Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾನವೀಯ ಮೌಲ್ಯಗಳನ್ನು ಕಾನೂನಿನ...

ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿಗೆ ಅಳವಡಿಸುವುದು ಅಗತ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ6 Aug 2021 6:24 PM IST
share
ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿಗೆ ಅಳವಡಿಸುವುದು ಅಗತ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಆ.6: ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಅಳವಡಿಸುವುದರಿಂದ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯುವುದಲ್ಲದೆ, ನ್ಯಾಯಾಂಗ ಇನ್ನಷ್ಟು ಮಾನವೀಯ ಹಾಗೂ ಜನಸ್ನೇಹಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಶುಕ್ರವಾರ ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ವಿಜ್ಞಾನೇಶ್ವರ ಅಧ್ಯಯನ ಪೀಠವು ಏರ್ಪಡಿಸಿದ್ದ “ಕರ್ನಾಟಕದಲ್ಲಿ ಮಿತಾಕ್ಷರ, ವಚನ ದಾಸ ಮತ್ತು ಜಾನಪದ ಸಾಹಿತ್ಯದಲ್ಲಿ ಕಾನೂನಿನ ಸಮಾಜಮುಖಿ ಮೌಲ್ಯಗಳು- ಒಂದು ಪರಿಶೋಧನೆ” ಎಂಬ ವಿಷಯದ ಕುರಿತ ವೆಬಿನಾರ್ ಅನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದ ವಚನ, ದಾಸ ಸಾಹಿತ್ಯ ಹಾಗೂ ಜಾನಪದ ಸಾಹಿತ್ಯಗಳು ಸಮಾನತೆ, ಸಹಿಷ್ಣುತೆ, ಧನ್ಯತೆ, ಕ್ಷಮಾಗುಣ ಮೊದಲಾದ ಭಾವಗಳನ್ನು ಸಮರ್ಥವಾಗಿ ಅಭಿವ್ಯಕ್ತಪಡಿಸಿವೆ, ಈ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಅಳವಡಿಸುವ ನಿಟ್ಟಿನಲ್ಲಿ ವಿಜ್ಞಾನೇಶ್ವರ ಅಧ್ಯಯನ ಪೀಠ ಕಾರ್ಯನಿರ್ವಹಿಸಬೇಕಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸಮಾಜದಲ್ಲಿನ ಬದಲಾವಣೆಗಳೊಂದಿಗೆ ಕಾನೂನಿನಲ್ಲಿಯೂ ಪರಿವರ್ತನೆಗಳಾಗಿವೆ. ಇಂದಿನ ದಿನಗಳಲ್ಲಿ ಸಾಮಾಜಿಕ ಸ್ಥಿತಿಗತಿಗಳಲ್ಲಿ, ವ್ಯಕ್ತಿ-ವ್ಯಕ್ತಿಯ ಸಂಬಂಧದಲ್ಲಿ, ಸಮಾಜ- ಸಮಾಜದ ಸಂಬಂಧದಲ್ಲಿ ಅಗಾಧ ಬದಲಾವಣೆಗಳಾಗುತ್ತಿದೆ. ಅಂತೆಯೇ ಕಾನೂನಿನ ಕುರಿತ ಜನತೆಯ ಚಿಂತನೆಯಲ್ಲಿಯೂ ಬದಲಾವಣೆಗಳಾಗುತ್ತಿದೆ. ಈ ಅಂಶಗಳ ಕುರಿತು ಅಧ್ಯಯನ ಪೀಠ ಅಧ್ಯಯನ ನಡೆಸಬೇಕು ಎಂದು ಅವರು ಆಶಿಸಿದರು.

ಕರ್ನಾಟಕದ ಸಾಹಿತ್ಯ ಕ್ಷೇತ್ರದ ಕ್ರಾಂತಿ ಗಮನಾರ್ಹವಾದುದು. ನಮ್ಮ ದೇಶದ ಕಾನೂನಿಗೆ ಆಧಾರವಾದ ಸಂವಿಧಾನದ ಆಶಯಗಳು ಬಸವಣ್ಣನವರ ಚಿಂತನೆಗಳನ್ನೇ ಬಿಂಬಿಸುತ್ತದೆ ಎಂದು ಅಭಿಪ್ರಾಯಪಟ್ಟ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಸಕ್ತಿ ವಹಿಸಿ ಸ್ಥಾಪಿಸಿದ ಈ ಅಧ್ಯಯನ ಪೀಠವು ರಾಷ್ಟ್ರೀಯ, ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವಂತಾಗಲಿ ಎಂದು ನುಡಿದರು.

ವಿಜ್ಞಾನೇಶ್ವರ ಅಧ್ಯಯನ ಪೀಠದ ಅಧ್ಯಕ್ಷ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನ್ಯಾ. ಶಿವರಾಜ್ ಪಾಟೀಲ, ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಾಧೀಶ ನ್ಯಾ.ಬಿ.ಎನ್.ಶ್ರೀಕೃಷ್ಣ, ಕರ್ನಾಟಕ ಕಾನೂನು ವಿವಿ ಕುಲಪತಿ ಪ್ರೊ.ಈಶ್ವರ ಭಟ್, ಸಚಿವರಾದ ವಿ.ಸೋಮಣ್ಣ, ಡಾ.ಕೆ.ಸುಧಾಕರ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಗಿರೀಶ್ ಹೊಸೂರು ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X