Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾವೇನು ನಿಮಗೆ ಶಾಸಕರ ರೀತಿ...

ನಾವೇನು ನಿಮಗೆ ಶಾಸಕರ ರೀತಿ ಕಾಣಿಸೋದಿಲ್ವಾ?: ಸಚಿವ ಈಶ್ವರಪ್ಪ ಸಮ್ಮುಖದಲ್ಲಿ ಆಯನೂರ್ ಮಂಜುನಾಥ್ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ9 Aug 2021 10:44 PM IST
share
ನಾವೇನು ನಿಮಗೆ ಶಾಸಕರ ರೀತಿ ಕಾಣಿಸೋದಿಲ್ವಾ?: ಸಚಿವ ಈಶ್ವರಪ್ಪ ಸಮ್ಮುಖದಲ್ಲಿ ಆಯನೂರ್ ಮಂಜುನಾಥ್ ಅಸಮಾಧಾನ

ಶಿವಮೊಗ್ಗ, ಆ.9: ಗ್ರಾಮೀಣಾಭಿವೃದ್ಧಿ ಸಚಿವ  ಕೆ.ಎಸ್.ಈಶ್ವರಪ್ಪ ಎದುರು ಅವರದ್ದೇ ಪಕ್ಷದ ಎಂಎಲ್‌ಸಿ ಆಯನೂರ್ ಮಂಜುನಾಥ್ ಅಸಮಾಧಾನ ಹೊರ ಹಾಕಿರುವ ಪ್ರಸಂಗ ಸೋಮವಾರ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮಳೆಹಾನಿ ಹಾಗು ಕೋವಿಡ್ ನಿರ್ವಹಣೆ ಕುರಿತ ಸಭೆಯಲ್ಲಿ ಈ ಘಟನೆ ನಡೆದಿದ್ದು, ಈ ವೇಳೆ ಆಯನೂರು ಸಭಾಂಗಣದ ಮುಂದೆ ಬಂದು ಆಕ್ರೋಶ ಹೊರ ಹಾಕಿದರು. ನಾವೇನು ಶಾಸಕರಲ್ಲವೇನು? ಮಷ್ಕಿರಿ ಮಾಡ್ತೀರಾ? ಎಂದು ಸಭೆಯಲ್ಲಿ ಪ್ರಶ್ನೆ ಮಾಡಿದರು. ಜಿಲ್ಲಾಧಿಕಾರಿ ಸಭೆ ಅಥವಾ ತಾಲೂಕಿನ ಆಡಳಿತದ ಸಭೆಗೆ ನಮಗೆ ಆಹ್ವಾನ ನೀಡುತ್ತಿಲ್ಲ. ಅದರ ಬಗ್ಗೆ ಮಾಹಿತಿ ಕೊಡೋದಿಲ್ಲ. ಯಾರಿಗಾದರು ಅನುದಾನ ಕೊಟ್ಟರೆ ಮಾಹಿತಿ ನೀಡೋದಿಲ್ಲ. ಪರಿಹಾರ ಧನ ನೀಡಿದ್ರೆ ನಮಗೆ ಮಾಹಿತಿ ಸಿಗೋದಿಲ್ಲ. ನಾವೇನು ನಿಮಗೆ ಶಾಸಕರ ರೀತಿ ಕಾಣಿಸೋದಿಲ್ವಾ? ಎಂದು ಪ್ರಶ್ನೆ ಮಾಡಿದರು

ಮಳೆ ಹಾನಿ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಎಷ್ಟು ಜನರಿಗೆ ಪರಿಹಾರ ನೀಡಲಾಗಿದೆ ಎಂಬುದರ ಮಾಹಿತಿಯನ್ನೂ ನೀಡುತ್ತಿಲ್ಲ. ನಾವೇನು ಶಾಸಕರೇ ಅಲ್ಲವೆಂದು ಅಧಿಕಾರಿಗಳು ನಿರ್ಧರಿಸಿದಂತಿದೆ.ನೀವೇ ಸಭೆ ನಡೆಸಿಕೊಳ್ಳಿ ನಾವು ಹೊರ ಹೋಗುತ್ತೇವೆಂದು ಎಂಎಲ್ಸಿಗಳಾದ ಆರ್. ಪ್ರಸನ್ನ ಕುಮಾರ್, ಎಸ್. ರುದ್ರೇಗೌಡರನ್ನು ಕರೆದುಕೊಂಡು ಸಭೆಯಿಂದ ಹೊರ ನಡೆಯಲು ಮುಂದಾದಾಗ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹಾಗೂ ಜಿಪಂ ಸಿಇಓ ವೈಶಾಲಿಯವರು ಮನವೊಲಿಸಲು ಪ್ರಯತ್ನಿಸಿದರು.

'ನಿಮ್ಮ ಗಮನಕ್ಕೆ ಹತ್ತು ಬಾರಿ ತಂದಿದ್ದೇನೆ. ಅವಮಾನ ಅನುಭವಿಸಿದವರು ನಾವು. ಅಧಿಕಾರಿಗಳು ರಾಜಕಾರಣ ಮಾಡುತ್ತಿದ್ದಾರೆ. ಪ್ರತಿದಿನವೂ ಅವಮಾನ ಸಹಿಸಲು ಸಾಧ್ಯವೇ ಎಂದು ಆಯನೂರು ಹರಿಹಾಯ್ದರು.

'ನಿಮ್ಮ ಬಗ್ಗೆ ಗೌರವವಿದೆ. ನಮಗೆ ಅಗೌರವವಾದಾಗ ನೀವು ಸುಮ್ಮನಿದ್ದರೆ ನಾವು ಸುಮ್ಮನಿರಲ್ಲ. ನಾವು ಪ್ರತಿನಿಧಿಸುವ ಜಿಲ್ಲೆಯವರು ನಮಗೆ ಕರೆಯುತ್ತಾರೆ. ಇಲ್ಲಿ ಚಮಚಗಿರಿ ಮಾಡಿಕೊಂಡು ತಿರುಗಾಡುತ್ತಾರೆ. ನಮಗೇ ಅವಮಾನ ಮಾಡುತ್ತಾರೆ ಎಂದು ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು, ಸಭೆಗೆ ತೊಂದರೆ ಕೊಡುವ ಉದ್ದೇಶವಿಲ್ಲ. ನಮ್ಮ ಪ್ರತಿಭಟನೆ ದಾಖಲಿಸಿದ್ದೇವೆ' ಎಂದು ಹೇಳಿದರು.

ಈಶ್ವರಪ್ಪ ಮಧ್ಯ ಪ್ರವೇಶಿಸಿ, ನಿಮಗೆ ಅವಮಾನವಾಗಿದೆ ಎಂದರೆ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ಆದಂತೆ. ಈ ಸಂಬಂಧ ಸಂಬಂಧಿತ ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಸೂಚಿಸಿದ ಬಳಿಕ ಸಭೆ ಮುಂದುವರಿಸಲಾಯಿತ.

ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಯನೂರು ಮಂಜುನಾಥ್ ಈ ಬಗ್ಗೆ ಮಾತನಾಡಿ, 'ಸರ್ಕಾರ ನಮ್ಮದಾದರೂ ಅಧಿಕಾರಿಗಳು ನಮ್ಮವರಲ್ಲ, ಜನಪ್ರತಿನಿಧಿಗಳ ಮಾತು ಎಂದರೆ ಅವರಿಗೆ ಅಸಡ್ಡೆಯಾಗಿದೆ. ಗೌರವವನ್ನು ಕೊಡುವುದಿಲ್ಲ. ಹಾಗಾಗಿಯೇ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಿಂದ ಹೊರ ಬರಬೇಕಾಯಿತು. ಈ ಪ್ರತಿಭಟನೆ ಸಚಿವ ಈಶ್ವರಪ್ಪನವರ ವಿರುದ್ಧವಲ್ಲ. ಸಹಜ ನ್ಯಾಯಕ್ಕಾಗಿ ಹೇಳಿದ್ದೇವೆ' ಎಂದರು.

ಸಚಿವ ಸ್ಥಾನ ಸಿಗದೇ ಇರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವರಿಗೆ ಯೋಗ್ಯತೆ ಇರುತ್ತದೆ. ಆದರೆ, ಯೋಗ ಇರುವುದಿಲ್ಲ. ನನಗೂ ಹಾಗೆಯೇ ಆಗಿದೆ. ಅದರ ಬಗ್ಗೆ ಅಸಮಾಧಾನ ಹೊಂದುವುದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X