ಝಮೀರ್ ಅಹ್ಮದ್ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ

ಬೆಂಗಳೂರು : ಕಾಂಗ್ರೆಸ್ ಶಾಸಕ ಝಮೀರ್ ಅಹ್ಮದ್ ಖಾನ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಂಗಳವಾರ ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ನಮ್ಮ ಪಕ್ಷದ ಹಿರಿಯ ಮುಖಂಡ, ಶಾಸಕ ಝಮೀರ್ ಅಹ್ಮದ್ ಅವರನ್ನು ಭೇಟಿಯಾಗಿ ಕೆಲವು ವಿಚಾರಗಳ ಬಗ್ಗೆ ತಿಳಿದುಕೊಳ್ಳಬೇಕಿತ್ತು ಮತ್ತು ಮಾರ್ಗದರ್ಶನ ನೀಡಿದ್ದೇನೆ ಎಂದು ತಿಳಿಸಿದರು.
ಇಡಿ ದಾಳಿ ಸಂದರ್ಭ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಇದ್ದರು ಮತ್ತು ನನ್ನನ್ನು ಫೋನ್ ಮುಖಾಂತರ ಸಂಪರ್ಕಿಸಲು ಅವರು ಪಯತ್ನಿಸಿದ್ದರು. ನನ್ನ ಫೋನ್ ಇರಲಿಲ್ಲ. ಹಾಗಾಗಿ ಅವರು ದೆಹಲಿಯಿಂದ ನನ್ನ ಮನೆಗೆ ಬಂದು ಭೇಟಿ ಮಾಡಿಕೊಂಡು ಹೋಗಿದ್ದಾರೆ. ವಿಶೇಷ ಏನು ಇಲ್ಲ ಎಂದು ಝಮೀರ್ ಅಹ್ಮದ್ ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಇತ್ತೀಚೆಗೆ ದಾಳಿ ನಡೆಸಿದ್ದರು.
Next Story





