ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ನೇಮಕ

ಬೆಂಗಳೂರು, ಆ. 6: ನಿವೃತ್ತ ಪ್ರಧಾನ ಮುಖ್ಯ ಅಭಿಯಂತರ ಅನಿಲ್ ಕುಮಾರ್ ಇವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿಯನ್ನಾಗಿ ಗುತ್ತಿಗೆ ಆಧಾರದ ಮೇಲೆ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಎನ್.ರಂಗರಾಜು ಇವರನ್ನು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ ಎಂದು ಸಿಆಸುಇ ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಅಧಿಸೂಚನೆ ಹೊರಡಿಸಿದ್ದಾರೆ.
Next Story





