ಆ. 12ರಂದು ಉಡುಪಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ
ಉಡುಪಿ, ಆ.11:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ.12ರ ಗುರುವಾರದಂದು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಅಪರಾಹ್ನ 3:30ಕ್ಕೆ ಉಡುಪಿ ಜಿಲ್ಲಾಸ್ಪತ್ರೆ ಆವರಣದಲ್ಲಿ, ಉಡುಪಿ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಅನಂತರ 4 ಗಂಟೆಗೆ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಕುರಿತ ಪರಿಶೀನಾ ಸಭೆ ನಡೆಸಲಿದ್ದಾರೆ. ಸಂಜೆ 7 ಗಂಟೆಗೆ ಅರು ಮಂಗಳೂರಿಗೆ ತೆರಳಲಿದ್ದಾರೆ.
Next Story





