Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಸರಾವರೆಗೆ ಸಾರ್ವಜನಿಕ ಸೇರುವಿಕೆಗೆ...

ದಸರಾವರೆಗೆ ಸಾರ್ವಜನಿಕ ಸೇರುವಿಕೆಗೆ ಅವಕಾಶವಿಲ್ಲ: ಡಾ. ರಾಜೇಂದ್ರ

'ದ.ಕ. ಜಿಲ್ಲೆಯಲ್ಲಿ ಶಾಲೆ, ಕಾಲೇಜು ಆರಂಭ ವಿಳಂಬವಾಗುವ ಸಾಧ್ಯತೆ'

ವಾರ್ತಾಭಾರತಿವಾರ್ತಾಭಾರತಿ11 Aug 2021 5:52 PM IST
share
ದಸರಾವರೆಗೆ ಸಾರ್ವಜನಿಕ ಸೇರುವಿಕೆಗೆ ಅವಕಾಶವಿಲ್ಲ: ಡಾ. ರಾಜೇಂದ್ರ

ಮಂಗಳೂರು, ಆ.11: ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅಭಿಪ್ರಾಯಿಸಿದ್ದಾರೆ.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಕೋವಿಡ್ 3ನೆ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

ತುಳುನಾಡಿನ ಪ್ರಮುಖ ಆಚರಣೆಯಾದ ನಾಗರ ಪಂಚಮಿಯ ದಿನದಂದೂ ದೇವಾಲಯಗಳಲ್ಲಿ ಭಕ್ತರಿಂದ ವಿಶೇಷ ಪೂಜೆ, ಸೇವೆಗಳಿಗೆ ಅವಕಾಶವಿರುವುದಿಲ್ಲ. ಸಾಂಪ್ರದಾಯಿಕವಾಗಿ ದೇವಸ್ಥಾನಗಳ ಅರ್ಚಕರಿಂದ ನಡೆಯುವ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ಜಿಲ್ಲೆಯಲ್ಲಿ ನಾಗಬನ ಹಾಗೂ ಕುಟುಂಬದ ಮನೆಗಳಲ್ಲಿ ಆಚರಿಸಲಾಗುವ ಪೂಜೆಗಳನ್ನು ಕೂಡಾ ಕೋವಿಡ್ ಮಾರ್ಗಸೂಚಿಯೊಂದಿಗೆ ಯಾವುದೇ ರೀತಿಯಲ್ಲಿ ಜನ ಸಮೂಹವಾಗದಂತೆ ಜಾಗೃತಿಯೊಂದಿಗೆ ನೆರವೇರಿಸಲು ಸ್ಥಳೀಯ ಪಿಡಿಒಗಳ ಮೇಲ್ವಿಚಾರಣೆಯಲ್ಲಿ ನಡೆಸುವಂತೆ ಸೂಚಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆಯು ಕೂಡಾ ನಿಗದಿತ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಇಲ್ಲದೆ ನಡೆಸಲಾಗುತ್ತದೆ. ಕೃಷ್ಣ ಜನ್ಮಾಷ್ಠಮಿ, ಗಣೇಶ ಹಬ್ಬದ ಸಂದರ್ಭದಲ್ಲೂ ಸಾರ್ವಜನಿಕವಾಗಿ ಚಪ್ಪರ, ಶಾಮಿಯಾನ ಹಾಕಿಕೊಂಡು, ಮೆರವಣಿಗೆಯೊಂದಿಗೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶ ನೀಡದಿರಲು ಈಗಾಗಲೇ ಚಿಂತನೆ ಮಾಡಲಾಗಿದೆ ಎಂದು ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಪ್ರಥಮ ಹಾಗೂ ದ್ವಿತೀಯ ಡೋಸ್ ಲಸಿಕೆ ನೀಡುವಿಕೆಯಲ್ಲೂ ಜಿಲ್ಲಾಡಳಿತ ಹೆಚ್ಚು ಆದ್ಯತೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ. ಈಗ ಜಿಲ್ಲೆಗೆ ಪೂರೈಕೆಯಾಗುತ್ತಿರುವ ಲಸಿಕೆಯ ಪ್ರಮಾಣದಲ್ಲಿ ಮತ್ತೆ ಒಂದು ಲಕ್ಷ ಹೆಚ್ಚಿನ ಡೋಸ್ ಪೂರೈಕೆಯಾದಲ್ಲಿ ಸದ್ಯದ ಬೇಡಿಕೆಯನ್ನು ಸರಿದೂರಿಸಲು ಸಾಕಷ್ಟು ಮಟ್ಟಿಗೆ ಸಹಕಾರಿಯಾಗಲಿದೆ. ಮುಖ್ಯಮಂತ್ರಿಯವರು ಕೂಡಾ ಗಡಿ ಜಿಲ್ಲೆಗಳಿಗೆ ಲಸಿಕೆ ಪೂರೈಕೆಗೆ ಆದ್ಯತೆ ನೀಡುವ ಭರವಸೆ ನೀಡಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಕೂಡಾ ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯ ಗಮನ ಸೆಳೆಯುತ್ತಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದರು.

ದ.ಕ. ಜಿಲ್ಲೆಯಲ್ಲಿ ಶಾಲೆ, ಕಾಲೇಜು ಆರಂಭ ವಿಳಂಬವಾಗುವ ಸಾಧ್ಯತೆ

ಈಗಾಗಲೇ ಮುಖ್ಯಮಂತ್ರಿಯವರು ಶಾಲೆ ಕಾಲೇಜು ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಉಳಿದ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ಆರಂಭವಾದರೂ ದ.ಕ. ಸೇರಿದಂತೆ ಕೋವಿಡ್ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಮುಖ್ಯಮಂತ್ರಿಯಿಂದ ವೆನ್‌ಲಾಕ್‌ನಲ್ಲಿ ಹೈಟೆಕ್ ಐಸಿಯು ಉದ್ಘಾಟನೆ

ಕೋವಿಡ್ 3ನೆ ಅಲೆಯು ಮಕ್ಕಳಿಗೆ ಹೆಚ್ಚು ಬಾಧಿಸಲಿವೆಯೆಂಬ ವರದಿಗಳ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅಗತ್ಯ ಎಲ್ಲಾ ಮುಂಜಾಗೃತಾ ಕ್ರಮಗಳನ್ನು, ಸಿದ್ಧತೆಗಳನ್ನು ಮಾಡಲಾಗಿದೆ. ಜಿಲ್ಲೆಯ 86 ಮಂದಿ ಮಕ್ಕಳ ತಜ್ಞರೊಂದಿಗೆ ನಿರಂತರ ಸಭೆಗಳನ್ನು ನಡೆಸಿ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದೆ. ಇದೇ ವೇಳೆ ಜಿಲ್ಲಾಸ್ಪತ್ರೆಯಾದ ವೆನ್‌ಲಾಕ್‌ನಲ್ಲಿ 32 ಬೆಡ್‌ಗಳ ಹೈಟೆಕ್ ಐಸಿಯು ಸಿದ್ಧಗೊಂಡಿದ್ದು, ಜಿಲ್ಲೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಲಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಆ.15ರಿಂದ ಮತ್ತೆ ಲಾಕ್‌ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ

ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವುದು ನಿಜ. ಆದರೆ ಅತ್ಯಂತ ಸುಸಜ್ಜಿತ ಆಧುನಿಕ ಆಸ್ಪತ್ರೆಗಳು, ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವ ಕಾಸರಗೋಡು ಸೇರಿದಂತೆ ಕೇರಳ ರಾಜ್ಯದ ಜತೆ ದ.ಕ. ಜಿಲ್ಲೆ ಗಡಿ ಹಂಚಿಕೊಂಡಿರುವುದರಿಂದ ಸಹಜವಾಗಿ ಪಾಸಿಟಿವಿಟಿ ದರದಲ್ಲಿ ಹೆಚ್ಚಳ ಕಂಡುಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಪ್ರತಿನಿತ್ಯ ಕೋವಿಡ್ ತಪಾಸಣಾ ಸಂಖ್ಯೆಯೂ ಹೆಚ್ಚುತ್ತಿದೆ. ನಿನ್ನೆ ಒಂದು ದಿನದಲ್ಲಿ 9900 ಮಂದಿಗೆ ಕೋವಿಡ್ ತಪಾಸಣೆ ಮಾಡಲಾಗಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಆ. 15ರಿಂದ ಮತ್ತೆ ಲಾಕ್‌ಡೌನ್ ಮಾಡುವಂತಹ ಪರಿಸ್ಥಿತಿ ಇಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರಕಾರದ ನಿರ್ದೇಶನದ ಮೇರೆಗೆ ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X