ಮಲ್ಪೆ: ಬೋಟಿನಿಂದ ನೀರಿಗೆ ಬಿದ್ದು ಮೀನುಗಾರ ಮೃತ್ಯು
ಮಲ್ಪೆ, ಆ.7: ಮಲ್ಪೆ ಬಾಪುತೋಟ ಧಕ್ಕೆಯಲ್ಲಿ ಬೋಟಿನಿಂದ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ರವೀಂದ್ರನಾಥನ್(47) ಎಂದು ಗುರುತಿಸಲಾಗಿದೆ. ಇವರು ಮಲ್ಪೆಯಲ್ಲಿ ಸಿದ್ದಿವಿನಾಯಕ ಬೋಟಿನಲ್ಲಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಧಕ್ಕೆಯ ನೀರಿಗೆ ಬಿದ್ದು ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





