ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಮನೆ-ಮನೆ ಸಮೀಕ್ಷೆಗೆ ಸಿದ್ಧತೆ
ಉಡುಪಿ, ಆ.10: ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ವಂಚಿತರಾಗಿರುವ ಮಕ್ಕಳನ್ನು ಗುರುತಿಸಿ, ಅವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ, ಉಡುಪಿ ನಗರಸಭಾವ್ಯಾಪ್ತಿಯಲ್ಲಿ ಮನೆ ಮನೆ ಸಮೀಕ್ಷೆಯನ್ನು ಪುನರಾರಂಭಿಸಲಾಗಿದೆ.
ಈ ಸಮೀಕ್ಷೆಯು ಆ.11ರಿಂದ 17ರವರೆಗೆ ಮುಂದುವರೆಯಲಿದ್ದು, ನಿಯೋಜಿಸಿದ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ ಮಕ್ಕಳ ಜನನ ಪ್ರಮಾಣ ಪತ್ರವನ್ನು ನೀಡಿ ಈ ಸರ್ವೇ ಕಾರ್ಯದಲ್ಲಿ ತೊಡಗಿ ಕೊಳ್ಳುವಂತೆ ಉಡುಪಿ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





