ಪ್ರತಿಪಕ್ಷಗಳ ನಿಲ್ಲದ ಪ್ರತಿಭಟನೆ: ರಾಜ್ಯಸಭೆ ಎರಡು ಬಾರಿ ಮುಂದೂಡಿಕೆ

ಹೊಸದಿಲ್ಲಿ, ಆ. 6: ಪೆಗಾಸಸ್ ಬೇಹುಗಾರಿಕೆ ಪ್ರಕರಣ ಹಾಗೂ ರೈತರ ಪ್ರತಿಭಟನೆ ಕುರಿತಂತೆ ಪ್ರತಿಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಸಭೆಯನ್ನು ಎರಡು ಬಾರಿ ಮುಂದೂಡಲಾಯಿತು. ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಕಾರಣಕ್ಕೆ ಇಂದು ಕಲಾಪ ಆರಂಭವಾದ ಕೆಲವೇ ನಿಮಿಷಗಳಲ್ಲಿ ರಾಜ್ಯಸಭೆಯನ್ನು ಮುಂದೂಡಲಾಯಿತು. ಅನಂತರ ಮಧ್ಯಾಹ್ನ 12 ಗಂಟೆಗೆ ಮತ್ತೆ ಆರಂಭವಾಗಿದ್ದರೂ ಮತ್ತೆ ಕೆಲವು ನಿಮಿಷಗಳಲ್ಲಿ ಮುಂದೂಡಲಾಯಿತು. ಪ್ರಶ್ನೋತ್ತರ ಅವಧಿಯ ಬಳಿಕ ಮತ್ತೆ ಕಲಾಪ ಆರಂಭವಾದ ಕೂಡಲೇ ಕಾಂಗ್ರೆಸ್, ಟಿಎಂಸಿ ಹಾಗೂ ಇತರ ಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಘೋಷಣೆ ಕೂಗಿದರು.
Next Story





