Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ; ಎಟಿಎಂ ಕಾರ್ಡ್ ಹ್ಯಾಕಿಂಗ್...

ಕಾರ್ಕಳ; ಎಟಿಎಂ ಕಾರ್ಡ್ ಹ್ಯಾಕಿಂಗ್ ಪ್ರಕರಣ:ಗ್ರಾಹಕನಿಗೆ 25 ಸಾವಿರ ರೂ. ಪರಿಹಾರ ನೀಡಲು ಬ್ಯಾಂಕ್ ಆಫ್ ಬರೋಡಕ್ಕೆ ಆದೇಶ

ಸೇವಾ ನ್ಯೂನತೆ ಸಾಬೀತು

ವಾರ್ತಾಭಾರತಿವಾರ್ತಾಭಾರತಿ11 Aug 2021 9:42 PM IST
share
ಕಾರ್ಕಳ; ಎಟಿಎಂ ಕಾರ್ಡ್ ಹ್ಯಾಕಿಂಗ್ ಪ್ರಕರಣ:ಗ್ರಾಹಕನಿಗೆ 25 ಸಾವಿರ ರೂ. ಪರಿಹಾರ ನೀಡಲು ಬ್ಯಾಂಕ್ ಆಫ್ ಬರೋಡಕ್ಕೆ ಆದೇಶ

ಉಡುಪಿ, ಆ.11: ಕಾರ್ಕಳ ತಾಲೂಕು ಬಜಗೋಳಿ ಮಾಳದ ನಿವೃತ್ತ ಬ್ಯಾಂಕ್ ನೌಕರ ಕೆ.ಸಿ.ಲಿಂಗಪ್ಪ (70) ಅವರ ಎ.ಟಿ.ಎಂ ಕಾರ್ಡ್ ಹ್ಯಾಕಿಂಗ್‌ಗೆ ಸಂಬಂಧಿಸಿದಂತೆ ಬ್ಯಾಂಕ್ ಆಫ್ ಬರೋಡ ಕಾರ್ಕಳ ಶಾಖೆ (ಈ ಹಿಂದಿನ ವಿಜಯಾಬ್ಯಾಂಕ್)ಯ ಸೇವಾ ನ್ಯೂನತೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ದೂರುದಾರರ ಉಳಿತಾಯ ಖಾತೆಯಿಂದ ಅನಧಿಕೃತವಾಗಿ ಕಡಿತಗೊಂಡ 10,023.60 ರೂ.ವನ್ನು ಶೇ.10ರ ಬಡ್ಡಿ ಹಾಗೂ ಪರಿಹಾರ, ದಾವಾ ಖರ್ಚು ಮೊತ್ತವಾದ ರೂ.25,000ವನ್ನು ಒಂದು ತಿಂಗಳೊಳಗೆ ಪಾವತಿಸುವಂತೆ ಉಡುಪಿಯ ಜಿಲ್ಲಾ ಗ್ರಾಹಕ ನ್ಯಾಯಾಲಯ ಸಂಬಂಧಿಸಿದ ಬ್ಯಾಂಕಿಗೆ ಆದೇಶಿಸಿದೆ.

ಲಿಂಗಪ್ಪ ಅವರು ಹಿರಿಯ ನಾಗರಿಕರಾಗಿದ್ದು ಕಾರ್ಕಳದ ಬ್ಯಾಂಕ್ ಆಫ್ ಬರೋಡ ಶಾಖೆ (ಹಿಂದಿನ ವಿಜಯಾ ಬ್ಯಾಂಕ್)ಯಲ್ಲಿ ಎಸ್‌ಬಿ ಅಕೌಂಟ್ ಹೊಂದಿದ್ದರು. ಇವರು ಕೊಲ್ಕತ್ತ, ಸಿಲಿಗುರಿ ಹಾಗೂ ಗ್ಯಾಂಗ್‌ ಟಕ್ ಪ್ರವಾಸದಲ್ಲಿದ್ದಾಗ 2019ರ ಸೆ.29ರಂದು ತನ್ನ ಮೊಬೈಲ್‌ಗೆ ಎಸ್‌ಎಂಎಸ್ ಒಂದು ಬಂದಿದ್ದು, ಅದರಲ್ಲಿ ತನ್ನ ಕಾರ್ಕಳ ಶಾಖೆಯಿಂದ 10,023.60ರೂ. ವನ್ನು ಎಟಿಎಂ ಕಾರ್ಡ್ ಮೂಲಕ ತೆಗೆದಿರುವ ಸಂದೇಶ ಬಂದಿತ್ತು. ಈ ಬಗ್ಗೆ ಬ್ಯಾಂಕ್ ಶಾಖೆಗೆ ಮಾಹಿತಿಯನ್ನು ನೀಡಿ, ಅ.15ರಂದು ಕಾರ್ಕಳಕ್ಕೆ ಬಂದು ಶಾಖೆಯಲ್ಲಿ ಲಿಖಿತ ದೂರು ಸಲ್ಲಿಸಿದ್ದಾಗಿ ಲಿಂಗಪ್ಪ ಅವರು ಗ್ರಾಹಕ ನ್ಯಾಯಾಲಯದ ಮುಂದೆ ವಾದಿಸಿದ್ದರು.

ಆದರೆ ಬ್ಯಾಂಕ್ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಹಾಗೂ ತನ್ನ ಹಣವನ್ನು ಮರಳಿಸಲಿಲ್ಲ ಎಂದು ಅವರು ದೂರಿದ್ದರು. ಈ ಬಗ್ಗೆ ಎರಡೂ ಕಡೆಗಳ ವಾದ ಆಲಿಸಿದ ಶೋಭಾ ಸಿ.ವಿ. ಅಧ್ಯಕ್ಷತೆ ಹಾಗೂ ಸುಜಾತ ಬಿ.ಕೊರಳ್ಳಿ ಮತ್ತು ಶಾರದಮ್ಮ ಎಚ್.ಜಿ.ಇವರನ್ನೊಳಗೊಂಡ ಜಿಲ್ಲಾ ಗ್ರಾಹಕ ನ್ಯಾಯಾಲಯ ದೂರುದಾರರಿಗೆ ಪರಿಹಾರ ನೀಡುವಂತೆ ಆದೇಶಿಸಿತು.

ಬ್ಯಾಂಕ್ ಆಫ್ ಬರೋಡ, ದೂರುದಾರರಿಗೆ 2019ರ ಸೆ.29ರಿಂದ 2021ರ ಮಾ.28ರವರೆಗೆ ಶೇ.10ರ ಬಡ್ಡಿಯೊಂದಿಗೆ ಅಸಲು, ಪರಿಹಾರವಾಗಿ 15,000ರೂ. ಹಾಗೂ ದಾವೆಯ ಖರ್ಚು ವೆಚ್ಚಗಳಿಗೆ 10,000 ರೂ.ಗಳನ್ನು ಒಂದು ತಿಂಗಳೊಳಗೆ ಪಾವತಿಸುವಂತೆ ಜು.31ರಂದು ನೀಡಿದ ಆದೇಶದಲ್ಲಿ ತಿಳಿಸಿದೆ. ದೂರುದಾರರ ಪರವಾಗಿ ನ್ಯಾಯವಾದಿಗಳಾದ ಕಾರ್ಕಳದ ವಿವೇಕಾನಂದ ಮಲ್ಯ ಮತ್ತು ಕೋಟ ಅಶ್ವಿನಿ ಹೆಗ್ಡೆ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X