Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಜಮಾಡಿ: ಸಚಿವ ಸುನಿಲ್‍ ಕುಮಾರ್ ಗೆ...

ಹೆಜಮಾಡಿ: ಸಚಿವ ಸುನಿಲ್‍ ಕುಮಾರ್ ಗೆ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ6 Aug 2021 10:33 PM IST
share
ಹೆಜಮಾಡಿ: ಸಚಿವ ಸುನಿಲ್‍ ಕುಮಾರ್ ಗೆ ಸ್ವಾಗತ

ಪಡುಬಿದ್ರಿ: ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಬಂದಿರುವ ನಮಗೆಲ್ಲರಿಗೂ ಪಕ್ಷ ಮಾತೃ ಇದ್ದಂತೆ. ಹಾಗಾಗಿ ಪಕ್ಷದ ಚಟುವಟಿಕೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಉಡುಪಿ ಜಿಲ್ಲೆಗೆ ಶುಕ್ರವಾರ ಆಗಮಿಸಿದ ಅವರು ಹೆಜಮಾಡಿಯಲ್ಲಿ ಅದ್ದೂರಿ ಸ್ವಾಗತ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸರ್ಕಾರ ಮತ್ತು ಪಕ್ಷ ಮಹತ್ತರವಾದ ಜವಾಬ್ದಾರಿ ನೀಡಿದೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ತಂಡವಾಗಿ ಜಿಲ್ಲೆಯ ಎಲ್ಲಾ ಶಾಸಕರ ಸಹಕಾರ ಪಡೆದು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ನುಡಿದ ಅವರು, ಜಿಲ್ಲೆಯ ಸಮಸ್ಯೆಗಳಿಗೆ ಧ್ವನಿಯಾಗಬೇಕು. ಜನರ ಬಹುಕಾಲದ ಬೇಡಿಕೆ, ನಿರೀಕ್ಷೆಗಳ ಅರಿವಿದ್ದು, ಎರಡೂ ಜಿಲ್ಲೆಯ ಶಾಸಕರ ಸಹಕಾರ ಪಡೆದು ಪರಿಹರಿಸಲು ಆದ್ಯತೆ ನೀಡಲಾಗುವುದು ಎಂದು  ಭರವಸೆ ನೀಡಿದ ಸಚಿವರು, ಸರ್ಕಾರದ ಆಡಳಿತ ಮತ್ತು ಪಕ್ಷ ಎರಡೂ ಕೂಡಾ ಜೊತೆ ಜೊತೆಯಾಗಿ ನಡೆಯಬೇಕು.

ಜನ ಪ್ರಸ್ತುತ ವರ್ಷದಲ್ಲಿ ಬಿಜೆಪಿಯನ್ನು ನಿರಂತರವಾಗಿ ಬೆಂಬಲಿಸುತ್ತಿದ್ದು, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಲ್ಲಿ ಗೆಲುವು ಸಾಧಿಸಲಿರುವುದಾಗಿ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲಾ ಗಡಿಭಾಗ ಹೆಜಮಾಡಿಯಲ್ಲಿ ಜಿಲ್ಲಾಡಳಿತದ ಪರವಾಗಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಕೆ ಸ್ವಾಗತಿಸಿದರು. ಬಳಿಕ ಮಹಿಳಾ ಮೋರ್ಚಾ ಕಾರ್ಯಕರ್ತರು ಆರತಿ ಬೆಳಗಿ ತಿಲಕವಿಟ್ಟು ಬರಮಾಡಿಕೊಂಡರೆ, ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು.

ಶಾಸಕರಾದ ಲಾಲಾಜಿ ಆರ್ ಮೆಂಡನ್, ಹರೀಶ್ ಪೂಂಜ, ಡಾ. ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಪ್ರಮುಖರಾದ ಕೆ. ಉದಯ ಕುಮಾರ್ ಶೆಟ್ಟಿ, ಯಶಪಾಲ್ ಸುವರ್ಣ, ಕುತ್ಯಾರ್ ನವೀನ್ ಶೆಟ್ಟಿ, ಶ್ರೀಶಾ ನಾಯಕ್, ದಿನಕರ್ ಬಾಬು, ಶಿಲ್ಪಾ ಜಿ ಸುವರ್ಣ, ಗೀತಾಂಜಲಿ ಸುವರ್ಣ, ಶಶಿಕಾಂತ ಪಡುಬಿದ್ರಿ, ಉದಯ ಎಸ್ ಕೊಟ್ಯಾನ್, ಪ್ರವೀಣ್ ಕುಮಾರ್ ಗುರ್ಮೆ, ಸುರೇಂದ್ರ ಪಣಿಯೂರು, ಶ್ರೀಕಾಂತ್ ನಾಯಕ್, ಉದಯ ಶೆಟ್ಟಿ ಇನ್ನಾ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರವಿ ಶೆಟ್ಟಿ ಪಾದೆಬೆಟ್ಟು,  ವಿಷ್ಣುಮೂರ್ತಿ ಆಚಾರ್ಯ, ಮಿಥುನ್ ಹೆಗ್ಡೆ, ಸುವರ್ದನ್ ನಾಯಕ್, ವೀಣಾ ಶೆಟ್ಟಿ, ಸುಮಾ ಶೆಟ್ಟಿ, ಗೋಪಾಲಕೃಷ್ಣ ರಾವ್, ನಯನಾ ಗಣೇಶ್, ಪ್ರಾಣೇಶ್ ಹೆಜಮಾಡಿ, ಗಾಯತ್ರೀ ಪ್ರಭು, ಶರತ್ ಶೆಟ್ಟಿ, ಸಂತೋಷ್ ಶೆಟ್ಟಿ, ರವೀಂದ್ರ ಪ್ರಭು ಸಾಂತೂರು, ಶಿವರಾಮ ಭಂಡಾರಿ, ಪ್ರಸಾದ್ ಪಲಿಮಾರು, ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಸುಧಾಕರ ಕರ್ಕೇರ, ಸಚಿನ್ ಪಿತ್ರೋಡಿ, ಕೀರ್ತನ್ ಹೆಜಮಾಡಿ, ಪ್ರವೀಣ್ ಕುಮಾರ್ ಅಡ್ವೆ ಉಪಸ್ಥಿತರಿದ್ದರು.

ಕಳ್ಳರ ಕೈಚಳಕ: ಸಚಿವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಅವರಲ್ಲಿದ್ದ 28 ಸಾವಿರ ರೂ. ಹಾಗೂ ಗುತ್ತಿಗೆದಾರರಾದ ಜೀವನ್ ಶೆಟ್ಟಿ ಅವರ 50 ಸಾವಿರ ರೂ. ಕಳೆದುಕೊಂಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X