ಫೈನಾನ್ಶಿಯರ್ ಹತ್ಯೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ
ಕುಂದಾಪುರ, ಆ.6: ಕೋಟೇಶ್ವರ ಸಮೀಪದ ಕಾಳಾವರ- ಅಸೋಡು ಎಂಬಲ್ಲಿ ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಅನೂಪ್ ಶೆಟ್ಟಿಯನ್ನು ಆ.19ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕುಂದಾಪುರ ನ್ಯಾಯಾಲಯ ಇಂದು ಆದೇಶಿಸಿದೆ.
ಗೋವಾದಲ್ಲಿ ಬಂಧನಕ್ಕೆ ಒಳಗಾದ ಅನೂಪ್ ಶೆಟ್ಟಿಯನ್ನು ಪೊಲೀಸರು ಆ.9ರವರೆಗೆ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದರು. ನಂತರ ಗೋವಾಕ್ಕೆ ಕರೆದೊಯ್ದು ಹೆಚ್ಚಿನ ತನಿಖೆ ನಡೆಸಿದ್ದರು. ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿ ಅವಧಿ ಮುಗಿಯಲು ಮೂರು ದಿನಗಳು ಇರುವ ಮೊದಲೇ ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
Next Story





