ಆ.11ರಂದು ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಎರಡೂ ಡೋಸ್ ಲಭ್ಯ
ಉಡುಪಿ, ಆ.10: ಉಡುಪಿ ನಗರ ಪ್ರದೇಶದ ವಿವಿಧ ಆಸ್ಪತ್ರೆಗಳಲ್ಲಿ ನಾಳೆ ಕೋವಿಡ್-19 ಮೊದಲ ಮತ್ತು ಎರಡನೇ ಡೋಸ್ ಲಸಿಕೆ ಲಭ್ಯವಿರಲಿದೆ.
ಉಡುಪಿ ಜಿಲ್ಲಾಸ್ಪತ್ರೆಯ ಸೈಂಟ್ ಸಿಸಿಲಿ ಶಾಲೆಯ ಲಸಿಕಾ ಕೇಂದ್ರದಲ್ಲಿ ಕೋವಿಶೀಲ್ಡ್ ಪ್ರಥಮ ಡೋಸ್ 200 ಲಭ್ಯವಿದೆ. ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾಧವಕೃಪಾ ಶಾಲಾ ಕೇಂದ್ರದಲ್ಲಿ ಕೋವಿಶೀಲ್ಡ್ ಪ್ರಥಮ ಡೋಸ್-100 ಹಾಗೂ ಕೋವ್ಯಾಕ್ಸಿನ್ ಎರಡನೇ ಡೋಸ್-200 ಲಭ್ಯವಿದೆ.
ಕುಂಜಿಬೆಟ್ಟುನ ಶಾರದಾ ಕಲ್ಯಾಣ ಮಂಟಪದಲ್ಲಿ ಕೋವಿಶೀಲ್ಡ್ ಪ್ರಥಮ ಡೋಸ್-100, ಕೋವಿಶೀಲ್ಡ್ ಎರಡನೇ ಡೋಸ್-200 ಲಭ್ಯವಿದೆ. ಉಡುಪಿ ಪುತ್ತೂರು ಎಲ್‌ವಿಪಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಶೀಲ್ಡ್ ಮೊದಲ ಮತ್ತು ಎರಡನೇ ಡೋಸ್-300 ಲಭ್ಯವಿದೆ.
ಕುಕ್ಕಿಕಟ್ಟೆ ಎಫ್‌ಪಿಎಐನ ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಶೀಲ್ಡ್ 2ನೇ ಡೋಸ್-150, ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 10ರಿಂದ ಅಪರಾಹ್ನ 1ರವರೆಗೆ ಸೆ.5ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನ ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 200 ಡೋಸ್ ಲಭ್ಯವಿದೆ.
ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆಯನ್ನು ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







