ಉಡುಪಿ: ಆ.14ರಂದು ಕಾಂಗ್ರೆಸ್‌ನಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪಾದಯಾತ್ರೆ

ಉಡುಪಿ, ಆ.12: ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಆ14ರಂದು ಅಪರಾಹ್ನ 3ಗಂಟೆಗೆ ಉಡುಪಿ ಕಾಂಗ್ರೆಸ್ ಭವನ ದಿಂದ ಸರ್ವಿಸ್ ಬಸ್ ಸ್ಟ್ಯಾಂಡ್ ಗಾಂಧಿ ಚೌಕದವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.
ಉಡುಪಿ ಕಾಂಗ್ರೆಸ್ ಭವನದಲ್ಲಿ ಜರಗಿದ ಜಿಲ್ಲಾ ಕಾಂಗ್ರೆಸ್ ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಬ್ಲಾಕ್ ಅಧ್ಯಕ್ಷರುಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಪಾದಯಾತ್ರೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು.ಆರ್. ಸಭಾಪತಿ ಭಾಗವಹಿಸಲಿರು ವರು. ಕಾಂಗ್ರೆಸ್ ಭವನದಿಂದ ಆರಂಭಗೊಂಡು ಅಜ್ಜರ ಕಾಡು, ಜೋಡುರಸ್ತೆ- ಕೆ.ಎಂ. ಮಾರ್ಗದ ಮೂಲಕ ಸರ್ವಿಸ್ ನಿಲ್ದಾಣದ ಕ್ಲಾಕ್ ಟವರ್ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮುಖಾಂತರ ಸ್ವಾತಂತ್ರ್ಯ ಹೋರಾಟಗಾರ ರಿಗೆ ನಮನಗಳನ್ನು ಸಲ್ಲಿಸಲಾಗುವುದು ಎಂದರು.
ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಮಂಜುನಾಥ ಪೂಜಾರಿ, ದಿನಕರ್ ಹೇರೂರು, ಸತೀಶ್ ಅಮೀನ್ ಪಡುಕೆರೆ, ನವೀನ್‌ಚಂದ್ರ ಸುವರ್ಣ, ಪ್ರವೀಣ್ ಶೆಟ್ಟಿ, ಸದಾಶಿವ ದೇವಾಡಿಗ, ಹರಿಪ್ರಸಾದ್ ಶೆಟ್ಟಿ, ಪಕ್ಷದ ಮುಖಂಡರಾದ ನೀರೆ ಕೃಷ್ಣ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಬಿ.ಕುಶಲ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹರೀಶ್ ಕಿಣಿ, ಶಬ್ಬೀರ್ ಅಹ್ಮದ್, ದಿವಾಕರ್ ಕುಂದರ್, ಹಬೀಬ್ ಅಲಿ, ಕೀರ್ತಿ ಶೆಟ್ಟಿ, ಯತೀಶ್ ಕರ್ಕೇರಾ, ಸಂಕಪ್ಪ ಎ., ಹರೀಶ್ ಶೆಟ್ಟಿ ಪಾಂಗಾಳ, ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಅಮೃತಾ ಕೃಷ್ಣಮೂರ್ತಿ, ಬಾಲ ಕೃಷ್ಣ ಪೂಜಾರಿ, ಕಿಶೋರ್ ಕುಮಾರ್ ಎರ್ಮಾಳ್, ಡೆರಿಕ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಬಿ.ನರಸಿಂಹ ಮೂರ್ತಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಕೆ.ಅಣ್ಣಯ್ಯ ಶೇರಿಗಾರ್ ವಂದಿಸಿದರು.







