Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾವಿನಲ್ಲೂ ಸಾರ್ಥಕತೆ: ಅಪಘಾತದಲ್ಲಿ...

ಸಾವಿನಲ್ಲೂ ಸಾರ್ಥಕತೆ: ಅಪಘಾತದಲ್ಲಿ ಮೃತಪಟ್ಟಿದ್ದ ಬಿಡದಿಯ ರೈತನ 6 ಅಂಗಾಂಗಳ ದಾನ

ವಾರ್ತಾಭಾರತಿವಾರ್ತಾಭಾರತಿ11 Aug 2021 10:34 PM IST
share
ಸಾವಿನಲ್ಲೂ ಸಾರ್ಥಕತೆ: ಅಪಘಾತದಲ್ಲಿ ಮೃತಪಟ್ಟಿದ್ದ ಬಿಡದಿಯ ರೈತನ  6 ಅಂಗಾಂಗಳ ದಾನ

ಬೆಂಗಳೂರು, ಆ. 11: ರಸ್ತೆ ಅಪಘಾತಕ್ಕೆ ತುತ್ತಾಗಿ ಸತತ 7 ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ 43 ವರ್ಷದ ವ್ಯಕ್ತಿ 6 ಅಂಗಾಂಗಗಳನ್ನು ದಾನ ಮಾಡುವ ಮೂಲಕ ದೀರ್ಘಕಾಲದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಜನರನ್ನು ರಕ್ಷಿಸಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಈ ವ್ಯಕ್ತಿ ಅಪಘಾತಕ್ಕೀಡಾಗಿ ಟ್ರೊಮ್ಯಾಟಿಕ್ ಬ್ರೇನ್ ಇಂಜುರಿ(ಟಿಬಿಐ)ನಿಂದ ಬಳಲುತ್ತಿದ್ದರು. ಇಂತಹ ಪರಿಸ್ಥಿತಿಯಲ್ಲಿಯೂ ನಂಜುಂಡಯ್ಯ ಅವರ ಕುಟುಂಬ ಸದಸ್ಯರು ಆತನ 6 ಅಂಗಾಂಗಗಳನ್ನು ದಾನ ಮಾಡಿ ಅಂಗಾಂಗಗಳಿಗಾಗಿ ಕಾಯುತ್ತಿದ್ದ ರೋಗಿಗಳಿಗೆ ಜೀವದಾನ ಮಾಡಿದ್ದಾರೆ. ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ನಂಜುಂಡಯ್ಯರನ್ನು ಜು.26ರಂದು ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಹಾಸ್ಪಿಟಲ್‍ಗೆ ದಾಖಲಿಸಲಾಯಿತು.

ಅವರ ಗಂಭೀರ ಸ್ವರೂಪದ ಆರೋಗ್ಯ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ನ್ಯೂರೋಲಾಜಿಸ್ಟ್‍ಗಳ ತಂಡ, ಇಂಟೆನ್ಸಿವ್ ಕೇರ್ ಯೂನಿಟ್, ಆರ್ಥೋಪೆಡಿಕ್ ಸರ್ಜನ್ ಮತ್ತು ನರ್ಸ್‍ಗಳು ತುಂಬಾ ಕಾಳಜಿ ವಹಿಸಿ ಚಿಕಿತ್ಸೆಯನ್ನು ನೀಡಿದರು. ಆದರೆ, ಅವರು ಟ್ರೊಮ್ಯಾಟಿಕ್ ಬ್ರೇನ್ ಇಂಜುರಿಯಿಂದಾಗಿ ಆ.2ರಂದು ಕೊನೆ ಉಸಿರೆಳೆದರು. ತಮ್ಮ ಕುಟುಂಬ ಸದಸ್ಯನನ್ನು ಕಳೆದುಕೊಂಡ ದುಃಖದಲ್ಲಿದ್ದರೂ ಆತನ ಕುಟುಂಬದವರು ಶ್ವಾಸಕೋಶಗಳು, ಮೂತ್ರಪಿಂಡ, ಲಿವರ್, ಹೃದಯ ವಾಲ್ವ್, ಕಾರ್ನಿಯಸ್, ಚರ್ಮವನ್ನು ಜೀವ ಸಾರ್ಥಕತೆ ಮೂಲಕ ದಾನ ಮಾಡಿದರು.

ಈ ಪೈಕಿ ಮೂತ್ರಪಿಂಡ ಮತ್ತು ಲಿವರ್ ಅನ್ನು ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಹಾಸ್ಪಿಟಲ್‍ನಲ್ಲಿ ಅಂಗಾಂಗಳಿಗೆ ಕಾಯುತ್ತಿದ್ದ ರೋಗಿಗಳಿಗೆ ಅಂದೇ ಕಸಿ ಮಾಡಲಾಯಿತು. ಆಸ್ಪತ್ರೆಯ ಸಿಇಒ ಸಂದೀಪ್ ಕುಮಾರ್ ಅವರು ಮಾತನಾಡಿ, ರಸ್ತೆ ಸಂಚಾರ ಅಪಘಾತಗಳಿಂದ ಅತ್ಯಧಿಕ ಟ್ರೊಮ್ಯಾಟಿಕ್ ಬ್ರೇನ್ ಇಂಜುರಿಗಳಾಗುವುದು. ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿಯೆ ಹೆಚ್ಚು. ಅಪಘಾತದ ಸಂದರ್ಭದಲ್ಲಿ ಕೇವಲ ನರವೈಜ್ಞಾನಿಕ ಹಾನಿಯ ಒಂದು ಭಾಗ ಮಾತ್ರ ಸಂಭವಿಸುತ್ತದೆ ಎಂದು ನಂಬಲಾಗಿದೆ. ಇದಕ್ಕೆ ತಕ್ಷಣದ ವೈದ್ಯಕೀಯ ನೆರವಿನೊಂದಿಗೆ ಸ್ವಲ್ಪಮಟ್ಟಿಗೆ ಪುನಶ್ಚೇತನ ಅಂದರೆ ಗುಣಪಡಿಸಬಹುದು ಎಂದರು.

ಬಿಡದಿಯ ರೈತ ನಂಜುಂಡಯ್ಯ ತೀವ್ರ ಮಿದುಳಿನ ಗಾಯದಿಂದ ಬಳಲುತ್ತಿದ್ದ ರೋಗಿಯು ಆಸ್ಪತ್ರೆಗೆ ದಾಖಲಾದರು. ಎಲ್ಲ ಪ್ರಯತ್ನಗಳನ್ನು ನಡೆಸಿದಾಗ್ಯೂ, ಮಿದುಳಿನ ಕಾರ್ಯನಿರ್ವಹಣೆ ಪುನಶ್ಚೇತನಗೊಳ್ಳಲೇ ಇಲ್ಲ. ಈ ಹಿನ್ನೆಲೆಯಲ್ಲಿ ಬ್ರೇನ್ ಡೆತ್ ಬಗ್ಗೆ ಕುಟುಂಬ ಸದಸ್ಯರೊಂದಿಗೆ ಸುದೀರ್ಘವಾದ ಚರ್ಚೆಯ ನಂತರ ಕುಟುಂಬದವರು ಅಂಗಾಂಗ ದಾನ ಮಾಡಲು ನಿರ್ಧರಿಸಿದರು. ಅವರ ಈ ನಿರ್ಧಾರದಿಂದಾಗಿ ಆರು ರೋಗಿಗಳಿಗೆ ಜೀವದಾನ ನೀಡಿದಂತಾಗಿದೆ' ಎಂದು ನಿರ್ದೇಶಕ ಡಾ.ಎನ್.ಕೆ. ವೆಂಕಟರಮಣ ಮೆಚ್ಚುಗೆ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X