ಖಾತೆ ಹಂಚಿಕೆ ಬಿಕ್ಕಟ್ಟು: ವರಿಷ್ಠರ ಜತೆ ಚರ್ಚಿಸಿ ತೀರ್ಮಾನ ಸಾಧ್ಯತೆ

ಬೆಂಗಳೂರು, ಆ. 12: ಖಾತೆ ಹಂಚಿಕೆ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್, ಸಿಎಂ ಬಸವರಾಜ ಬೊಮ್ಮಾಯಿ ಮನವೊಲಿಕೆ ಬಳಿಕ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಆ.15ರ ನಂತರ ಅವರನ್ನು ದಿಲ್ಲಿಗೆ ಕರೆದುಕೊಂಡು ಹೋಗಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿ ಬಿಕ್ಕಟ್ಟು ಪರಿಹರಿಸಲು ಬೊಮ್ಮಾಯಿ ತೀರ್ಮಾನಿಸಿದ್ದಾರೆ.
ಕಂದಾಯ ಸಚಿವ ಆರ್.ಅಶೋಕ್ ನಿವಾಸದಲ್ಲಿ ನಡೆದ ಸಂಧಾನ ಸಭೆಯಲ್ಲಿ ಸಚಿವ ಆನಂದ್ ಸಿಂಗ್ ಅವರ ಮುನಿಸು ತಾತ್ಕಾಲಿಕ ಶಮನವಾಗಿದ್ದು, ಖಾತೆ ಬದಲಾವಣೆ ಸಂಬಂಧ ಹೈಕಮಾಂಡ್ ಮಟ್ಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ಆ.15ರ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣದ ಬಳಿಕ ಹೊಸದಿಲ್ಲಿಗೆ ತೆರಳುತ್ತಿದ್ದು, ತಮ್ಮ ಜೊತೆಯಲ್ಲಿ ಆನಂದ್ ಸಿಂಗ್ ಅವರನ್ನೂ ಕರೆದೊಯ್ದು, ವರಿಷ್ಠರನ್ನು ಭೇಟಿ ಮಾಡಿಸಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
Next Story





