ಉಡುಪಿ ತಾಯಿ -ಮಕ್ಕಳ ಆಸ್ಪತ್ರೆ ಬಗ್ಗೆ ಆರೋಗ್ಯ ಸಚಿವರಿಂದ ಸಭೆ

ಉಡುಪಿ, ಆ.11: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮಸ್ಯೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಬುಧವಾರ ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತಾರ್, ಆಯುಕ್ತ ಕೆ.ವಿ.ತ್ರಿಲೋಕ್ ಚಂದ್ರ, ಉಡುಪಿ ಶಾಸಕ ಕೆ.ರಘುಪತಿ ಭಟ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಉಪಸ್ಥಿತರಿದ್ದರು.
Next Story





