Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಹೆಚ್ಚಲಿದೆ ಉಷ್ಣಮಾರುತ,...

ಭಾರತದಲ್ಲಿ ಹೆಚ್ಚಲಿದೆ ಉಷ್ಣಮಾರುತ, ಚಂಡಮಾರುತದ ಹಾವಳಿ: ಐಪಿಸಿಸಿ ವರದಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 Aug 2021 11:13 PM IST
share
ಭಾರತದಲ್ಲಿ ಹೆಚ್ಚಲಿದೆ ಉಷ್ಣಮಾರುತ, ಚಂಡಮಾರುತದ ಹಾವಳಿ: ಐಪಿಸಿಸಿ ವರದಿ ಎಚ್ಚರಿಕೆ

ಹೊಸದಿಲ್ಲಿ, ಆ.9: ಮುಂದಿನ ಕೆಲವು ದಶಕಗಳಲ್ಲಿ ಭಾರತ ಉಪಖಂಡದಾದ್ಯಂತ ಉಷ್ಣಮಾರುತ ಹಾಗೂ ಬರ ಹೆಚ್ಚಾಗಲಿದೆ ಜೊತೆಗೆ ಮಳೆ ಸುರಿಯುವಿಕೆ ಹಾಗೂ ಚಂಡಮಾರುತಗಳ ಹಾವಳಿಯೂ ಅಧಿಕವಾಗಲಿದೆ ಎಂದು ಸೋಮವಾರ ಬಿಡುಗಡೆಯಾದ ಹವಾಮಾನ ಬದಲಾವಣೆ ಕುರಿತ ಅಂತರ್ ಸರಕಾರ ಸಮಿತಿ (ಐಪಿಸಿಸಿ)ಯ ವರದಿ ತಿಳಿಸಿದೆ. 

‘ಹವಾಮಾನ ಬದಲಾವಣೆ 2021: ಭೌತಿಕ ವಿಜ್ಞಾನ ಆಧರಿತ’ ಶೀರ್ಷಿಕೆಯ ಆರನೆ ಮೌಲ್ಯಮಾಪನ ವರದಿಯ ಮೊದಲ ಭಾಗವನ್ನು 195 ಸರಕಾರಗಳ ಸಹಯೋಗದೊಂದಿಗೆ ವಿಜ್ಞಾನಿಗಳು ಅಂತಿಮಗೊಳಿಸಿದ್ದಾರೆ. 21ನೇ ಶತಮಾನದಲ್ಲಿ ಉಷ್ಣಮಾರುತ ಹಾಗೂ ತೇವಭರಿತ ತಾಪಮಾನವು ಹೆಚ್ಚು ತೀವ್ರವಾಗಿರುವುದು ಹಾಗೂ ಆಗಾಗ್ಗೆ ಮರುಕಳಿಸಲಿದೆ. ವಾರ್ಷಿಕವಾಗಿಯೂ ಹಾಗೂ ಮುಂಗಾರಿನಲ್ಲಿಯೂ ಮಳೆ ಸುರಿಯುವಿಕೆಯು ಅಧಿಕವಾಗಲಿದೆ ಎಂದು ವರದಿ ತಿಳಿಸಿದೆ.

   1850-1950ರ ಅವಧಿಗೆ ಹೋಲಿಸಿದರೆ ಮೇಲ್ಮೈ ತಾಪಮಾನದಲ್ಲಿ ಏರಿಕೆಯಾಗಿರುವುದು ಸ್ಪಷ್ಟವಾಗಿ ಗಮನಕ್ಕೆ ಬಂದಿದೆ.ಒಂದೆಡೆ ತಾಪಮಾನದಲ್ಲಿ ಅತಿಯಾದ ಹೆಚ್ಚಳವಾಗುತ್ತಿದ್ದರೆ, ಇನ್ನೊಂದೆಡೆ ಚಳಿಯ ತೀವ್ರತೆ ಕಡಿಮೆಯಾಗತೊಡಗಿದೆ ಎಂದು ವರದಿ ಹೇಳಿದೆ.
 
ಏಶ್ಯದ ಬಹುತೇಕ ಭಾಗಗಳಲ್ಲಿಯೂ ಮಳೆ ಸುರಿಯುವಿಕೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಅದು ಹೇಳಿದೆ. 20ನೇ ಶತಮಾನದ ದ್ವಿತೀಯಾರ್ಧದಲ್ಲಿ ದಕ್ಷಿಣ ಹಾಗೂ ಆಗ್ನೇಯ ಮುಂಗಾರು ದುರ್ಬಲಗೊಂಡಿದೆ. ಅತಿಯಾದ ಮಾನವ ಚಟುವಟಿಕೆಗಳಿಂದಾಗಿ ವಾತಾವರಣದಲ್ಲಿ ದ್ರವ ಅಥವಾ ಅನಿಲ ಕಣ (ಅಸೆನೋಲ್)ಗಳಲ್ಲಿ ಹೆಚ್ಚಳವಾಗಿರುವುದೇ ಇದಕ್ಕೆ ಕಾರಣ ಎಂದು ಅದು ಹೇಳಿದೆ.

 ಪೂರ್ವ ಏಶ್ಯದಲ್ಲಿ ಬೇಸಿಗೆಯ ಮುಂಗಾರಿನ ಮಳೆ ಸುರಿಯುವಿಕೆಯಲ್ಲಿ ಏರುಪೇರು ಉಂಟಾಗಿದ್ದು, ಉತ್ತರ ಭಾಗದಲ್ಲಿ ಒಣವಾತಾವರಣ ಹೆಚ್ಚಾಗಿದ್ದರೆ, ದಕ್ಷಿಣ ಭಾಗದಲ್ಲಿ ತೇವಾಂಶದ ವಾತಾವರಣ ಅಧಿಕವಾಗತ್ತಿದೆ. ಹಸಿರುಮನೆ ಅನಿಲಗಳು ಹಾಗೂ ಘನ ಮತ್ತು ದ್ರವಣ ಅನಿಲಕಣಗಳ ಸಂಯೋಜನೆಯ ಪರಿಣಾಮದಿಂದಾಗಿ ಹೀಗಾಗಿ ಎಂದು ವರದಿ ಹೇಳಿದೆ.

  ‘‘ಹಿಂದೂ ಮಹಾಸಾಗರದಲ್ಲಿ ಸಮುದ್ರ ತಾಪಮಾನವು ಇತರ ಪ್ರದೇಶಗಳಿಗಿಂತ ಅಧಿಕ ಪ್ರಮಾಣದಲ್ಲಿದ್ದು, ಇದು ಇತರ ಪ್ರದೇಶಗಳ ಮೇಲೆ ಪರಿಣಾಮ ಬೀರುತ್ತದೆಯೆಂದ ವರದಿಯ ಸಹ ಲೇಖಕರಾದ ಐಐಟಿ ಮದ್ರಾಸ್ ನ ಉಪನ್ಯಾಸಕಿ ಡಾ. ಸ್ವಪ್ನಾ ಪಾನಿಕ್ಕಲ್ ಹೇಳುತ್ತಾರೆ.
 
ಹಿಂದೂ ಮಹಾಸಾಗರದ ಸಮುದ್ರಮಟ್ಟವು ವಾರ್ಷಿಕ ಜಾಗತಿಕ ಸರಾಸರಿಗಿಂತ 3.7 ಮೀಟರ್ ಗಳಷ್ಟು ಏರಿಕೆಯಾಗುತ್ತಿದೆ ಎಂದು ಆಕೆ ಹೇಳಿದ್ದಾರೆ. ಸಮುದ್ರ ಮಟ್ಟದಲ್ಲಿ ಅತಿಯಾದ ಹೆಚ್ಚಳವು ಈ ಹಿಂದೆ 100 ವರ್ಷಗಳಿಗೊಮ್ಮೆ ಸಂಭವಿಸುತ್ತಿದ್ದರೆ, ಈಗ ಪ್ರತಿ ವರ್ಷವೂ ಏರಿಕೆ ಕಂಡುಬರುತ್ತಿದೆ ಎಂದು ಆಕೆ ಹೇಳಿದ್ದಾರೆ.

ಹಿಂದೂ ಮಹಾಸಾಗರದ ಸಮುದ್ರ ಮಟ್ಟದಲ್ಲಿ ಏರಿಕೆಯು ಜಾಗತಿಕ ಸರಾಸರಿಗಿಂತ ತೀವ್ರವಾಗಿ ಹೆಚ್ಚಳವಾಗುತ್ತಿದೆ ಎಂದು ವರದಿ ಹೇಳಿದೆ. ಮುಂಬರುವ ದಶಕಗಳಲ್ಲಿ ಹವಾಮಾನ ಬದಲಾವಣೆಯಲ್ಲಿ ತೀವ್ರವಾಗಿ ಹೆಚ್ಚಾಗಲಿದೆ. ಜಾಗತಿಕ ತಾಪಮಾನದಲ್ಲಿ 1.5 ಡಿಗ್ರಿ ಸಿ. ಹೆಚ್ಚಳವಾಗಿರುವುದರಿಂದ, ಉಷ್ಣಮಾರುತ ಅಧಿಕವಾಗಲಿದೆ ಹಾಗೂ ಬೇಸಿಗೆಯ ಋತು ಅಧಿಕವಾಗಲಿದೆ ಹಾಗೂ ಚಳಿಯ ಋತು ಕಡಿಮೆಯಾಗಲಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X