ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಪುತ್ತೂರು: ಕಳವು ಪ್ರಕರಣಕ್ಕೆ ಸಂಬಂಧಿಸಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ನಿವಾಸಿ ಬಾಬು ಪೂಜಾರಿ ಲಿಂಗಪ್ಪ(46) ಬಂಧಿತ ಆರೋಪಿ.
1985ನೇ ಇಸವಿಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಾದ ಸಮಯ ಆರೋಪಿ ಲಿಂಗಪ್ಪ ತಲೆಮರೆಸಿಕೊಂಡಿದ್ದ. ಬಳಿಕ ಹಲವು ಕಡೆಗಳಿಗೆ ತೆರಳಿದ್ದು, ತನ್ನ ಧರ್ಮವನ್ನು ಬದಲಾಯಿಸಿ ಕೊಂಡು ಪೊಲೀಸರ ಕಣ್ಣು ತಪ್ಪಿಸಿಕೊಂಡು ತಿರುಗಾಡುತ್ತಿದ್ದ ಎನ್ನಲಾಗಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.
ಪುತ್ತೂರು ಡಿವೈಎಸ್ ಪಿ ಗಾನ ಕೆ ಕುಮಾರ್ ಅವರ ಮಾರ್ಗದರ್ಶನದಂತೆ ಪುತ್ತೂರು ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಗೋಪಾಲ ನಾಯ್ಕ್ ಮತ್ತು ಪೊಲೀಸ್ ಉಪ ನಿರೀಕ್ಷಕರಾದ ಸುತೇಶ್ ಮತ್ತು ನಸ್ರಿನ್ ತಾಜ್ ಚಟ್ಟರಕಿ ಇವರ ಸೂಚನೆಯಂತೆ ಪುತ್ತೂರು ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಗಳಾದ ಪರಮೇಶ್ವರ್ ಮತ್ತು ಕೃಷ್ಣಪ್ಪ ಅವರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.





