ಮಂಗಳೂರು ವಿವಿಯ ಆ.14, 28ರ ಪರೀಕ್ಷೆ ಮುಂದೂಡಿಕೆ

ಮಂಗಳೂರು, ಆ.11: ಕೋವಿಡ್ ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಆ.14 ಮತ್ತು 28ರಂದು ನಡೆಯುವ ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.
ಮುಂದೂಡಿಕೆಯಾದ ಪರೀಕ್ಷೆಗಳ ದಿನಾಂಕವನ್ನು ಬದಲಾವಣೆ ಮಾಡಿ ಮರು ನಿಗದಿಪಡಿಸಿದ್ದು, ಕೋರ್ಸುವಾರು/ ವಿಷಯವಾರು ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ವಿವಿಯ ಅಧಿಕೃತ ಜಾಲತಾಣ ಹಾಗೂ ಕಾಲೇಜು/ವಿಭಾಗಗಳ ಮೂಲಕ ಆ.12ರಿಂದ ಪಡೆದುಕೊಳ್ಳಬಹುದು.
ಉಳಿದಂತೆ ಈ ಹಿಂದೆ ಪ್ರಕಟಿಸಿದ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿವಿಯ ಪರೀಕ್ಷಾ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





