್ಕೂ ಹೆಚ್ಚು ಸಾಂಪ್ರದಾಯಿಕ ದೋಣಿಗಳು ತಂಗುತ್ತಿದೆ. ಆದರೆ ಮೀನುಗಾರಿಕಾ ಇಲಾಖೆ, ಜಿಲ್ಲಾಡಳಿತ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಸಾಂಪ್ರದಾಯಿಕ ನಾಡದೋಣಿಗಳನ್ನು ತೆರವುಗೊಳಿಸುವುದರಿಂದ ತಮ್ಮ ಉದ್ಯೋಗವೇ ಕಳೆದು ಹೋಗುತ್ತದೆ ಎಂದು ಮೀನುಗಾರರು ಆಕ್ಷೇಪ ವ್ಯಕ್ತಪಡಿಸಿ ದೋಣಿಗಳನ್ನು ತೆರವುಗೊಳಿಸಲು ಕಳೆದ ಎರಡು ತಿಂಗಳಿನಿಂದ ನಿರಾಕರಿಸುತ್ತಾ ಬಂದಿದ್ದಾರೆ ಎಂದು ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ, ಅಧ್ಯಕ್ಷ ತಯ್ಯೂಬ್ ಬೆಂಗರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಾಂಪ್ರದಾಯಿಕ ದೋಣಿಗಳು ತಂಗಲು ಸೂಕ್ತ ವ್ಯವಸ್ಥೆ, ಸಾಗರ ಮಾಲಾದಿಂದ ಮನೆಗಳನ್ನು ಕಳೆದುಕೊಳ್ಳುವ ಮೀನುಗಾರರಿಗೆ ಪುನರ್ವಸತಿಗೆ ಸಂಬಂಧಿಸಿ ಕೇವಲ ಭರವಸೆಯ ಬದಲಿಗೆ ಜಿಲ್ಲಾಡಳಿತ ಅಧಿಕೃತ ಸಭೆ ಕರೆದು ತೀರ್ಮಾನಗಳನ್ನು ಪ್ರಕಟಿಸಬೇಕು ಎಂಬ ಬೇಡಿಕೆಯನ್ನು ಪಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘವು ಜಿಲ್ಲಾಡಳಿತದ ಮುಂದಿಟ್ಟಿತ್ತು.ಅಲ್ಲಿಯವರೆಗೆ ದೋಣಿಗಳನ್ನು ತೆರವುಗೊಳಿಸದಿರಲು ನಿರ್ಧರಿಸಲಾಗಿತ್ತು. ಈ ಕುರಿತು ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಅನೌಪಚಾರಿಕ ಮಾತುಕತೆ ನಡೆಸಿ ಭರವಸೆ ನೀಡಿದ್ದರು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಮೂರು ವಾರಗಳ ಹಿಂದೆ ಸಾಂಪ್ರದಾಯಿಕ ಮೀನುಗಾರರ ಮುಖಂಡರನ್ನು ಕರೆದು ಸಮಸ್ಯೆಗಳನ್ನು ಆಲಿಸಿದ್ದು, ವಾರದೊಳಗಡೆ ಜಿಲ್ಲಾಡಳಿತದಿಂದ ಅಧಿಕೃತ ಸಭೆ ನಡೆಸುವುದಾಗಿ ಸ್ಪಷ್ಟ ಹೇಳಿಕೆ ನೀಡಿದ್ದರು. ಇದೀಗ ಮೀನುಗಾರಿಕೆ ಹಾಗೂ ಬಂದರು ಇಲಾಖೆಯ ಅಧಿಕಾರಿಗಳು ಯಾವುದೇ ಸಭೆ, ಮಾತುಕತೆ ಇಲ್ಲದೆ ಏಕಾಏಕಿ ದೋಣಿಗಳನ್ನು ತೆಗೆಯಲು ಮೀನುಗಾರರನ್ನು ಬಲವಂತ ಪಡಿಸುತ್ತಿದ್ದಾರೆ. ಒಪ್ಪದಿದ್ದಲ್ಲಿ ಬಲಪ್ರಯೋಗಿಸುವ ಬೆದರಿಕೆ ಒಡ್ಡುತ್ತಿದ್ದಾರೆ. ಜಿಲ್ಲಾಡಳಿತದ ಈ ಸರ್ವಾಧಿಕಾರಿ ಧೋರಣೆಯನ್ನು ಪಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘ ಖಂಡಿಸಿದೆ. ಅಲ್ಲದೆ ಜಿಲ್ಲಾಡಳಿತದ ಅಧಿಕೃತ ಸಭೆ, ನ್ಯಾಯಯುತ ಪರಿಹಾರ ಇಲ್ಲದೆ ದೋಣಿ ತೆರವಿಗೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ಬಲಪ್ರಯೋಗಕ್ಕೆ ಮುಂದಾದರೆ ಮೀನುಗಾರರು ಒಗ್ಗಟ್ಟಾಗಿ ಶಾಂತಿಯುತ ವಿಧಾನದಿಂದ ಎದುರಿಸುವುದಾಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X