ವರಿಷ್ಠರ ನಿರ್ಧಾರಕ್ಕೆ ಬದ್ಧ: ಶಾಸಕ ರೇಣುಕಾಚಾರ್ಯ

ಬೆಂಗಳೂರು, ಆ.4: ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ಬುಧವಾರ ಈ ಕುರಿತು ಟ್ವಿಟ್ ಮಾಡಿರುವ ಅವರು, ಬಿಜೆಪಿ ನನಗೆ ತಾಯಿ ಸಮಾನ. ಜನ ಸೇವೆಯೇ ನನ್ನ ಕಾಯಕ, ನನ್ನ ಜೀವನವನ್ನು ನನ್ನ ಮತ ಕ್ಷೇತ್ರವಾದ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಜನತೆಯ ಸೇವೆಗೆ ಮುಡಿಪಾಗಿಡುತ್ತೇನೆ ಎಂದು ನುಡಿದರು.
ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಸಂಘಟಿಸುವಂತೆ ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡುತ್ತೇನೆ ಎಂದ ಅವರು, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರಾಶರಾಗಬಾರದು ಎಂದು ಹೇಳಿದರು.
ಪಕ್ಷ ನನಗೆ ತಾಯಿ ಸಮಾನ, ನನ್ನ ಪಕ್ಷ, ಸಂಘಟನೆ ಹಾಗೂ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದ. ಜನ ಸೇವೆಯೇ ನನ್ನ ಕಾಯಕ, ನನ್ನ ಸಂಪೂರ್ಣ ಜೀವನವನ್ನು ನನ್ನ ಮತ ಕ್ಷೇತ್ರದ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ ಜನತೆಯ ಸೇವೆಗೆ ಮುಡಿಪಿಟ್ಟಿದ್ದೇನೆ.
— M P Renukacharya (@MPRBJP) August 4, 2021
ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರಾಶರಾಗದೆ ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಪಕ್ಷ ಸಂಘಟಿಸಲು ವಿನಂತಿಸುತ್ತೇನೆ.
— M P Renukacharya (@MPRBJP) August 4, 2021







