Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳದ ಸುನೀಲ್‌ ಕುಮಾರ್‌ಗೆ ಕೊನೆಗೂ...

ಕಾರ್ಕಳದ ಸುನೀಲ್‌ ಕುಮಾರ್‌ಗೆ ಕೊನೆಗೂ ಒಲಿಯಿತು ಸಚಿವ ಸ್ಥಾನ

ಹಿಂದುತ್ವದ ಅಲೆಯೇರಿ ಬಂದ ಬಿಜೆಪಿಯ ಯಂಗ್ ಟರ್ಕ್

ವಾರ್ತಾಭಾರತಿವಾರ್ತಾಭಾರತಿ4 Aug 2021 7:40 PM IST
share
ಕಾರ್ಕಳದ ಸುನೀಲ್‌ ಕುಮಾರ್‌ಗೆ ಕೊನೆಗೂ ಒಲಿಯಿತು ಸಚಿವ ಸ್ಥಾನ

ಉಡುಪಿ, ಆ.4: ರಾಜ್ಯ ಭಾರತೀಯ ಜನತಾ ಪಕ್ಷದ ‘ಯಂಗ್‌ ಟರ್ಕ್’ ಗಳಲ್ಲಿ ಪ್ರಮುಖವಾಗಿ ಗುರುತಿಸಲ್ಪಡುವ, ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ವಿ.ಸುನೀಲ್ ಕುಮಾರ್ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸ್ಥಾನ ಗಳಿಸಿದ್ದು, ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲೇ 2019ರಲ್ಲಿ ಸಚಿವರಾಗಿ ಆಯ್ಕೆಯಾಗುವ ನಿರೀಕ್ಷೆ ಹೊಂದಿದ್ದ ಸುನೀಲ್ ಕುಮಾರ್, ಬಿಲ್ಲವ ಸಮುದಾಯದ ಹಿರಿಯ ಶಾಸಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹೈಕಮಾಂಡ್ ಮಣೆ ಹಾಕಿದಾಗ ನಿರಾಶೆ ಅನುಭವಿಸಿದ್ದರೂ ಈ ಬಾರಿ ಬಹುಕಾಲದ ನಿರೀಕ್ಷೆಯನ್ನು ಈಡೇರಿಸಿಕೊಳ್ಳಲು ಸಫಲರಾದರು.

ಜಿಲ್ಲೆಯಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕುಂದಾಪುರದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಹಿಂದಿಕ್ಕಿ ಇದೀಗ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದು ಜಿಲ್ಲೆಯ ರಾಜಕೀಯದಲ್ಲಿ ಎಂಥ ಪರಿಣಾಮ ಬೀರಲಿದೆ ಎಂಬುದನ್ನು ಕಾದುನೋಡಬೇಕಿದೆ.
ಎಂ.ಕೆ.ವಾಸುದೇವ ಹಾಗೂ ಕೆ.ಪಿ.ಪ್ರಮೋದಾ ದಂಪತಿಯ ಪುತ್ರನಾಗಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ 1975ರ ಆಗಸ್ಟ್ 15ರಂದು ಜನಿಸಿದ ಸುನೀಲ್ ಕುಮಾರ್, ಒಂದರಿಂದ ನಾಲ್ಕನೇ ತರಗತಿ ತನಕ ಕಾರ್ಕಳ ಪುಲ್ಕೇರಿಯ ರಾಮಪ್ಪ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಐದರಿಂದ ಏಳನೇ ತರಗತಿ ತನಕ ಚಿಕ್ಕಮಗಳೂರಿನ ಬಸವನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರೌಢಶಾಲಾ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಶಿವಮೊಗ್ಗ ಜಿಲ್ಲೆಯ ಹಿತ್ತಲದ ಪದವಿ ಪೂರ್ವ ಕಾಲೇಜಿನಲ್ಲಿ ಪಡೆದಿದ್ದಾರೆ.

ಚಿಕ್ಕಮಗಳೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಕಲಾ ಪದವಿ ಪಡೆದ ಇವರು, ಪ್ರಾರಂಭದಲ್ಲಿ ಪತ್ರಕರ್ತನಾಗಿ ವೃತ್ತಿ ಜೀವನ ಆರಂಭಿಸಿದರು. ಚಿಕ್ಕಂದಿನಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಗುರುತಿಸಿ ಕೊಂಡಿದ್ದ ಸುನೀಲ್ ಕುಮಾರ್, ಅದರದೇ ಗರಡಿ ಯಲ್ಲಿ ಪಳಗಿ ಬಜರಂಗದಳದ ಮೂಲಕ ರಾಜಕೀಯದಲ್ಲಿ ಮುನ್ನಲೆಗೆ ಬಂದರು.

1997ರಲ್ಲಿ ದತ್ತಪೀಠದ ಹೋರಾಟದಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಂಘಟನೆಯಲ್ಲಿ ಬಳಿಕ ಪಕ್ಷದಲ್ಲಿ ಎಲ್ಲರಿಂದಲೂ ಗುರುತಿಸಲ್ಪಟ್ಟರು. ಇವರ ಕೆಂಡ ಉಗುಳುವ ಪ್ರಖರ ಭಾಷಣ ವೈಖರಿ ಪಕ್ಷದಲ್ಲಿ ಬಹುಬೇಗನೇ ಎಲ್ಲರ ಗಮನ ಸೆಳೆಯಿತು. ಮುಂದೆ ಬಜರಂಗದಳ ಚಿಕ್ಕಮಗಳೂರು ಜಿಲ್ಲಾ ಸಂಚಾಲಕರಾಗಿ, ಕರ್ನಾಟಕ ರಾಜ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಿದರು.

ಈ ಹಂತಕ್ಕಾಗಲೇ ತಮ್ಮ ಪ್ರಖರ ಹಿಂದುತ್ವ ಪ್ರತಿಪಾದನೆಯ ಭಾಷಣಗಳ ಮೂಲಕ ಯುವಜನರನ್ನು ಸೆಳೆದು ಪಕ್ಷದ ವರಿಷ್ಠರನ್ನು ಸೆಳೆಯುವಲ್ಲಿ ಸಫಲರಾದ ಸುನೀಲ್ ಕುಮಾರ್, 2004ರಲ್ಲಿ ಭಾರತೀಯ ಜನತಾ ಪಕ್ಷದ ಪ್ರತಿನಿಧಿಯಾಗಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕಾರ್ಕಳ ಕ್ಷೇತ್ರದಲ್ಲಿ ಶಾಸಕರಾಗಿದ್ದ ಗೋಪಾಲ ಭಂಡಾರಿ ಅವರನ್ನು ಸೋಲಿಸಿ ಭಾರೀ ಬಹುಮತದೊಂದಿಗೆ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದರು.

2008ರಲ್ಲಿ ಮತ್ತೆ ಸ್ಪರ್ಧಿಸಿ ಕಾಂಗ್ರೆಸ್‌ನ ಗೋಪಾಲ ಭಂಡಾರಿ ವಿರುದ್ಧ ಸೋಲು ಅನುಭವಿಸಿದ್ದ ಇವರು, 2012ರಲ್ಲಿ ನಡೆದ ಉಡುಪಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೆ.ಜಯಪ್ರಕಾಶ್ ಹೆಗ್ಡೆ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ ಮತ್ತೆ ಸೋಲನುಭವಿಸಿದರು.

2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾರ್ಕಳದಿಂದ ಸ್ಪರ್ಧಿಸಿ ಈ ಬಾರಿ ಭಂಡಾರಿ ಅವರನ್ನೇ ಸೋಲಿಸಿ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಈ ಅವಧಿಯಲ್ಲಿ ಇವರು ಕರ್ನಾಟಕ ಸರಕಾರದ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಆಯ್ಕೆಯಾದರು. ನಂತರ 2018ರ ಚುನಾವಣೆ ಯಲ್ಲೂ ಅವರು ಬಿಜೆಪಿಗೆ ಮತ್ತೆ ಭರ್ಜರಿ ಗೆಲುವು ದೊರಕಿಸಿಕೊಟ್ಟರು. ಅವರನ್ನು ಪಕ್ಷ ಮುಖ್ಯ ಸಚೇತಕರಾಗಿ ಮತ್ತೆ ನೇಮಕ ಮಾಡಿತು.

ವಿವಾದಿತ ಹೇಳಿಕೆ, ಪ್ರಚೋದನಕಾರಿ ಭಾಷಣ ಹಾಗೂ ಬಾಬಾ ಬುಡನ್ ಗಿರಿ ವಿವಾದಕ್ಕೆ ಸಂಬಂಧಿಸಿ ಅವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ತಮ್ಮ ಸಮಕಾಲೀನರಾದ ಸಿ.ಟಿ.ರವಿ ಹಲವು ಬಾರಿ ಸಚಿವರಾದರೂ ತಮಗೆ ಸಚಿವ ಸ್ಥಾನ ಸಿಗದ ಇದ್ದುದರಿಂದ ನಿರಾಶರಾಗಿದ್ದ ಸುನೀಲ್ ಕುಮಾರ್ ಕಳೆದ ಬಾರಿ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದರು. ಆದರೆ ಇದೀಗ ಕೊನೆಗೂ ಅವರು ಸಚಿವರಾಗಿದ್ದಾರೆ.

ಶಾಸಕರಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯ ಕೈಗೊಂಡಿರುವ ಅವರು, 180ಕ್ಕೂ ಅಧಿಕ ಕಿಂಡಿ ಅಣೆಕಟ್ಟು ಗಳನ್ನು ನಿರ್ಮಾಣಕ್ಕೆ ಕಾರಣರಾಗಿದ್ದಾರೆ. ಸ್ವರ್ಣನದಿಗೆ ಎಣ್ಣೆಹೊಳೆಯಲ್ಲಿ ಸುಮಾರು 108 ಕೋಟಿ ರೂ.ವೆಚ್ಚದಲ್ಲಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಮುಂದಾ ಗಿದ್ದಾರೆ. ಕಾರ್ಕಳದಲ್ಲಿ ಕೋಟಿ ಚೆನ್ನಯ್ಯರ ಹೆಸರಿನಲ್ಲಿ ಕೋಟಿ ಚೆನ್ನಯ ಥೀಂ ಪಾರ್ಕ್‌ನ್ನು ಸುಮಾರು ಒಂದು ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿದ್ದಾರೆ.

ಕೊರೋನ ಸಾಂಕ್ರಾಮಿಕದ ಮೂರನೇ ಅಲೆಯ ಸಂದರ್ಭದಲ್ಲಿ ಕ್ಷೇತ್ರದ ಮಕ್ಕಳನ್ನು ಇದರಿಂದ ರಕ್ಷಿಸಲು ರಾಜ್ಯದಲ್ಲೇ ವಿನೂತನವಾದ ‘ವಾತ್ಸಲ್ಯ’ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, 15 ವರ್ಷದೊಳಗಿನ ಸುಮಾರು 40,000 ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮದೊಂದಿಗೆ ಪೌಷ್ಠಿಕಾಂಶಯುಕ್ತ ಕಿಟ್ ವಿತರಿಸುವ ಕಾರ್ಯಕ್ರಮ ಇದೀಗ ಕ್ಷೇತ್ರದಾದ್ಯಂತ ನಡೆಯುತ್ತಿದೆ. ಇದರೊಂದಿಗೆ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಐಸಿಯು ಘಟಕ ಸ್ಥಾಪನೆಗೂ ಚಾಲನೆಯನ್ನು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X