Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಧರ್ಮಸ್ಥಳ, ಕಟೀಲು, ಕುಕ್ಕೆ ದೇವಸ್ಥಾನ...

​ಧರ್ಮಸ್ಥಳ, ಕಟೀಲು, ಕುಕ್ಕೆ ದೇವಸ್ಥಾನ ವಾರಾಂತ್ಯ ಬಂದ್: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ

ತೀರ್ಥಪ್ರಸಾದ, ಅನ್ನ ಸಂತರ್ಪಣೆ ಸೇವೆಗಳಿಗೆ ಸಂಪೂರ್ಣ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ4 Aug 2021 6:27 PM IST
share
​ಧರ್ಮಸ್ಥಳ, ಕಟೀಲು, ಕುಕ್ಕೆ ದೇವಸ್ಥಾನ ವಾರಾಂತ್ಯ ಬಂದ್:  ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ

ಮಂಗಳೂರು, ಆ. 4: ಕೇರಳ ಹಾಗೂ ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕು ಹೆಚ್ಚುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲೆಯ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು, ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳನ್ನು ವಾರಾಂತ್ಯದಲ್ಲಿ ಸಂಪೂರ್ಣವಾಗಿ ಬಂದ್ ಮಾಡುವಂತೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.

ಆ.15ರವರೆಗೆ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು, ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳು ಭಕ್ತರಿಗೆ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಮಾತ್ರ ತೆರೆದಿರುತ್ತವೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸುರಕ್ಷಿತ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತರಿಗೆ ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ವಾರಾಂತ್ಯದಲ್ಲಿ (ಶನಿವಾರ-ರವಿವಾರ) ಭಕ್ತರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ವಸತಿ ಗೃಹಗಳಲ್ಲಿ ತಂಗುವುದಾಗಲಿ ಅಥವಾ ದೇವರ ದರ್ಶನಕ್ಕೆ ಅವಕಾಶವಿಲ್ಲ. ವಾರಾಂತ್ಯದಲ್ಲಿ ಎಲ್ಲ ರೀತಿಯ ಉತ್ಸವ/ ಸೇವೆಗಳು, ತೀರ್ಥ, ಪ್ರಸಾದ, ಮುಡಿ ಸೇವೆ ವಸತಿಗಳನ್ನು ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಾರಾಂತ್ಯ ಹೊರತುಪಡಿಸಿ ಉಳಿದ ದಿನಗಳಲ್ಲಿ ವಸತಿ ಗೃಹಗಳಲ್ಲಿ ತಂಗಲು ಬಯಸುವವರು 72 ಗಂಟೆಯೊಳಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರತಕ್ಕದ್ದು. ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವ ಹಾಗೂ ಕೋವಿಡ್ ಶಿಷ್ಟಾಚಾರ ನಿಯಮ ಪಾಲಿಸುವ ದೃಷ್ಟಿಯಿಂದ ಕೊಠಡಿಗಳಲ್ಲಿ ಕಡ್ಡಾಯವಾಗಿ ಹೆಚ್ಚುವರಿ ವ್ಯಕ್ತಿಗಳು ತಂಗಲು ಅವಕಾಶವಿಲ್ಲ. ಎಲ್ಲ ಕೊಠಡಿಗಳನ್ನು ವಾಸ್ತವ್ಯಕ್ಕೆ ಮೊದಲು ಸ್ಯಾನಿಟೈಸ್ ಮಾಡತಕ್ಕದ್ದು. ಭಕ್ತರು ಮಾಸ್ಕ್ ಕಡ್ಡಾಯವಾಗಿ ಧರಿಸಲು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರಕಾರದ ನಿರ್ದೇಶನದಂತೆ ಎಲ್ಲ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಿದ ನಂತರವೂ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗುತ್ತಿದ್ದು, ಈ ಹಂತದಲ್ಲಿಯೇ ಕಠಿಣ ನಿರ್ಬಂಧ ಅನುಷ್ಠಾನಗೊಳಿಸದೇ ಇದ್ದಲ್ಲಿ ಸಂಭಾವ್ಯ 3ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಕಷ್ಟಸಾಧ್ಯ. ಕಟೀಲು, ಧರ್ಮಸ್ಥಳ ಮತ್ತು ಶ್ರೀಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಹೊರ ರಾಜ್ಯಗಳಿಂದ ಹಾಗೂ ಹೊರ ಜಿಲ್ಲೆಗಳಿಂದ ಭಕ್ತರು ಬರುವುದನ್ನು ನಿಯಂತ್ರಿಸಲು ನೂತನ ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X