Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ತೆರವಿಗೆ...

ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಆದ್ಯತೆ ಮೇರೆಗೆ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ12 Aug 2021 11:24 PM IST
share
ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಆದ್ಯತೆ ಮೇರೆಗೆ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ,ಆ.12:  ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆರೆಗಳ ಒತ್ತುವರಿ ತೆರವು ಪ್ರಗತಿ ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಈ ಕುರಿತಾದ ಸಮಿತಿಯನ್ನು ರಚಿಸಲಾಗಿದೆ. ಎಲ್ಲಾ ಕೆರೆಗಳ ಸರ್ವೇ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಎಲ್ಲಾ ತಹಶೀಲ್ದಾರ್ ಕ್ರಮ ವಹಿಸಬೇಕು. ಪ್ರತಿ ತಿಂಗಳು ಗುರಿಯನ್ನು ನಿಗದಿಪಡಿಸಿ ಕೆರೆಗಳ ಒತ್ತುವರಿ ತೆರವುಗೊಳಿಸಿ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದರು.

ಕೆರೆಗಳ ಒತ್ತುವರಿ ತೆರವುಗೊಳಿಸಿದ ಬಳಿಕ, ಆ ಕೆರೆಯನ್ನು ಸಂಬಂಧಪಟ್ಟ ಇಲಾಖೆಯ ಸುಪರ್ದಿಗೆ ಒಪ್ಪಿಸಿ, ಇಲಾಖೆಯ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಅಧಿಸೂಚನೆ ಹೊರಡಿಸಬೇಕು. ಮತ್ತೆ ಒತ್ತುವರಿಯಾದರೆ ಆಯಾ ಅಧಿಕಾರಿಯನ್ನು ಹೊಣೆಗಾರರನ್ನಾಗಿಸಿ ಮೊಕದ್ದಮೆ ದಾಖಲಿಸಬೇಕು ಎಂದು  ಸೂಚನೆ ನೀಡಿದರು.

ಯಾವುದೇ ಕಾರಣಕ್ಕೂ ಕೆರೆಯನ್ನು ಒತ್ತುವರಿ ಮಾಡಲು ಅವಕಾಶ ಕಲ್ಪಿಸಬಾರದು. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿಕೊಂಡು ಒತ್ತುವರಿ ತೆರವು ಮತ್ತು ಸಂರಕ್ಷಣೆಗೆ ಕ್ರಿಯಾ ಯೋಜನೆ ರೂಪಿಸಬೇಕು. ಎಚ್ಚರಿಕೆ ಕೊಟ್ಟ ಬಳಿಕವೂ ಒತ್ತುವರಿ ಮುಂದುವರೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಕೆರೆಗಳ ವಿವರ: ಜಿಲ್ಲೆಯಲ್ಲಿ ಒಟ್ಟು 6803 ಕೆರೆಗಳಿದ್ದು, 51368 ಎಕ್ರೆ ಪ್ರದೇಶ ವ್ಯಾಪ್ತಿಯಲ್ಲಿದೆ. ಶಿವಮೊಗ್ಗ ತಾಲೂಕಿನಲ್ಲಿ 896, ಭದ್ರಾವತಿ 427, ತೀರ್ಥಹಳ್ಳಿ 1242, ಸಾಗರ 484, ಸೊರಬ 1204, ಶಿಕಾರಿಪುರ 1271 ಮತ್ತು ಹೊಸನಗರದಲ್ಲಿ 1279 ಕೆರೆಗಳಿವೆ.ಇದುವರೆಗೆ 1373 ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಲಾಗಿದ್ದು, 11,152 ಎಕ್ರೆ ವ್ಯಾಪ್ತಿ ಗುರುತಿಸಲಾಗಿದೆ. ಇನ್ನೂ 5430 ಕೆರೆಗಳ ಸರ್ವೇ ಕಾರ್ಯ ನಡೆಸಬೇಕಾಗಿದ್ದು, 39,801 ಎಕ್ರೆ ಪ್ರದೇಶದಲ್ಲಿದೆ. ಇದುವರೆಗೆ ಸರ್ವೆ ಮಾಡಲಾಗಿರುವ ಕೆರೆಗಳ ಪೈಕಿ 660 ಕೆರೆಗಳಲ್ಲಿ 2284 ಎಕ್ರೆ ಒತ್ತುವರಿ ಗುರುತಿಸಲಾಗಿದೆ. ಇವುಗಳ ಪೈಕಿ 231 ಕೆರೆಗಳಲ್ಲಿ 576 ಎಕ್ರೆ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಇನ್ನೂ 429 ಕೆರೆಗಳ 398 ಎಕ್ರೆ ಒತ್ತುವರಿಯನ್ನು ತೆರವುಗೊಳಿಸಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಹೆಚ್.ಟಿ.ಶೇಖರ್, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಯೋಜನಾ ನಿರ್ದೇಶಕ ಮೂಕಪ್ಪ ಕರಿಭೀಮಣ್ಣನವರ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X