ಉಡುಪಿ: ಆ.14ರಂದು ಮೆಗಾ ಲೋಕ್ ಅದಾಲತ್
ಉಡುಪಿ, ಆ.12: ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಆ.14ರ ಶನಿವಾರದಂದು ಬೆಳಗ್ಗೆ 10:30ರಿಂದ ಮೆಗಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದೆ. ರಾಜೀ ಮಾಡಿ ಇತ್ಯರ್ಥಪಡಿಸಬಹುದಾದ 4678 ವಿವಿಧ ಪ್ರಕರಣಗಳನ್ನು ಈಗಾಗಲೇ ಇತ್ಯರ್ಥಕ್ಕೆ ಗುರುತಿಸಲಾಗಿದೆ.
ರಾಜ್ಯ ಕಾನೂನು ಸೇವೆಗಳ ಪ್ರಾಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಸುದೀರ್ಘ ಕಾಲದಿಂದ ಇತ್ಯರ್ಥಗೊಳ್ಳದೇ ಬಾಕಿ ಉಳಿದಿರುವ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಮೆಗಾ ಲೋಕ್ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸಲಾಗುವುದು.
ಕಕ್ಷಿಗಾರರು ಆನ್‌ಲೈನ್/ ವೀಡಿಯೋ ಕಾನ್ಪರೆನ್ಸ್ / ಎಲೆಕ್ಟ್ರಾನಿಕ್ ಮೋಡ್ / ಖುದ್ದಾಗಿ ಹಾಜರಾಗುವ ಮೂಲಕ ಅದಾಲತ್‌ನಲ್ಲಿ ಭಾಗವಹಿಸಿ ವಾದವನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಪ್ರಕರಣ ರಾಜಿಯಾದಲ್ಲಿ ಸಂಪೂರ್ಣ ನ್ಯಾಯಾಲಯದ ಶುಲ್ಕವನ್ನು ಹಿಂದಿರುಗಿಸಲಾಗುವುದು. ತ್ವರಿತ ನ್ಯಾಯ, ಸಮಯ ಹಾಗೂ ಸಂಬಂಧ ಉಳಿಸುವ ನಿಟ್ಟಿನಲ್ಲಿ ಲೋಕ್ ಅದಾಲತ್‌ನ್ನು ಆಯೋಜಿಸಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದಾಗಿದೆ. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ಪ್ರಕರಣ/ವ್ಯಾಜ್ಯವನ್ನು ರಾಜೀ ಮಾಡಿಕೊಳ್ಳಲು ಅವಕಾಶವಿದೆ.
ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವಾ ಪ್ರಾಕಾರ, ಕೊಠಡಿ ಸಂಖ್ಯೆ 5, ನೆಲಮಹಡಿ, ನ್ಯಾಯಾಲಯ ಸಂಕೀರ್ಣ, ಉಡುಪಿ (ದೂ.ಸಂ.:0820-2523355,9480898702) ಇವರನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾೀಶರು ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.





