Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉದ್ಯೋಗಕ್ಕಾಗಿ ಕಾಯಬೇಡಿ, ನೀವೇ...

ಉದ್ಯೋಗಕ್ಕಾಗಿ ಕಾಯಬೇಡಿ, ನೀವೇ ಉದ್ಯೋಗಗಳನ್ನು ಸೃಷ್ಟಿಸಿ: ಅಬ್ದುಲ್ಲಾ ಮಾದುಮೂಲೆ

ವಾರ್ತಾಭಾರತಿವಾರ್ತಾಭಾರತಿ6 Aug 2021 6:49 PM IST
share
ಉದ್ಯೋಗಕ್ಕಾಗಿ ಕಾಯಬೇಡಿ, ನೀವೇ ಉದ್ಯೋಗಗಳನ್ನು ಸೃಷ್ಟಿಸಿ: ಅಬ್ದುಲ್ಲಾ ಮಾದುಮೂಲೆ

ಬೆಳ್ತಂಗಡಿ : ನೀವು ಶ್ರೀಮಂತರಾಗಬೇಕೆಂಬ ಧ್ಯೇಯ ಹೊಂದಿದ್ದರೆ ಬೇರೆಯವರಿಗಾಗಿ ದುಡಿಯಬೇಡಿ. ನಿಮ್ಮ ಅಭಿವೃದ್ಧಿಗಾಗಿಯಷ್ಟೇ ಶ್ರಮ ಪಡಿ. ನಿಮ್ಮ ಕನಸುಗಳನ್ನು ಸಾಕಾರಮಾಡಿಕೊಳ್ಳಬೇಕಾದರೆ ಉದ್ಯೋಗಕ್ಕಾಗಿ ಕಾಯಬೇಡಿ, ಬದಲಾಗಿ ನೀವೇ ಇತರರಿಗೆ ಉದ್ಯೋಗ ಸೃಷ್ಟಿಸಿಕೊಡುವಷ್ಟು ಪ್ರಬಲವಾಗಿ ಬೆಳೆಯಲು ನಿರ್ಧರಿಸಿ, ಅದರಂತೆಯೇ ಮುನ್ನಡೆದು ಯಶಸ್ಸು ಪಡೆಯಿರಿ ಎಂದು ಅಬುಧಾಬಿ ಸರ್ಕಾರದ ಸೈಬರ್ ಫೌಂಡೇಶನ್ ಹಿರಿಯ ಆರ್ಥಿಕ ನಿಯಂತ್ರಣ ಅಧಿಕಾರಿಯಾದ ಸಿ.ಎ. ಅಬ್ದುಲ್ಲಾ ಮಾದುಮೂಲೆ ತಿಳಿಸಿದರು.

ಅವರು ಇತ್ತೀಚೆಗೆ ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಹಳೆ ವಿದ್ಯಾರ್ಥಿಗಳು, ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ನೇಮಕಾತಿ ಕೋಶ ಹಾಗೂ ಎಸ್.ಡಿ.ಎಂ - ಜಾಗತಿಕ ಮಟ್ಟದ ವಿದ್ಯಾರ್ಥಿ ಸಂಘ (ಗ್ಲೋಬಲ್ ಅಲ್ಯುಮ್ನಿ ಅಸೋಸಿಯೇಷನ್) ಆಯೋಜಿಸಿದ್ದ ಜಾಗತಿಕ ಮಟ್ಟದ ವಿದ್ಯಾರ್ಥಿ ಸಂಘದ ವೆಬಿನಾರ್ ಸರಣಿಯ ಪ್ರಥಮ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.

'ಶ್ರೀಮಂತರಾಗಬೇಕೆ ? ಕೆಲಸ ಮಾಡಬೇಡಿ' ಎಂಬ ವಿಷಯಾಧರಿಸಿ ಮಾತನಾಡಿದ ಅವರು, ಇತರರಿಗಾಗಿ ದುಡಿಯುವುದರಿಂದ ನೀವು ಸೇವಕರಷ್ಟೇ ಆಗುತ್ತೀರಿ. ಆದರೆ ನಿಮಗಾಗಿ ದುಡಿದಾಗ ನೀವು ಧನಿಕರಾಗುತ್ತೀರಿ. ನಾವು ಸ್ವಾವಲಂಬಿಗಳಾಗಬೇಕು ಮತ್ತು ನಮ್ಮ ಅಭಿವೃದ್ಧಿಯನ್ನು ಕೌಶಲ್ಯಗಳ ಮೂಲಕ ಸಾಧಿಸಬೇಕು. ಆಗ ಮಾತ್ರ ಒಬ್ಬ ವ್ಯಕ್ತಿಯ ಅಭಿವೃದ್ಧಿ ಸಮಾಜದ ಅಭಿವೃದ್ಧಿಯಾಗಲು ಸಾಧ್ಯ ಎಂದರು.

ಜೀವನದಲ್ಲಿ ಯಶಸ್ಸು ಸಾಧಿಸಲು ನೀವು ಇತರರಿಗಿಂತ ಭಿನ್ನವಾದ ಕೌಶಲ್ಯಗಳನ್ನು ಮೈಗೂಡಿಸಿಕೊಂಡಿರಬೇಕು. ಅದಕ್ಕಾಗಿ ನೀವು ಮಿತಿಗಳನ್ನು ಮೀರಿ ಯೋಚಿಸಿ. ಅವಕಾಶಗಳನ್ನು ಸಕಾರಾತ್ಮಕವಾಗಿ ನೋಡಿ. ಅವಕಾಶಗಳಿಗಾಗಿ ನಿಮ್ಮ ಸುತ್ತಮುತ್ತ ಹುಡುಕಬೇಕೆ ವಿನಾ ಅದಕ್ಕಾಗಿ ಗೂಗಲ್ ನಲ್ಲಿ ಹುಡುಕಿ ಪ್ರಯೋಜನವಿಲ್ಲ. ಅಲ್ಲದೆ ನೀವು ಹೊಸತನ್ನು ಸಾಧಿಸಲು ಮುಂದಾದಾಗ ಕೆಲವು ಜನರು ನಿಮ್ಮನ್ನು ಮೂದಲಿಸಬಹುದು. ಅಂಥವರಿಂದ ದೂರವಿದ್ದು, ನಿಮ್ಮ ಗುರಿಯೆಡೆಗೆ ಗಮನ ನೀಡಿದಾಗ ಯಶಸ್ಸು ನಿಮ್ಮದಾಗುತ್ತದೆ ಎಂದು ಕಿವಿಮಾತು ಹೇಳಿದರು.

ಸಾಧ್ಯತೆಗಳು ಬಹಳಷ್ಟಿವೆ. ಒಂದು ವೇಳೆ ಅವಕಾಶದ ಹಿಂದೆ ಬಿದ್ದು ಸೋತರೂ ಎದೆಗುಂದಬೇಡಿ. ಯಾಕೆಂದರೆ ಆ ಸೋಲು ನಿಮ್ಮನ್ನು ಗಟ್ಟಿಗೊಳಿಸುತ್ತದೆ. ನೀವು ಗೆದ್ದ ಮೇಲೆ ನಡೆದು ಬಂದ ದಾರಿಯನ್ನು ಮರೆಯಬೇಡಿ. ನೀವು ಬೆಳೆದುಬಂದ ಸಮಾಜ ಸಬಲತೆಯನ್ನು ಸಾಧಿಸಲು ಸಹಕರಿಸಿ. ಇದು ನಿಮ್ಮ ವ್ಯಕ್ತಿತ್ವವನ್ನು ಉನ್ನತ ಮಟ್ಟಕ್ಕೇರಿಸುತ್ತದೆ. ಓದುವುದನ್ನು ಎಲ್ಲೂ ನಿಲ್ಲಿಸಬೇಡಿ ಮತ್ತು ಕೆಲಸದವರನ್ನು ಗೌರವದಿಂದ ಕಾಣಿರಿ ಎಂದರು.

ಇದೇ ವೇಳೆ ತಮ್ಮ ಕಾಲೇಜು ಜೀವನವನ್ನು ಸ್ಮರಿಸಿದ ಅವರು, ಜೀವನಕ್ಕೆ ಅಗತ್ಯ ಸಂಸ್ಕಾರ ಕಲಿಸಿದ ಎಸ್.ಡಿ.ಎಂ ವಿದ್ಯಾ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಎನಿಸಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದರು. ಈ ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರಾಗಿ ಸೇರಿ ಮಾಡುವ ಸೇವೆ ನಾವು ಗುರುಗಳಿಗೆ ಮತ್ತು ಸಂಸ್ಥೆಗೆ ನೀಡುವ ಗುರುದಕ್ಷಿಣೆ ಎಂದು ಅಭಿಪ್ರಾಯಪಟ್ಟರು.

ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗ, ತಂತ್ರಜ್ಞಾನ ಹಾಗೂ ಕೌಶಲ್ಯ ಅಭಿವೃದ್ಧಿಯ ಮಾಹಿತಿ ನೀಡುವ ಉದ್ದೇಶದಿಂದ ಹಳೆ ವಿದ್ಯಾರ್ಥಿಗಳೊಂದಿಗೆ ಈ ರೀತಿಯ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆನ್‌ಲೈನ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ, ಹಿರಿಯ ಹಾಗೂ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X