ಕಾರು ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು
ಮಣಿಪಾಲ, ಆ.12: ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಆ.11ರಂದು ರಾತ್ರಿ ವೇಳೆ ದಶರಥನಗರ ಎಂ.ಎಂ.ಟವರ್ ಬಳಿ ನಡೆದಿದೆ.
ಮೃತರನ್ನು ಬಂಟ್ವಾಳ್ ಅಬ್ದುಲ್ ಅಬ್ಬಾಸ್ ಎಂದು ಗುರುತಿಸಲಾಗಿದೆ. ಮಣಿಪಾಲ ಕಡೆಯಿಂದ ಅಲೆವೂರು ಕಡೆಗೆ ಹೋಗುತ್ತಿದ್ದ ಕಾರು, ಎದುರಿನಿಂದ ಬರುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ತೀವ್ರ ಗಾಯಗೊಂಡ ಬಂಟ್ವಾಳ್ ಅಬ್ದುಲ್ ಅಬ್ಬಾಸ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದರು. ರಾತ್ರಿ ತೀವ್ರವಾಗಿ ಅಸ್ವಸ್ಥಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





