ಸ್ವಾತಂತ್ರ್ಯ ದಿನದ ಮಾರ್ಗಸೂಚಿ ಪ್ರಕಟಿಸಿದ ದ.ಕ. ಜಿಲ್ಲಾಧಿಕಾರಿ

ಮಂಗಳೂರು : ಆ.15ರಂದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಆ ದಿನವೂ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕರು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಸ್ವಾತಂತ್ರ ದಿನಾಚರಣೆಯು ದೇಶದ ಪ್ರತಿಯೊಬ್ಬ ಪ್ರಜೆಗೂ ಮಹತ್ವದ ದಿನವಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸ್ವಾತಂತ್ರೋತ್ಸವ ದಿನದಂದೂ ವಾರಾಂತ್ಯ ಕರ್ಫ್ಯೂ ಇರಲಿದೆ. ಶಿಷ್ಟಾಚಾರದನ್ವಯ ಹಾಗೂ ಜವಾಬ್ದಾರಿಯುತವಾಗಿ ಆಚರಿಸಬೇಕು. ಕಾರ್ಯಕ್ರಮ ಆಯೋಜಿಸುವವರು ಧ್ವಜಾರೋಹಣ ನಡೆಸುವ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರನ್ನು ಸೇರಿಸದೇ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದಿದ್ದಾರೆ.
ಸ್ವಾತಂತ್ರ ದಿನಾಚರಣೆಯ ಘನತೆಗೆ ಧಕ್ಕೆ ಬಾರದಂತೆ ಆಚರಿಸಬೇಕು. ವಾರಾಂತ್ಯ ಕರ್ಫ್ಯೂ ಇರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರಬಾರದು ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





