Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೆಹರೂ ಕುಟುಂಬದ ಕೊಡುಗೆಗೆ ಇಡೀ ಬಿಜೆಪಿಯೇ...

ನೆಹರೂ ಕುಟುಂಬದ ಕೊಡುಗೆಗೆ ಇಡೀ ಬಿಜೆಪಿಯೇ ಸಾಟಿಯಿಲ್ಲ: ಡಿ.ಕೆ. ಶಿವಕುಮಾರ್

''ಸಿ.ಟಿ. ರವಿ ಅವರ ಮಾತುಗಳು ಅವರ ಪಕ್ಷದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತಿದೆ''

ವಾರ್ತಾಭಾರತಿವಾರ್ತಾಭಾರತಿ12 Aug 2021 5:07 PM IST
share
ನೆಹರೂ ಕುಟುಂಬದ ಕೊಡುಗೆಗೆ ಇಡೀ ಬಿಜೆಪಿಯೇ ಸಾಟಿಯಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: 'ನೆಹರೂ ಕುಟುಂಬ ಈ ದೇಶಕ್ಕೆ ಮಾಡಿರುವ ತ್ಯಾಗ, ಸೇವೆ, ಅಭಿವೃದ್ಧಿಶೀಲವನ್ನಾಗಿ ಮಾಡಲು ನೀಡಿರುವ ಕೊಡುಗೆಗೆ ಇಡೀ ಬಿಜೆಪಿ ಪಕ್ಷವೇ ಸರಿಸಾಟಿಯಿಲ್ಲ. ಆದರೂ ಅವರ ಹೆಸರಿಗೆ ಮಸಿ ಬಳಿಯಲು ಸಿ.ಟಿ. ರವಿ ಅವರು ಆಡುತ್ತಿರುವ ಮಾತುಗಳು ಬಿಜೆಪಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿಸ ಅವರು, ‘ಸಿ.ಟಿ. ರವಿ ಅವರು ಕೆಲ ದಿನಗಳ ಕಾಲ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿದ್ದರು. ಅವರು ಕೇವಲ ಶಾಸಕರಲ್ಲ, ರಾಷ್ಟ್ರೀಯ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಅವರ ಮಾತುಗಳು ಅವರ ಪಕ್ಷದ ಸಂಸ್ಕೃತಿ ಏನು ಎಂಬುದನ್ನು ಎತ್ತಿ ತೋರಿಸುತ್ತದೆ. ನೆಹರೂ, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಹೆಸರಿಗೆ  ಮಸಿ ಬಳಿದು, ಜನರ ಮನಸ್ಸಿನಲ್ಲಿ ತಪ್ಪು ಭಾವನೆ ಮೂಡಿಸಲು ವಿಫಲ ಯತ್ನ ನಡೆಸುತ್ತಿದ್ದಾರೆ' ಎಂದು ಕಿಡಿಗಾರಿದರು. 

'ಸ್ವಾತಂತ್ರ್ಯ ಪೂರ್ವ ಹಾಗೂ ನಂತರ ದೇಶಕ್ಕೆ ನೆಹರೂ ಕುಟುಂಬ ಮಾಡಿದ ತ್ಯಾಗ, ಬಲಿದಾನ, ಮಾರ್ಗದರ್ಶನಕ್ಕೆ ಇಡೀ ಬಿಜೆಪಿಯೇ ಸರಿಸಾಟಿಯಲ್ಲ. ನೆಹರೂ ಕುಟುಂಬ ದೇಶಕ್ಕೆ ತಮ್ಮ ಆಸ್ತಿಯನ್ನೇ ದಾನ ಮಾಡಿದೆ. ಅದರ ಬಗ್ಗೆ ಬಿಜೆಪಿಯವರಿಗೆ ಗೊತ್ತಿಲ್ಲ. ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ತಮ್ಮ ಪ್ರಾಣವನ್ನೇ ದೇಶಕ್ಕಾಗಿ ಸಮರ್ಪಿಸಿದ್ದಾರೆ. ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಎರಡು ಬಾರಿ ದೇಶದ ಪ್ರಧಾನಿಯಾಗಲು ರಾಷ್ಟ್ರಪತಿಯಾಗಿದ್ದ ಅಬ್ದುಲ್ ಕಲಾಂ ಅವರು ಆಹ್ವಾನ ನೀಡಿದರೂ ದೇಶ ಮುನ್ನಡೆಸಲು ಆರ್ಥಿಕ ತಜ್ಞ ಅಗತ್ಯ ಎಂದು ಮನಮೋಹನ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಸ್ಥಾನವನ್ನೇ ಬಿಟ್ಟುಕೊಟ್ಟರು. ಈ ದೇಶದಲ್ಲಿ ಬಿಜೆಪಿ ನಾಯಕರು ಇಂತಹ ಯಾವುದಾದರೂ ಒಂದು ತ್ಯಾಗ ಮಾಡಿರುವುದನ್ನು ತೋರಿಸಲಿ. ಅದನ್ನು ಬಿಟ್ಟು ಹುಕ್ಕಾಬಾರ್ ಬಗ್ಗೆ ಮಾತನಾಡುತ್ತಾರೆ. ಇಂದಿರಾ ಕ್ಯಾಂಟೀನ್ ಗೆ ಹೆಸರು ಸೂಚಿಸಿದವರು ಯಾರು ಅಂತಾ ಅವರ ಸಚಿವ ಸಂಪುಟದಲ್ಲಿರುವವರನ್ನೇ ಕೇಳಲಿ. ಅಲ್ಲಿರುವವರೇ ಈ ವಿಚಾರವಾಗಿ ಅರ್ಜಿಗೆ ಸಹಿ ಹಾಕಿ, ಶಾಸಕರಿಂದಲೂ ಸಹಿ ಹಾಕಿಸಿದ ನಂತರ ಈ ಹೆಸರು ಇಡಲಾಗಿದೆ' ಎಂದು ತಿಳಿಸಿದರು.

'ನಮಗೂ ತಮಿಳುನಾಡಿಗೂ ರಾಜಕೀಯ ಹೊಂದಾಣಿಕೆ ಇಲ್ಲದಿರಬಹುದು. ಆದರೆ ನಮಗೆ ರಾಜ್ಯದ ಬಗ್ಗೆ ಬದ್ಧತೆ ಇದೆ. ಬಸವರಾಜ ಬೊಮ್ಮಾಯಿ ಅವರು ಮಾಜಿ ನೀರಾವರಿ ಸಚಿವರು ಹಾಗೂ ಹಾಲಿ ಮುಖ್ಯಮಂತ್ರಿಗಳು. ಮೇಕೆದಾಟು ಅಣೆಕಟ್ಟೆ ಕೇವಲ ಕುಡಿಯುವ ನೀರಿನ ಯೋಜನೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ನಾನು ಈ ಹಿಂದೆ ಅದನ್ನೇ ಹೇಳಿದ್ದೆ. ಕುಡಿಯುವ ನೀರಿಗೆ ಯಾರದೇ ಅನುಮತಿ ಕೇಳುವ ಅಗತ್ಯವಿಲ್ಲ. ನಮಗೆ ಎಂಟು ಟಿಎಂಸಿ ನೀರು ಸೇರಬೇಕು ಎಂದು ತೀರ್ಮಾನ ಆಗಿದೆ. ಅದು ನಮ್ಮ ರಾಜ್ಯದ, ನನ್ನ ಕ್ಷೇತ್ರದ ಯೋಜನೆಯಾಗಿದ್ದು, ನಮ್ಮ ಜಿಲ್ಲೆಯಲ್ಲೇ ಒಂದು ಎಕರೆ ನೀರಾವರಿಗೂ ಈ ಯೋಜನೆಯ ನೀರು ಬಳಕೆಯಾಗುವುದಿಲ್ಲ. ಈ ಯೋಜನೆಗೆ ಪರಿಸರ ಇಲಾಖೆ ಅನುಮತಿ  ಮಾತ್ರ ಬೇಕಾಗಿದ್ದು, ಯಾರ ಹಣದ ನೆರವೂ ಬೇಕಾಗಿಲ್ಲ. ಹೀಗಾಗಿ ನಾವು ಬೊಮ್ಮಾಯಿ ಅವರ ಹೇಳಿಕೆಗೆ ಬೆಂಬಲವಾಗಿ ನಿಲ್ಲುತ್ತೇವೆ. ಅವರು ಕೂಡಲೇ ಕೆಲಸ ಮಾಡಲಿ, ಭೂಸ್ವಾಧೀನ ಮಾಡಿಕೊಂಡು, ಗುದ್ದಲಿ ಪೂಜೆ ನೆರವೇರಿಸಲಿ. ಕೆಲಸ ಆರಂಭಿಸಲಿ. ಬೆಂಗಳೂರಿನ 1.25 ಕೋಟಿ ಜನರ ನೀರಿನ ಬವಣೆ ನೀಗಲಿ ಎಂದರು.’

ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯ:

‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 74 ವರ್ಷ ತುಂಬಿ 75ನೇ ವರ್ಷಕ್ಕೆ ಕಾಲಿಡುತ್ತಿದ್ದು, ಅವರಿಗೆ ಶುಭಕೋರಲು ನಮ್ಮೆಲ್ಲಾ ಕಾರ್ಯಾಧ್ಯಕ್ಷರ ಜತೆ ಬಂದಿದ್ದೇನೆ. ಅವರಿಗೆ ಭಗವಂತ ಹೆಚ್ಚಿನ ಶಕ್ತಿ ನೀಡಲಿ. ನಾಡಿನ ಜನತೆ ಕೂಡ ಅವರಿಗೆ ಹೆಚ್ಚಿನ ಪ್ರೀತಿ ನೀಡಲಿ ಎಂದು ಪ್ರಾರ್ಥಿಸಿ ಅವರಿಗೆ ಶುಭಕೋರುತ್ತೇನೆ.’

 -ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X