ದೇರಳಕಟ್ಟೆ: ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯಲ್ಲಿ ಪದವಿ ಪ್ರದಾನ ಸಮಾರಂಭ

ಕೊಣಾಜೆ: ಫಾ. ಮುಲ್ಲರ್ ಸೇವಾ ಸಂಸ್ಥೆಯ ಘಟಕವಾಗಿರುವ ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ 31ನೇ ಪದವಿ ಪ್ರದಾನ ಸಮಾರಂಭ ಶುಕ್ರವಾರ ನಡೆಯಿತು.
ಮಂಗಳೂರು ಪ್ರಾಂತ್ಯ ಬಿಷಪ್, ಫಾ. ಮುಲ್ಲರ್ ಸೇವಾ ಸಂಸ್ಥೆಗಳ ಅಧ್ಯಕ್ಷ ರೆ.ಡಾ. ಪೀಟರ್ ಪೌಲ್ ಸಲ್ದಾನ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಪದವಿ ಪ್ರದಾನ ಮಾಡಿದರು.
ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯ ಉಪ ನಿರ್ದೇಶಕ ಡಾ.ಎಚ್.ಜಿ. ಮಂಜುನಾಥ್ ಕಾಲೇಜಿನ ಅತ್ಯುತ್ತಮ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಪದವಿ ಪ್ರದಾನ ಸಮಾರಂಭದಲ್ಲಿ 100 ಹೋಮಿಯೋಪಥಿ ಪದವಿ ಹಾಗೂ 27ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ವೈದ್ಯಕೀಯ ಅಧೀಕ್ಷಕ ಡಾ. ಗಿರೀಶ್ ನಾವಡ, ಕಾರ್ಯಕ್ರಮ ಸಂಯೋಜಕ ಡಾ. ರಂಜನ್ ಬ್ರಿಟ್ಟೋ ಉಪಸ್ಥಿತರಿದ್ದರು.
ಫಾ. ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ವಂ. ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಿನ್ಸಿಪಾಲ್ ಡಾ. ಇ.ಎಸ್.ಜೆ. ಪ್ರಭು ಕಿರಣ್ ವಾರ್ಷಿಕ ವರದಿ ವಾಚಿಸಿ, ಪದವೀಧರರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವೈಸ್ ಪ್ರಿನ್ಸಿಪಾಲ್ ಡಾ. ವಿಲ್ಮಾ ಮೀರಾ ಡಿಸೋಜ ಪ್ರತಿಭಾನ್ವಿತರ ಹೆಸರು ವಾಚಿಸಿದರು. ಆಡಳಿತಾಧಿಕಾರಿ ರೆ.ಫಾ. ರೋಶನ್ ಕ್ರಾಸ್ತಾ ವಂದಿಸಿದರು.
ಹೋಮಿಯೋಪತಿ ಸ್ಪೆಷಾಲಿಟಿ ಕ್ಲಿನಿಕ್ ಉದ್ಘಾಟನೆ
ಇದಕ್ಕೂ ಮುನ್ನ ಫಾ. ಮುಲ್ಲರ್ ಆಸ್ಪತ್ರೆಯಲ್ಲಿ ಎಲ್ಲ ಬಗೆಯ ರೋಗಗಳಿಗೆ ಚಿಕಿತ್ಸೆ ನೀಡುವ ವಾರದಲ್ಲಿ ಸೋಮವಾರದಿಂದ ಶನಿವಾರ ತನಕ ಸೇವೆ ಇರುವ ಸ್ಪೆಷಾಲಿಟಿ ಕ್ಲಿನಿಕ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮ ನಡೆಯಿತು.







