ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿಗೆ 8ನೇ ತರಗತಿ ಪ್ರವೇಶಕ್ಕಾಗಿ ಅರ್ಹತಾ ಪರೀಕ್ಷೆ
ಬೆಂಗಳೂರು, ಆ.5: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿಗೆ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿ.18, 2021 ರಂದು ನಡೆಸಲಾಗುತ್ತದೆ.
ಅಭ್ಯರ್ಥಿಗಳು ಯಾವುದೇ ಸರಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ಜು.2, 2022ರಂತೆ 11 1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.
ಈ ಸಂಸ್ಥೆಯ ಮುಖ್ಯಗುರಿ ಯುವಕರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ಧಗೊಳಿಸುವುದು ಹಾಗೂ ಈ ನಿಟ್ಟಿನಲ್ಲಿ ಯುವಕರಿಗೆ ಸರ್ವರೀತಿಯ ವಿದ್ಯಾಭ್ಯಾಸ, ತರಬೇತಿ ನೀಡುವುದು. ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿದ್ಯಾಭ್ಯಾಸ ಶುಲ್ಕ (ಸಾಮಾನ್ಯವರ್ಗ) 1,07,500ರೂ. ಹಾಗೂ (ಎಸ್ಸಿ/ಎಸ್ಟಿ) ರೂ. 93,900 ಆಗಿರುತ್ತದೆ. ಈ ಶುಲ್ಕವು ಕಾಲಕಾಲಕ್ಕೆ ಹೆಚ್ಚಾಗಬಹುದು. ವಿದ್ಯಾರ್ಥಿಯು ಪ್ರವೇಶ ನೀಡುವಾಗ 30ಸಾವಿರ ರೂ. ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಈ ಮೊತ್ತವನ್ನು ವಿದ್ಯಾರ್ಥಿಯು ಪದವೀಧರನಾದ ಬಳಿಕ ಹಿಂತಿರುಗಿಸಲಾಗುವುದು.
ಅರ್ಜಿ ನಮೂನೆಗಳನ್ನು ಹಾಗೂ ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು, ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್ ನಂ:248003 ಮೂಲಕ ಪಡೆಯಬಹುದು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂ.080-25589459 ಅಥವಾ ಸಮೀಪದಲ್ಲಿರುವ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.







