Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ವಿದ್ಯುತ್ ಕಾಯಿದೆ ತಿದ್ದುಪಡಿ...

ಶಿವಮೊಗ್ಗ: ವಿದ್ಯುತ್ ಕಾಯಿದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 Aug 2021 9:51 PM IST
share
ಶಿವಮೊಗ್ಗ: ವಿದ್ಯುತ್ ಕಾಯಿದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ಶಿವಮೊಗ್ಗ, ಆ.10:  ವಿದ್ಯುತ್ ಕಾಯಿದೆ ತಿದ್ದುಪಡಿ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ  ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ರೈತರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ವಿದ್ಯುತ್ ಕಾಯಿದೆ ತಿದ್ದುಪಡಿ ಮಾಡುತ್ತಿದ್ದು, ಇದನ್ನು ಲೋಕಸಭಾ ಅಧಿವೇಶನಲ್ಲಿ ಮಂಡಿಸಲಿದೆ. ಈ ಕಾಯಿದೆ ರೈತರಿಗೆ ಮರಣ ಶಾಸನವಾಗಲಿದೆ. ಇದರಿಂದಾಗಿ ಈ ಕಾಯಿದೆಯನ್ನು ಮಂಡಿಸಬಾರದೆಂದು ಆಗ್ರಹಿಸಿದರು.
ದುಬಾರಿ ವಿದ್ಯುತ್ ಬಿಲ್ ಪಾವತಿಸಿ ಬೆಳೆ ಬೆಳೆದು ಕಡಿಮೆ ಬೆಲೆಗೆ ಬೆಳೆ ಮಾರಾಟ ಮಾಡುವ ಸ್ಥಿತಿ ನಿರ್ಮಾಣವಾಗಲಿದೆ. ನಷ್ಟಉಂಟಾಗುವುದರಿಂದ ರೈತರು ಕೃಷಿಯಿಂದಲೇ ವಿಮುಖರಾಗುವ ಸಾಧ್ಯತೆ ಇದೆ. ಕೃಷಿಗೆ ಉಚಿತ ವಿದ್ಯುತ್ ನೀಡಬೇಕೆಂಬ ಬೇಡಿಕೆ ಇದ್ದರೂ ಕೂಡ ಅದನ್ನು ನಾನ್ಯ ಮಾಡದೆ ಖಾಸಗೀಕರಣ ಮಾಡಿ ವಿದ್ಯುತ್ ಬಿಲ್ ವಿಧಿಸುವುದು ಖಂಡನೀಯವೆಂದು ಹೇಳಿದರು.

ಕೃಷಿ ಕಾಯಿದೆಗಳನ್ನು ವಿರೋಧಿಸಿ ಕಳೆದ 8ತಿಂಗಳಿಂದ ರೈತರು ದೆಹಲಿಯ ಹೊರ ಭಾಗದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುಪ್ರೀಂ ಕೋರ್ಟ್ ಕೂಡ ೧೮ ತಿಂಗಳವರೆಗೆ ತಿದ್ದುಪಡಿ ಕಾಯಿದೆಗಳನ್ನು ಜಾರಿಗೊಳಿಸಬಾರದೆಂದು ಆದೇಶಿಸಿದೆ. ಆದರೂ ಕೇಂದ್ರ ಸರ್ಕಾರ ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಲು ತುದಿಗಾಲಲ್ಲಿ ನಿಂತಿರುವುದು ದುರಾದೃಷ್ಟಕರ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

 ಈ ಕಾಯಿದೆ ಅಡಿ ಉಪ ಗುತ್ತಿಗೆ, ಪ್ರಾಂಚೈಸಿಗಳಿಗೆ ಅವಕಾಶವಿದೆ. ರೈತರ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ಲಭ್ಯವಾಗುವುದಿಲ್ಲ. ಭಾಗ್ಯ ಜ್ಯೋತಿ, ಕಟೀರ ಜ್ಯೋತಿ, ಬೀದಿ ದೀಪ, ಸಾರ್ವಜನಿಕ ಕುಡಿಯುವ ನೀರಿನ ಘಟಕಗಳಿಗೆ ಹೀದೆ ಎಲ್ಲದಕ್ಕೂ ಶುಲ್ಕ ನೀಡಬೇಕಾಗುತ್ತದೆ ಎಂದರು.

ವಿದ್ಯುತ್ ಕ್ಷೇತ್ರ ಖಾಸಗೀಕರಣವಾದರೆ ಪ್ರಿಪೇಯ್ಡ್ ನಿಯಮ ಜಾರಿಯಾಗಲಿದೆ. ಮುಂಚಿತವಾಗಿ ಹಣ ನೀಡಿ ವಿದ್ಯುತ್ ಖರೀದಿಸಬೇಕಾಗುತ್ತದೆ. ಹೀಗಾಗಿ ಇದು ಕೃಷಿ ಕ್ಷೇತ್ರಕ್ಕೆ ಮಾರಕವಾಗಿ ಪರಿಣಮಿಸಲಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ರೈತಸಸಂಘದ ಗೌರವಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ, ಡಿಎಸ್‌ಎಸ್ ನ ತಮ್ಮಡಿಹಳ್ಳಿ ಹಾಲೇಶಪ್ಪ, ಹಿಟ್ಟೂರು ರಾಜು, ವೀರೇಶ್,  ಚಂದ್ರಪ್ಪ, ರಾಘವೇಂದ್ರ, ಮಂಜಪ್ಪ, ರಾಮಚಂದ್ರಪ್ಪ, ರುದ್ರೇಶ್, ಮಾಜಿ ಶಾಸಕ, ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾ ಕುಮಾರಿ, ಎನ್. ರಮೇಶ್, ಡಿಎಸ್‌ಎಸ್ ಹಾಲೇಶಪ್ಪ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X