ಉಡುಪಿ: ಶನಿವಾರ ಕೋವಿಡ್ ಗೆ ಇಬ್ಬರು ಬಲಿ; 131 ಮಂದಿಗೆ ಸೋಂಕು ದೃಢ
ಸಾಂದರ್ಭಿಕ ಚಿತ್ರ
ಉಡುಪಿ, ಆ.7: ಜಿಲ್ಲೆಯಲ್ಲಿ ಶನಿವಾರ ಇಬ್ಬರು ಪುರುಷರು ಕೋವಿಡ್ನಿಂದ ಮೃತಪಟ್ಟಿದ್ದು, ದಿನದಲ್ಲಿ ಒಟ್ಟು 131 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. 158 ಮಂದಿ ಇಂದು ಸೋಂಕಿನಿಂದ ಗುಣಮುಖರಾಗಿದ್ದರೆ, ಜಿಲ್ಲೆಯಲ್ಲಿ ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ ಈಗ 1371ಕ್ಕೆ ಇಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಕುಂದಾಪುರದ 44ರ ಹರೆಯದ ಹಾಗೂ ಕಾರ್ಕಳದ 46ರ ಹರೆಯದ ಇಬ್ಬರು ಸರಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ಗೆ ಬಲಿಯಾಗಿದ್ದಾರೆ.
ಕುಂದಾಪುರದ ಯುವಕ ಜು.30ರಂದು ಚಿಕಿತ್ಸೆಗೆ ದಾಖಲಾಗಿ ಆ.2ಕ್ಕೆ ಮೃತಪಟ್ಟರೆ, ಕಾರ್ಕಳದ ವ್ಯಕ್ತಿ ಆ.4ರಂದು ದಾಖಲಾಗಿ ಮರುದಿನ ಮೃತಪಟ್ಟಿದ್ದರು. ಇಬ್ಬರೂ ಕೋವಿಡ್-19ರ ಗುಣಲಕ್ಷಣದೊಂದಿಗೆ ಉಸಿರಾಟದ ತೊಂದರೆ ಹಾಗೂ ನ್ಯೂಮೋನಿಯಾದಿಂದ ಬಳಲುತಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಕೊರೋನಕ್ಕೆ ಬಲಿಯಾದವರ ಸಂಖ್ಯೆ 426ಕ್ಕೇರಿದೆ.
ಇಂದು ಕೊರೋನ ಸೋಂಕು ದೃಢಪಟ್ಟ 131 ಮಂದಿಯಲ್ಲಿ 64 ಮಂದಿ ಪುರುಷರು ಹಾಗೂ 67 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 71 ಮಂದಿ ಉಡುಪಿ ತಾಲೂಕು, 17 ಮಂದಿ ಕುಂದಾಪುರ ಹಾಗೂ 42 ಮಂದಿ ಕಾರ್ಕಳ ತಾಲೂಕಿನವರಾಗಿದ್ದು, ಒಬ್ಬರು ಹೊರಜಿಲ್ಲೆಯವರು.
ಪಾಸಿಟಿವ್ ಬಂದವರಲ್ಲಿ 71 ಮಂದಿ ಉಡುಪಿ ತಾಲೂಕು, 17 ಮಂದಿ ಕುಂದಾಪುರ ಹಾಗೂ 42 ಮಂದಿ ಕಾರ್ಕಳ ತಾಲೂಕಿನವರಾಗಿದ್ದು, ಒಬ್ಬರು ಹೊರಜಿಲ್ಲೆಯವರು. ಇಂದು ಪಾಸಿಟಿವ್ ಬಂದವರಲ್ಲಿ 13 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 118 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಶುಕ್ರವಾರ 158 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 68,938ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3917 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 70,735ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 8,10,525 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
ಶನಿವಾರ ಜಿಲ್ಲೆಯಲ್ಲಿ ಯಾವುದೇ ಬ್ಲಾಕ್ ಫಂಗಸ್ ಸೋಂಕು ಇರುವ ರೋಗಿ ಪತ್ತೆಯಾಗಿಲ್ಲ. ಸದ್ಯ ಹೊರಜಿಲ್ಲೆಗಳ ಎಂಟು ಮಂದಿ ಮಣಿಪಾಲ ಕೆಎಂಸಿ ಹಾಗೂ ಉಡುಪಿ ಆದರ್ಶ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
1541 ಮಂದಿಗೆ ಲಸಿಕೆ: ಉಡುಪಿ ಜಿಲ್ಲೆಯಲ್ಲಿ ಇಂದು 1541 ಮಂದಿಗೆ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಇವುಗಳಲ್ಲಿ 701 ಮಂದಿಗೆ ಮೊದಲ ಡೋಸ್ ಹಾಗೂ 840 ಮಂದಿಗೆ ಎರಡನೇ ಡೋಸ್ನ್ನು ನೀಡಲಾಗಿದೆ ಎಂದು ಡಿಎಚ್ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
18ರಿಂದ 44ವರ್ಷದೊಳಗಿನ 564 ಮಂದಿಗೆ ಮೊದಲ ಡೋಸ್ ಹಾಗೂ 520 ಮಂದಿಗೆ ಎರಡನೇ ಡೋಸ್ ನೀಡಲಾಗಿದೆ. 45 ವರ್ಷ ಮೇಲ್ಪಟ್ಟವರಲ್ಲಿ 137 ಮಂದಿಗೆ ಮೊದಲ ಡೋಸ್ ಹಾಗೂ 320 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,37,045 ಮಂದಿಗೆ ಮೊದಲ ಡೋಸ್ ಹಾಗೂ 1,93,703 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.