Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವ ಜನತೆಯನ್ನು ಯಶಸ್ವಿ...

ಯುವ ಜನತೆಯನ್ನು ಯಶಸ್ವಿ ಸ್ವಉದ್ಯೋಗಿಗಳನ್ನಾಗಿ ಮಾಡಿ: ಸದಾಶಿವ ಪ್ರಭು

ವಾರ್ತಾಭಾರತಿವಾರ್ತಾಭಾರತಿ10 Aug 2021 8:43 PM IST
share
ಯುವ ಜನತೆಯನ್ನು ಯಶಸ್ವಿ ಸ್ವಉದ್ಯೋಗಿಗಳನ್ನಾಗಿ ಮಾಡಿ: ಸದಾಶಿವ ಪ್ರಭು

ಉಡುಪಿ, ಆ.10: ಜಿಲ್ಲೆಯ ಯುವ ಜನತೆ ತಮ್ಮ ಪದವಿ ವಿದ್ಯಾಭ್ಯಾಸದ ನಂತರ ಸ್ವಉದ್ಯೋಗ ಕೈಗೊಂಡು ಯಶಸ್ವಿಯಾಗುವ ಕುರಿತಂತೆ ಕಾಲೇಜುಗಳಲ್ಲಿ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನೆಹರು ಯುವ ಕೇಂದ್ರದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚಿಸಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೆಹರು ಯುವ ಕೇಂದ್ರದ ವಾರ್ಷಿಕ ಕ್ರಿಯಾ ಯೋಜನೆ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಯುವ ಜನರು ಪದವಿ ನಂತರ ತಮ್ಮ ಭವಿಷ್ಯದ ಬಗ್ಗೆ ಚಿಂತಿಸಲು ಅವಕಾಶ ನೀಡದಂತೆ ಪದವಿ ಅಂತಿಮ ವರ್ಷದಲ್ಲಿ ಇರುವಾಗಲೇ,ಅವರು ಪದವಿ ನಂತರ ಕೈಗೊಳ್ಳಬಹುದಾದ ಸ್ವಉದ್ಯೋಗಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿವರವಾದ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಎಲ್ಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳುವಂತೆ ಅವರು ಸೂಚಿಸಿದರು.

ಈ ಮಾಹಿತಿಕಾರ್ಯಕ್ರಮಗಳಿಗೆ ಲೀಡ್‌ಬ್ಯಾಂಕ್ ಅಧಿಕಾರಿಗಳನ್ನು ಆಹ್ವಾನಿಸಿ, ವಿವಿಧ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್‌ಗಳು ನೀಡುವ ವಿವಿಧ ಬಗೆಯ ಸಾಲಗಳು, ಸಬ್ಸಿಡಿ ಮೊತ್ತ ಮುಂತಾದವುಗಳ ಬಗ್ಗೆ ಸಮಗ್ರ ವಿವರಗಳನ್ನು ವಿದ್ಯಾರ್ಥಿಗಳಿಗೆ ನೀಡುವಂತೆ ತಿಳಿಸಿದರು.

ಈ ಮಾಹಿತಿ ಕಾರ್ಯಕ್ರಮಗಳಿಗೆ ಲೀಡ್‌ಬ್ಯಾಂಕ್ ಅಧಿಕಾರಿಗಳನ್ನು ಆಹ್ವಾನಿಸಿ, ವಿವಿಸ್ವಯಂಉದ್ಯೋಗಕೈಗೊಳ್ಳಲುಬ್ಯಾಂಕ್‌ಗಳುನೀಡುವವಿವಿ ಬಗೆಯ ಸಾಲಗಳು, ಸಬ್ಸಿಡಿ ಮೊತ್ತ ಮುಂತಾದವುಗಳ ಬಗ್ಗೆ ಸಮಗ್ರ ವಿವರಗಳನ್ನು ವಿದ್ಯಾರ್ಥಿಗಳಿಗೆ ನೀಡುವಂತೆ ತಿಳಿಸಿದರು. ಬ್ಯಾಂಕುಗಳು ಮಾತ್ರವಲ್ಲದೇ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಯುವಜನತೆಗೆ ಉದ್ಯೋಗ ಪ್ರಾರಂಭಿಸಲು ಇರುವ ಯೋಜನೆಗಳ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಿ ಆ ಮೂಲಕ ಜಿಲ್ಲೆಯ ಯುವಜನತೆ ಸ್ವಉದ್ಯೋಗ ಕೈಗೊಳ್ಳುವ ಮೂಲಕ ಸುಸ್ಥಿರವಾಗಿ ಅಭಿವೃದ್ದಿ ಹೊಂದುವಂತೆ ಯೋಜನೆ ರೂಪಿಸಿ. ಕೇಂದ್ರ ಸರ್ಕಾರ ಸ್ಟಾರ್ಟ್‌ಅಪ್‌ಗಳನ್ನು ಆರಂಭಿಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ಈ ಬಗ್ಗೆ ಯೂ ಮಾಹಿತಿಗಳನ್ನು ನೀಡಿ. ಆತ್ಮನಿರ್ಭರ ಯೋಜನೆಯಡಿ ಸಹ ಅನೇಕ ಉದ್ದಿಮೆ ಆರಂಭಿಸಲು ಅವಕಾಶಗಳಿದ್ದು ಈ ಬಗ್ಗೆಯೂ ಯುವ ಜನತೆಗೆ ವಾಹಿತಿ ನೀಡುವಂತೆ ಪ್ರಭು ತಿಳಿಸಿದರು.

ಜಿಲ್ಲೆಯ ಯುವಶಕ್ತಿ, ಜಿಲ್ಲೆಯ ಅಭಿವೃದ್ದಿಗೆ ಸಮರ್ಪಕವಾಗಿ ಬಳಕೆಯಾಗುವ ಕುರಿತಂತೆ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಯೋಜನೆಗಳನ್ನು ರೂಪಿಸಿ. ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ನೆರವಾಗುವ ಕುರಿತಂತೆ ಯುವ ಜನತೆಗೆ ಮತ್ತು ಯುವ ಸಂಘಗಳಿಗೆ ತರಬೇತಿ ನೀಡಿ. ಗಾಂಧಿ ಜಯಂತಿಯಂದು ಜಿಲ್ಲೆಯ ಎಲ್ಲಾ ಬೀಚ್‌ಗಳಲ್ಲಿ ಯುವ ಜನತೆಯಿಂದ ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಿ. ಜಲಶಕ್ತಿ ಅಭಿಯಾನ, ನಶಾ ಮುಕ್ತ ಭಾರತ ಮುಂತಾದ ಕಾರ್ಯಕ್ರಮಗಳಲ್ಲಿ ಯುವಜನತೆಯನ್ನು ಸೇರ್ಪಡೆ ಮಾಡಿಕೊಳ್ಳಿ ಎಂದು ಸದಾಶಿವ ಪ್ರಭು ಹೇಳಿದರು.

ಜಿಲ್ಲೆಯ ಯುವಕ ಸಂಘಗಳು ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ನೆರವಾಗಿದ್ದು, ಮಾಸ್ಕ್‌ಗಳ ವಿತರಣೆ, ಅಶಕ್ತರಿಗೆ ಆಹಾರ ವಿತರಣೆ ಕಾರ್ಯಕ್ರಮಗಳನ್ನು ನಡೆಸಿ ಸ್ವಯಂಸೇವಕರಾಗಿ ಸಹ ಹಲವು ಕಾರ್ಯಗಳನ್ನು ಮಾಡಿದ್ದಾರೆ. ಈಗಾಗಲೇ 180 ಮಂದಿಗೆ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ತರಬೇತಿ ನೀಡಿದ್ದು, ಇವರು ಯಾವುದೇ ಸಂದರ್ಭದಲ್ಲಿ ಜಿಲ್ಲಾಡಳಿತದ ನೆರವಿಗೆ ಸಿದ್ದರಾಗಿದ್ದಾರೆ ಎಂದು ಜಿಲ್ಲಾ ನೆಹರು ಯುವ ಕೇಂದ್ರದ ಅಧಿಕಾರಿ ವಿಲ್ಪ್ರೆಡ್ ಡಿಸೋಜ ಹೇಳಿದರು.

ನೆಹರು ಯುವ ಕೇಂದ್ರದ ವಿಷ್ಣುಮೂರ್ತಿ ಕ್ರಿಯಾ ಯೋಜನೆಯ ವಿವರ ನೀಡಿದರು. ಸಭೆಯಲ್ಲಿ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಯುವಕ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X