Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹದಿಂದ...

ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹದಿಂದ ಅಂದಾಜು 7800 ಕೋಟಿ ರೂಪಾಯಿ ಹಾನಿ; ಸಚಿವ ಗೋವಿಂದ ಕಾರಜೋಳ

ಸಂತ್ರಸ್ತರ ಖಾತೆಗೆ ಪರಿಹಾರ ಜಮೆ ಮಾಡಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 Aug 2021 6:43 PM IST
share
ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹದಿಂದ ಅಂದಾಜು 7800 ಕೋಟಿ ರೂಪಾಯಿ ಹಾನಿ; ಸಚಿವ ಗೋವಿಂದ ಕಾರಜೋಳ

ಬೆಳಗಾವಿ, ಆ.6: ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾಗುವ ಜನರಿಗೆ ಅಗತ್ಯವಿರುವ ಕಡೆಗಳಲ್ಲಿ ಹೊಸದಾಗಿ ಬಡಾವಣೆ ಅಭಿವೃದ್ಧಿಪಡಿಸಿ ನೀರು, ವಿದ್ಯುತ್ ಸೇರಿ ಎಲ್ಲ ಮೂಲಸೌಕರ್ಯಗಳನ್ನು ಕಲ್ಪಿಸಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ ನಡೆದ ಕೋವಿಡ್ ಹಾಗೂ ಪ್ರವಾಹ ಸ್ಥಿತಿ ನಿರ್ವಹಣೆ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪುನರ್ವಸತಿ ಕಾಯ್ದೆ ಪ್ರಕಾರ ಸಂತ್ರಸ್ತರಿಗೆ 40/60 ಅಳತೆಯ ನಿವೇಶನದಲ್ಲಿ ಸೂರು ಒದಗಿಸಲು ಸಮರ್ಪಕ ಯೋಜನೆ ರೂಪಿಸಬೇಕು ಎಂದು ಹೇಳಿದರು.

ಮುಳುಗಡೆಯಾಗುವ ಗ್ರಾಮಗಳ ಜನರಿಗೆ ತಾತ್ಕಾಲಿಕ ಶೆಡ್ ನಿರ್ಮಿಸಿ ಮೂಲಸೌಕರ್ಯವನ್ನು ಒದಗಿಸಬೇಕು. ಈ ಹಿಂದೆ 2009-10ನೇ ಸಾಲಿನಲ್ಲಿ ಪ್ರವಾಹ ಬಂದಾಗ ಕೆಲ ಗ್ರಾಮಗಳನ್ನು ಸ್ಥಳಾಂತರಿಸಿ 'ಆಸರೆ' ಮನೆಗಳನ್ನು ನೀಡಲಾಗಿತ್ತು. ಈ ಬಗ್ಗೆ ಪರಿಶೀಲಿಸಿ ಮಾಹಿತಿಯನ್ನು ಒದಗಿಸಬೇಕು ಎಂದು ಅವರು ತಿಳಿಸಿದರು.

ನದಿತೀರದ ಪ್ರದೇಶಗಳಲ್ಲಿ ಮಳೆ ಹಾಗೂ ನೀರು ಹರಿವು ಪ್ರಮಾಣಕ್ಕೆ ಸಂಬಂಧಿಸಿದಂತೆ ಪ್ರವಾಹ ಮುನ್ಸೂಚನೆ ವ್ಯವಸ್ಥೆಯನ್ನು ಬಲಪಡಿಸಲು ತಂತ್ರಜ್ಞಾನ ಆಧಾರಿತ ಮುನ್ಸೂಚನೆ ವ್ಯವಸ್ಥೆ ಕಲ್ಪಿಸಲು ಸೂಕ್ತ ಪ್ರಸ್ತಾವ ಸಲ್ಲಿಸಿ. ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಮನೆ ಕಳೆದುಕೊಂಡಿರುವ ಕುಟುಂಬಗಳಿಗೆ ಸರಕಾರ ಘೋಷಿಸಿರುವ ಹತ್ತು ಸಾವಿರ ರೂಪಾಯಿ ಪರಿಹಾರದ ಹಣವನ್ನು ಆರ್.ಟಿ.ಜಿ.ಎಸ್. ಮೂಲಕ ಆಯಾ ಕುಟುಂಬಗಳಿಗೆ ಪಾವತಿಸಬೇಕು ಎಂದು ಗೋವಿಂದ ಕಾರಜೋಳ ಸೂಚನೆ ನೀಡಿದರು.

ಅತಿವೃಷ್ಟಿಯಿಂದ ಒಟ್ಟಾರೆ 7800 ಕೋಟಿ ಹಾನಿ: ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳೆ, ರಸ್ತೆ, ಸೇತುವೆ ಇತರ ಮೂಲಸೌಕರ್ಯಗಳು ಸೇರಿದಂತೆ ಒಟ್ಟಾರೆ 7800 ಕೋಟಿ ರೂಪಾಯಿ ಹಾನಿಯಾಗಿದೆ. 21300 ವಿದ್ಯುತ್ ಕಂಬಗಳು ಹಾಗೂ 5300 ಟ್ರಾನ್ಸ್‍ಫಾರ್ಮರ್ ನೀರಿನಲ್ಲಿ ಮುಳುಗಡೆಯಾಗಿವೆ. ನೀರು ಕಡಿಮೆಯಾದ ಬಳಿಕ ಹಾನಿ ಅಂದಾಜು ಮಾಡಬೇಕು ಎಂದು ಅವರು ತಿಳಿಸಿದರು.

ಜಮೀನಿನಲ್ಲಿ ನೀರಿರುವುದರಿಂದ ಒಂದು ವೇಳೆ ಸಮೀಕ್ಷೆಗೆ ಅಡ್ಡಿಯಾದರೆ ಜಿ.ಪಿ.ಎಸ್.ಆಧಾರಿತ ಸಮೀಕ್ಷೆಯ ಸಾಧ್ಯತೆ ಕುರಿತು ಪರಿಶೀಲಿಸಬೇಕು. ಮಳೆಯಿಂದ ವಿದ್ಯುತ್ ಪೂರೈಕೆ ತೊಂದರೆಯಾದ ಕಡೆಗಳಲ್ಲಿ ತಕ್ಷಣವೇ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಬೇಕು. ಒಂದು ವೇಳೆ ಪ್ರವಾಹ ಉಂಟಾದರೆ ನಂತರದ ದಿನಗಳಲ್ಲಿ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಲು ಅನುಕೂಲವಾಗುವಂತೆ ಅಗತ್ಯ ಪರಿಕರಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಅವರು ತಿಳಿಸಿದರು.

ರೈತರಿಗೆ ವಿದ್ಯುತ್ ಟಿಸಿ ಒದಗಿಸುವ ಸಂದರ್ಭದಲ್ಲಿ ಉಂಟಾಗುವ ತೊಂದರೆಗಳನ್ನು ನೀಗಿಸಲು ಕ್ರಮ ಕೈಗೊಳ್ಳಬೇಕು. ಟಿಸಿ ದುರಸ್ತಿ ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅನುಮತಿ ನೀಡಬೇಕು. ಟಿಸಿ ದುರಸ್ತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ವಾತಾವರಣ ಸೃಷ್ಟಿಸಿದರೆ ರೈತರಿಗೆ ತುರ್ತಾಗಿ ಗುಣಮಟ್ಟದ ಸೇವೆ ದೊರಕುತ್ತದೆ. ಆದುದರಿಂದ, ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದರು.

ಕೋವಿಡ್ 3 ನೇ ಅಲೆ ಸೂಕ್ತ ಸಿದ್ಧತೆಗೆ ಸೂಚನೆ: ಕೋವಿಡ್ ಸಂಭವನೀಯ ಮೂರನೇ ಅಲೆ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣೆ ಮುಖ್ಯವಾಗಿದೆ. ಆದುದರಿಂದ, ಜಿಲ್ಲೆಯ ಎಲ್ಲ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್, ಔಷಧಿ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು. ಇದಕ್ಕಾಗಿ ಸೂಕ್ತ ಪ್ರಸ್ತಾವ ಸಲ್ಲಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಗೋವಿಂದ ಕಾರಜೋಳ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಲಕ್ಷ್ಮಣ ನಿಂಬರಗಿ, ಡಿಸಿಪಿ ವಿಕ್ರಮ್ ಆಮಟೆ, ಅಪರ ಜಿಲ್ಲಾ ಅಶೋಕ ದುಡಗುಂಟಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X