ವಿದ್ಯುತ್ ಆಘಾತ : ಪುತ್ತೂರು ತಾ.ಪಂ. ಮಾಜಿ ಸದಸ್ಯೆಯ ಪತಿ ಮೃತ್ಯು
ಪುತ್ತೂರು : ವಿದ್ಯುತ್ ಅವಘಡಕ್ಕೆ ಒಳಗಾಗಿ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಒತ್ತೆಮುಂಡೂರು ನಿವಾಸಿ ಕೃಷ್ಣಪ್ಪ ಗೌಡ (50) ಎಂಬವರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಅವರು ತನ್ನ ಮನೆಯ ಸಮೀಪದ ಮರದಲ್ಲಿ ಜೀಗುಜ್ಜೆ ಕೊಯ್ಯಲು ಕೊಕ್ಕೆ ಹಿಡಿದುಕೊಂಡು ಹೋಗುವಾಗ ವಿದ್ಯುತ್ ತಂತಿಗೆ ಕೊಕ್ಕೆ ತಾಗಿ ವಿದ್ಯುತ್ ಪ್ರವಹಿಸಿ ಗಂಭಿರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಆ ವೇಳೆಗೆ ಅವರು ಮೃತ ಪಟ್ಟಿದ್ದರು ಎಂದು ತಿಳಿದುಬಂದಿದೆ.
ಮೃತರ ಪತ್ನಿ ಯಶೋಧ ಅವರು ಈ ಹಿಂದೆ ಪುತ್ತೂರು ತಾಲೂಕು ಪಂಚಾಯತ್ ಸದಸ್ಯೆಯಾಗಿದ್ದರು, ಪ್ರಸ್ತುತ ಬಿಜೆಪಿಯ ಮಹಿಳಾ ಮೋರ್ಚಾ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ನಿರ್ದೇಶಕಿಯಾಗಿಯೂ ಕಾರ್ಯ ನಿರ್ವಹಿಸುತಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Next Story





