Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆಯಾಗುವ...

ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆಯಾಗುವ ಮೂಲಕ ರಾಜಕೀಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ಸಂಸದ ಡಾ.ಅಶೋಕ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ11 Aug 2021 2:22 PM IST
share
ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆಯಾಗುವ ಮೂಲಕ ರಾಜಕೀಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ಸಂಸದ ಡಾ.ಅಶೋಕ್ ಟೀಕೆ

ಬೆಂಗಳೂರು, ಆ.11:ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆ ಆಗುವ ಮೂಲಕ ರಾಜಕೀಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಎಸ್ಪಿ ರಾಜ್ಯ ಉಸ್ತುವಾರಿ, ಸಂಸದ ಡಾ.ಅಶೋಕ್ ಸಿದ್ದಾರ್ಥ ಟೀಕಿಸಿದರು.

ಬುಧವಾರ ನಗರದ ಕುಮಾರಕೃಪಾದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬರೋಬ್ಬರಿ ಎಂಟು ಬಾರಿ ಅವರಿಗೆ ಪಕ್ಷದಿಂದ ಬಿಫಾರಂ ನೀಡಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಲಾಯಿತು. ಆದರೂ, ಅವರು ಬಿಎಸ್ಪಿಯಿಂದ ಮೋಸವಾಯಿತು ಎಂದು ಹೇಳುವುದು ಹಾಸ್ಯಾಸ್ಪದ ಎಂದರು.

ಬಿಎಸ್‌ಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವವರು ಕಸವು ಕಸದ ಬುಟ್ಟಿಗೆ ಸೇರಿದಂತೆ ಎಂದು ಪಕ್ಷದ ಸಂಸ್ಥಾಪಕ ದಾದಾಸಾಹೇಬ್ ಕಾನ್ಸಿರಾಂ ಜಿ ಹೇಳಿದ್ದಾರೆ. ಈ ಮಾತು ಮಹೇಶ್ ವಿಷಯದಲ್ಲೂ ನಿಜವಾಗಲಿದೆ ಎಂದು ತಿಳಿಸಿದರು.

ಬಿಎಸ್‌ಪಿ ರಾಜಕೀಯ ಪಕ್ಷವಷ್ಟೇ ಅಲ್ಲ. ಅದೊಂದು ಸಾಮಾಜಿಕ ಪರಿವರ್ತನಾ ಆಂದೋಲನ. ಯಥಾಸ್ಥಿತಿ ವಾದಕ್ಕೆ ಏಕೈಕ ಪರ್ಯಾಯ ಎಂದ ಅವರು, ಕಾಂಗ್ರೆಸ್‌ ಗರ್ಭದಲ್ಲೆ ಆರ್‌ಎಸ್‌ಎಸ್‌ ಹುಟ್ಟಿದೆ. ಬಿಜೆಪಿಯ ಮೂಲ ಆರ್‌ಎಸ್‌ಎಸ್‌ ಆಗಿದೆ. ಕಮ್ಯೂನಿಸ್ಟ್‌, ಜನತಾ ಪರಿವಾರ ಸೇರಿದಂತೆ ದೇಶದ ಎಲ್ಲರಾಜಕೀಯ ಪಕ್ಷಗಳು ಕಾಂಗ್ರೆಸ್‌ ಮೂಲದಿಂದಲೇ ಜನ್ಮ ತಾಳಿವೆ. ಹೀಗಾಗಿ ಎಲ್ಲರ ಮೂಲ ಆಲೋಚನಾಕ್ರಮ ಅಧಿಕಾರ ಹಿಡಿಯುವುದಷ್ಟೇ ಎಂದು ನುಡಿದರು.

ಬಿಎಸ್ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಮಾತನಾಡಿ, ಎನ್.ಮಹೇಶ್ ಬಿಜೆಪಿಯ ಆಮಿಷಗಳಿಗೆ ಬಲಿಯಾಗಿದ್ದಾರೆ. ತಮ್ಮ ಸ್ವಾರ್ಥ ಆಸೆಗಳಿಗೆ ಪಕ್ಷದ ಸಿದ್ಧಾಂತಕ್ಕೆ ಧಕ್ಕೆ ತಂದಿದ್ದಾರೆ.ಅಲ್ಲದೆ, ಸಿದ್ಧಾಂತಕ್ಕೆ ವಿರುದ್ಧವಾಗಿ ಬಿಜೆಪಿ ಸೇರಿರುವ  ಮಹೇಶ್ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು.

ರಾಜ್ಯ ಸಂಯೋಜಕ ಮಾತಸಂದ್ರ ಮುನಿಯಪ್ಪ ಮಾತನಾಡಿ, ಬಿಜೆಪಿ ತತ್ವ ಸಿದ್ಧಾಂತ ಅಂಬೇಡ್ಕರ್ ಅವರ ಸಮಾನತಾವಾದಕ್ಕೆ  ವಿರುದ್ಧವಾಗಿದೆ. ಅಲ್ಲದೆ, ಎನ್‌.ಮಹೇಶ್ ಇಲ್ಲದಿದ್ದರೆ ಬಿಎಸ್ಪಿ ಇರುವುದಿಲ್ಲ ಎನ್ನುವ ಭ್ರಮೆ ಸುಳ್ಳು. ಮಹೇಶ್ ಅವರ ಇಡೀ ರಾಜಕೀಯ ಜೀವನ ಬಿಎಸ್‌ಪಿಯಿಂದ ರೂಪುಗೊಂಡಿದ್ದು, ಅವರ ರಾಜಕೀಯ  ಜೀವನದ ಮೂಲೆ ಮೂಲೆಯಲ್ಲೂ ವಿದ್ಯಾರ್ಥಿಗಳು, ನೌಕರರು, ತನು,ಮನ, ದನ, ನೀಡಿ ಬೆಂಬಲಿಸಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಯೋಜಕರಾದ ಎಂ.ಗೋಪಿನಾಥ್, ದಿನೇಶ್ ಗೌತಮ್, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಮುನಿಯಪ್ಪ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X