ಆರೋಗ್ಯ ಸಚಿವ ಡಾ. ಸುಧಾಕರ ಆ.12ರಂದು ಉಡುಪಿಗೆ
ಉಡುಪಿ, ಆ.11: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಆ.12ರ ಗುರುವಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಡಾ.ಸುಧಾಕರ್, ಅಪರಾಹ್ನ 3:30ಕ್ಕೆ ಅಜ್ಜರಕಾಡಿನ ಜಿಲ್ಲಾಸ್ಪತ್ರೆ ಆವರಣದಲ್ಲಿ, ಉಡುಪಿ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸುವ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ 4 ಗಂಟೆಗೆ ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆಯುವ ಕೋವಿಡ್-19 ಕುರಿತ ಪರಿಶೀನಾ ಸಭೆಯಲ್ಲಿ ಭಾಗವಹಿಸಿ ಮಂಗಳೂರಿಗೆ ತೆರಳಲಿದ್ದಾರೆ.
Next Story





